ಇಂದಬೆಟ್ಟು : ಜನಸ್ಪಂದನ ಸಭೆಯಲ್ಲಿ ಶಾಸಕರ ಸೂಚನೆ – ರಸ್ತೆ ಬದಿಯ ಗಿಡಗಂಟಿಗಳ ತೆರವು ಕಾರ್ಯ

ಇಂದಬೆಟ್ಟು, ಡಿ. 15 : ಶಾಸಕ ಹರೀಶ್ ಪೂಂಜಾ ಅವರ ಸೂಚನೆಯಂತೆ ಇಂದಬೆಟ್ಟು ಗುರಿಪಳ್ಳ ಉಜಿರೆ PWD ರಸ್ತೆಯ ಬದಿಯ ಗಿಡಗಂಟಿಗಳ ತೆರವು ಕಾರ್ಯ ನಡೆದಿದೆ. ರಸ್ತೆ ಬದಿಯಲ್ಲಿ ಗಿಡಗಂಟಿಗಳು ಬೆಳೆದು ಸುಗಮ ಸಂಚಾರಕ್ಕೆ ಹಾಗೂ ಪಾದಚಾರಿಗಳಿಗೆ ಬಹಳಷ್ಟು ಸಮಸ್ಯೆಯಾಗುತ್ತಿದ್ದು, ಇದೀಗ ರಸ್ತೆ ಬದಿಯ ಪೊದೆಗಳನ್ನು ತೆರವುಗೊಳಿಸಿ, ಸುಗಮ ಸಂಚಾರಕ್ಕೆ ಅವಕಾಶ ಮಾಡಿಕೊಡಲಾಗಿದೆ.

Advertisement

ಈ ಹಿಂದೆ ಶಾಸಕರಾದ ಶ್ರೀ ಹರೀಶ್ ಪೂಂಜಾ ರವರ ಅಧ್ಯಕ್ಷತೆಯಲ್ಲಿ ನಡೆದ ಇಂದಬೆಟ್ಟು ಜನಸ್ಪಂದನ ಕಾರ್ಯಕ್ರಮದಲ್ಲಿ ರಸ್ತೆ ಬದಿಯ ಗಿಡಗಂಟಿಗಳ ಬಗ್ಗೆ ಗ್ರಾಮಸ್ಥರು ಶಾಸಕರ ಗಮನಕ್ಕೆ ತಂದಿದ್ದರು. ಜನಸ್ಪಂದನಾ ಸಭೆಯಲ್ಲಿ ಶಾಸಕರು ಸಂಬಂಧಪಟ್ಟ ಅಧಿಕಾರಿಗಳಿಗೆ ರಸ್ತೆ ಬದಿಯ ಪೊದೆಗಳನ್ನು ತೆರವುಗೊಳಿಸುವಂತೆ ಸೂಚನೆ ನೀಡಿದ್ದರು. ಇದೀಗ ಗಿಡಗಂಟಿಗಳ ತೆರವು ಕಾರ್ಯಕ್ಕೆ ಸೂಚನೆ ನೀಡಿದ ಶಾಸಕರಿಗೆ ಸ್ಥಳೀಯ ನಾಗರಿಕರು ಕೃತಜ್ಞತೆ ಸಲ್ಲಿಸಿದ್ದಾರೆ.

Advertisement
Advertisement

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಟಾಪ್ ಸುದ್ದಿಗಳು, ರಾಜ್ಯ / ದೇಶ

ಬೆಂಗಳೂರು  : ಮದುವೆಯಾಗುವುದಾಗಿ ನಂಬಿಸಿ ವಂಚನೆ ಪ್ರಕರಣ – ರಾಜಿ ಸಂಧಾನ ವಿಫಲ, ಸೆ. 11ಕ್ಕೆ ಮುಂದಿನ ವಿಚಾರಣೆ

ಟಾಪ್ ಸುದ್ದಿಗಳು, ರಾಜ್ಯ / ದೇಶ

ನವದೆಹಲಿ : ಪ್ರಧಾನಿ ನರೇಂದ್ರ ಮೋದಿಯವರ ವಿದೇಶ ಪ್ರವಾಸಗಳ ವೆಚ್ಚ ಬಹಿರಂಗಪಡಿಸಿದ ವಿದೇಶಾಂಗ ವ್ಯವಹಾರಗಳ ಸಚಿವಾಲಯ !

ಟಾಪ್ ಸುದ್ದಿಗಳು, ರಾಜ್ಯ / ದೇಶ

ಮುಂಬೈ : 2013ರ ಅತ್ಯಾಚಾರ ಪ್ರಕರಣ – ‘ತೆಹಲ್ಕಾ’ದ ಮಾಜಿ ಸಂಪಾದಕ ತರುಣ್ ತೇಜ್‌ಪಾಲ್ ದೋಷಿ ಎಂದ ಕೋರ್ಟ್ !

⚠️ Contents are protected on this website.