ಬೆಳ್ತಂಗಡಿ : ಕನ್ಯಾಡಿ ಲಾಡ್ಜ್ ನಲ್ಲಿ ಅಕ್ರಮ ಜೂಜಾಟ(ಉಲಾಯಿ-ಪಿದಾಯಿ)ದ ಮೇಲೆ ಪೊಲೀಸ್ ದಾಳಿ – 11 ಜನರ ಬಂಧನ

DivereAdults gambling shoot

ಬೆಳ್ತಂಗಡಿ, ಡಿ. 23 : ಅಕ್ರಮವಾಗಿ ಜೂಜಾಟ(ಉಲಾಯಿ-ಪಿದಾಯಿ) ಆಡುತ್ತಿದ್ದ ಲಾಡ್ಜ್ ಮೇಲೆ ಬೆಳ್ತಂಗಡಿ ವೃತ್ತ ನಿರೀಕ್ಷಕ ರವಿ.ಬಿ.ಎಸ್ ನೇತೃತ್ವದಲ್ಲಿ ಧರ್ಮಸ್ಥಳ ಪೊಲೀಸರು ದಾಳಿ ಮಾಡಿ 11 ಮಂದಿಯನ್ನು ಬಂಧಿಸಿ 13 ಜನರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.

Advertisement

ಕನ್ಯಾಡಿ ಬಳಿಯ ಖಾಸಗಿ ಲಾಡ್ಜ್ ವೊಂದರಲ್ಲಿ ಅಕ್ರಮವಾಗಿ ಜನ ಸೇರಿ ಜೂಜಾಟ(ಉಲಾಯಿ-ಪಿದಾಯಿ) ಆಡುತ್ತಿರುವ ಬಗ್ಗೆ ಬಂದ ಖಚಿತ ಮಾಹಿತಿ ಮೇರೆಗೆ ಡಿ.22 ರಂದು ರಾತ್ರಿ 7:40 ಕ್ಕೆ ಲಾಡ್ಜ್ ಮೇಲೆ ಬೆಳ್ತಂಗಡಿ ವೃತ್ತ ನಿರೀಕ್ಷಕ ರವಿ.ಬಿ.ಎಸ್ ನೇತೃತ್ವದಲ್ಲಿ ಧರ್ಮಸ್ಥಳ ಪೊಲೀಸರು ದಾಳಿ ಮಾಡಿದ್ದಾರೆ. ದಾಳಿ ವೇಳೆ ಜೂಜಾಟ ಆಡುತ್ತಿದ್ದ 11 ಮಂದಿಯನ್ನು ಬಂಧಿಸಿದ್ದು. ಬಂಧಿತರ ಬಳಿ 3 ಲಕ್ಷದ 7 ಸಾವಿರ ರೂಪಾಯಿ ಹಣ, ಜೂಜಾಟಕ್ಕೆ ಬಳಸಿದ ಚೇಯರ್, ಟೇಬಲ್, ಜೂಜಾಟದ ಎಲೆಗಳನ್ನು ವಶಕ್ಕೆ ಪಡೆಯಲಾಗಿದೆ. ಜೂಜಾಟ ಆಡುತ್ತಿದ್ದ ಒಟ್ಟು 13 ಮಂದಿ ವಿರುದ್ಧ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಬೆಳ್ತಂಗಡಿ ಉಪವಿಭಾಗದ ಡಿವೈಎಸ್ಪಿ ರೋಹಿನಿ.ಸಿ.ಕೆ ಮಾರ್ಗದರ್ಶನದಲ್ಲಿ ಬೆಳ್ತಂಗಡಿ ವೃತ್ತ ನಿರೀಕ್ಷಕ ರವಿ.ಬಿ.ಎಸ್ ನೇತೃತ್ವದಲ್ಲಿ ಧರ್ಮಸ್ಥಳ ಸಬ್ ಇನ್ಸ್ಪೆಕ್ಟರ್ ಸಮರ್ಥ ಆರ್ ಗಾಣಿಗೇರ ತಂಡದ ಸಿಬ್ಬಂದಿ ಕಾರ್ಯಾಚರಣೆಯಲ್ಲಿ ಭಾಗವಹಿಸಿದರು.

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಟಾಪ್ ಸುದ್ದಿಗಳು, ರಾಜ್ಯ / ದೇಶ

ಬೆಂಗಳೂರು : ಸಚಿವ ಸ್ಥಾನಕ್ಕಾಗಿ ಶಾಸಕ ಅಶೋಕ್ ಕುಮಾರ್ ರೈ ಸೇರಿದಂತೆ 31 ಶಾಸಕರಿಂದ ಪತ್ರ – ಕೈ ಪಾಳಯದಲ್ಲಿ “ಪತ್ರ ಸ್ಫೋಟ”

ಟಾಪ್ ಸುದ್ದಿಗಳು, ರಾಜ್ಯ / ದೇಶ

ತಮಿಳುನಾಡು : ಎಐಎಡಿಎಂಕೆ ಅಧಿಕಾರಕ್ಕೆ ಬಂದರೆ ಪ್ರತಿ ಕುಟುಂಬಕ್ಕೆ 10,000 ರೂ. ಘೋಷಣೆ !

ವಿದೇಶ

ಅಮೆರಿಕದಲ್ಲಿ ಭಾರಿ ಹಿಮಪಾತ: 5,600 ಕ್ಕೂ ಹೆಚ್ಚು ವಿಮಾನಗಳ ಹಾರಾಟ ರದ್ದು, ಶಾಲೆಗಳಿಗೆ ರಜೆ

⚠️ Contents are protected on this website.