ಬೆಳ್ತಂಗಡಿ : ಇಂದಬೆಟ್ಟು ದೇವನಾರಿ ಶ್ರೀ ಅರ್ಧನಾರೀಶ್ವರ ದೇವಸ್ಥಾನದಲ್ಲಿ ಮೇ 5 ರಿಂದ ಮೇ 9ರವರೆಗೆ ವರ್ಷಾವಧಿ ಜಾತ್ರೆ, ಪ್ರತಿಷ್ಠಾ ಮಹೋತ್ಸವ

ಬೆಳ್ತಂಗಡಿ : ಇಂದಬೆಟ್ಟು ದೇವನಾರಿ ಶ್ರೀ ಅರ್ಧನಾರೀಶ್ವರ ದೇವಸ್ಥಾನದಲ್ಲಿ ವರ್ಷಾವಧಿ ಜಾತ್ರೆ, ಪ್ರತಿಷ್ಠಾ ಮಹೋತ್ಸವ ಮೇ 5 ರಿಂದ ಪ್ರಾರಂಭಗೊಂಡಿದೆ.

Advertisement

ಮೇ 5 ರಿಂದ ಮೇ 9ರ ವರೆಗೆ ವರ್ಷಾವಧಿ ಜಾತ್ರೆ, ಪ್ರತಿಷ್ಠಾ ಮಹೋತ್ಸವವು ವಿವಿಧ ವೈದಿಕ, ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ಜರುಗಲಿದೆ. ನೀಲೇಶ್ವರ ಬ್ರಹ್ಮಶ್ರೀ ವೇ.ಮೂ. ಆಲಂಬಾಡಿ ಪದ್ಮನಾಭ ತಂತ್ರಿಗಳ ಘನ ಉಪಸ್ಥಿತಿಯಲ್ಲಿ ಹಾಗೂ ಉಜಿರ ಜನಾರ್ದನ ಸ್ವಾಮಿ ದೇವಸ್ಥಾನದ ಅನುವಂಶಿಕ ಆಡಳಿತ ಮೊಕ್ತಸರರಾದ ಶರತಕೃಷ್ಣ ಪಡೆಟ್ನಾಯ ಅವರ ಮಾರ್ಗದರ್ಶನದಲ್ಲಿ ಶ್ರೀ ಕ್ಷೇತ್ರದಲ್ಲಿ ವೈದಿಕ ಹಾಗೂ ಧಾರ್ಮಿಕ ಕಾರ್ಯಕ್ರಮಗಳು ನೆರವೇರಲಿವೆ.

ಉತ್ಸವದ ಮೊದಲ ದಿನವಾದ ಮೇ 5ರಂದು ಸಂಜೆ ಭಕ್ತಾದಿಗಳಿಂದ ಭಕ್ತಿಪೂರ್ವಕ ಹಸಿರುವಾಣಿ ಹೊರಕಾಣಿಕ’ ಸಮರ್ಪಣೆ ನಡೆಯಿತು. ಬಳಿಕ ತಂತ್ರಿಗಳ ಆಗಮನ, ಪ್ರಾರ್ಥನೆ, ತೋರಣ ಮುಹೂರ್ತದೊಂದಿಗೆ ವಿಧ್ಯುಕ್ತವಾಗಿ ಧ್ವಜಾರೋಹಣ ನೆರವೇರಿಸಲಾಯಿತು. ರಾತ್ರಿ ನಡದ ದೀಪ ಪ್ರಜ್ವಲನಾ ಕಾರ್ಯಕ್ರಮವನ್ನು ಆರೋಗ್ಯ ಕ್ಲಿನಿಕ್‌ನ ಡಾ| ಪ್ರದೀಪ್ ಎ. ಅವರು ಉದ್ಘಾಟಿಸಿ ಚಾಲನೆ ನೀಡಿದರು.

ಧಾರ್ಮಿಕ ಕಾರ್ಯಕ್ರಮಗಳ ನಡುವೆ ಇಂದಬೆಟ್ಟು ಶ್ರೀ ಅರ್ಧನಾರೀಶ್ವರ ಭಜನಾ ತಂಡದಿಂದ ಸುಮಧುರ ಭಜನಾ ಕಾರ್ಯಕ್ರಮ ಜರುಗಿತು. ನಂತರ ದೇವನಾರಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳಿಂದ ವೈವಿಧ್ಯಮಯ ಸಾಂಸ್ಕೃತಿಕ ಕಾರ್ಯಕ್ರಮಗಳು ಪ್ರದರ್ಶನ ಗೊಂಡಿತು.

ಮಹಾಪೂಜೆಯ ನಂತರ ಭಕ್ತಾದಿಗಳಿಗೆ ಅನ್ನಸಂತರ್ಪಣೆ ಹಾಗೂ ಪ್ರಸಾದ ವಿತರಣೆ ಮಾಡಲಾಯಿತು.ಐದು ದಿನಗಳ ಕಾಲ ನಡೆಯಲಿರುವ ಈ ಮಹೋತ್ಸವದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತಾದಿಗಳು ಪಾಲ್ಗೊಂಡು ಶ್ರೀ ದೇವರ ಕೃಪೆಗೆ ಪಾತ್ರರಾಗಬೇಕೆಂದು ದೇವಸ್ಥಾನದ ಸಮಿತಿ ವಿನಂತಿಸಿದೆ.

Advertisement
Advertisement

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಟಾಪ್ ಸುದ್ದಿಗಳು, ರಾಜ್ಯ / ದೇಶ

ನವದೆಹಲಿ : ಪ್ರಶ್ನೆ ಪತ್ರಿಕೆ ಸೋರಿಕೆ ತಡೆ ಕಾನೂನು ತಿದ್ದುಪಡಿ ಮಸೂದೆ ಅಂಗೀಕಾರ

ಟಾಪ್ ಸುದ್ದಿಗಳು, ರಾಜ್ಯ / ದೇಶ

ಬೆಂಗಳೂರು : ಭೀಕರ ರೈಲು ಅಪಘಾತ : ಕ್ರಿಕೆಟ್ ಮೈದಾನಕ್ಕೆ ತೂರಿ ಬಿದ್ದಿದ್ದ ವ್ಯಕ್ತಿಯ ರುಂಡ !

ತಾಲೂಕು, ಬೆಳ್ತಂಗಡಿ

ಉಪ್ಪಿನಂಗಡಿ : ನಿಂತಿದ್ದ ಟಿಪ್ಪರ್ ಹಿಂಬದಿಗೆ ಕಾರು ಢಿಕ್ಕಿ – 4 ವರ್ಷದ ಮಗು ಸೇರಿ ಐವರಿಗೆ ಗಾಯ

⚠️ Contents are protected on this website.