ಇಂದಬೆಟ್ಟು : ಡಾ. ಡಿ. ವೀರೇಂದ್ರ ಹೆಗ್ಗಡೆಯವರ ಶ್ರೇಯೋಭಿವೃದ್ಧಿಗಾಗಿ ಇಂದಬೆಟ್ಟು ಶ್ರೀ ಅರ್ಧನಾರೀಶ್ವರ ದೇವಸ್ಥಾನದಲ್ಲಿ ವಿಶೇಷ ಪ್ರಾರ್ಥನೆ

ಇಂದಬೆಟ್ಟು : ಧರ್ಮಸ್ಥಳದ ಧರ್ಮಾಧಿಕಾರಿ ಪೂಜ್ಯ ಶ್ರೀ ಡಾ. ಡಿ ವೀರೇಂದ್ರ ಹೆಗ್ಗಡೆಯವರ ಜನ್ಮದಿನವು ನವೆಂಬರ್ ತಿಂಗಳ 25ನೇ ತಾರೀಕಿಗೆ ಇರುವುದರಿಂದ ಶ್ರೀ ಮಂಜುನಾಥೇಶ್ವರ ಭಜನಾ ಪರಿಷತ್ತಿನ ರಾಜ್ಯ ಸಂಚಾಲಕರಾದ ಶ್ರೀಯುತ ಸುಬ್ರಮಣ್ಯ ಪ್ರಸಾದ್ ರವರ ಮಾರ್ಗದರ್ಶನದಂತೆ ಬೆಳ್ತಂಗಡಿ ತಾಲೂಕು ಭಜನಾ ಪರಿಷತ್ತು ಮತ್ತು ಭಜನಾ ಪರಿಷತ್ತು ಇಂದಬೆಟ್ಟು ವಲಯ, ಗ್ರಾಮ ಅಭಿವೃದ್ಧಿ ಯೋಜನೆ ಇಂದಬೆಟ್ಟು ವಲಯ ಇವುಗಳ ಸಹಕಾರ ಹಾಗೂ ಭಜನಾ ಪರಿಷತ್ತಿನ ರಾಜ್ಯಾಧ್ಯಕ್ಷರಾದ ಶ್ರೀ ಪಿ ಚಂದ್ರಶೇಖರ ಸಾಲ್ಯಾನ್ ಇವರ ನೇತೃತ್ವದಲ್ಲಿ ಇಂದಬೆಟ್ಟು ಶ್ರೀ ಅರ್ಧನಾರೀಶ್ವರ ದೇವಸ್ಥಾನದಲ್ಲಿ ವಿಶೇಷ ಭಜನೆ ಹಾಗೂ ಪೂಜ್ಯರಿಗೆ ಸುಖ ಶಾಂತಿ ನೆಮ್ಮದಿ ಆರೋಗ್ಯ ಹಾಗೂ ನಿತ್ಯ ನಿರಂತರ ಜನಪರ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲು ಶಕ್ತಿಯನ್ನು ನೀಡುವಂತೆ ಶ್ರೀ ಅರ್ಧನಾರೀಶ್ವರ ದೇವರಿಗೆ ವಿಶೇಷ ಪೂಜೆಯನ್ನು ನಡೆಸಿ ಸಾಮೂಹಿಕವಾಗಿ ಪ್ರಾರ್ಥಿಸಲಾಯಿತು.

Advertisement

ಈ ಸಂದರ್ಭದಲ್ಲಿ ಶ್ರೀ ಮಂಜುನಾಥೇಶ್ವರ ಭಜನಾ ಪರಿಷತ್ತಿನ ರಾಜ್ಯಾಧ್ಯಕ್ಷರಾದ ಶ್ರೀ ಪಿ ಚಂದ್ರಶೇಖರ ಸಾಲ್ಯಾನ್, ಗ್ರಾಮಾಭಿವೃದ್ಧಿ ಯೋಜನೆಯ ಮೇಲ್ವಿಚಾರಕಿ ಶ್ರೀಮತಿ ಉಷಾ, ಭಜನಾ ಪರಿಷತ್ತಿನ ತಾಲೂಕು ಕಾರ್ಯದರ್ಶಿ ಹಾಗೂ ಇಂದಬೆಟ್ಟು ವಲಯ ಕಾರ್ಯದರ್ಶಿ ಶ್ರೀ ಚಂದ್ರಶೇಖರ ಇಂದಬೆಟ್ಟು, ವಲಯಧ್ಯಕ್ಷರಾದ ಶಶಿಧರ ಗೌಡ ಮನ್ನಡ್ಕ ದೇವಸ್ಥಾನದ ವ್ಯವಸ್ಥಾಪನ ಸಮಿತಿಯ ಅಧ್ಯಕ್ಷರಾದ ಲಕ್ಷ್ಮಣ ಗೌಡ ಇರ್ತಿಲ್ಲಾಲ್ ಸದಸ್ಯರಾದ ನಾರಾಯಣ ಹಾಗೂ ಭಜಕ ಬಂಧುಗಳು ಉಪಸ್ಥಿತರಿದ್ದರು.

ಪೂಜ್ಯರ ಹುಟ್ಟುಹಬ್ಬಕ್ಕೆ ಮೊದಲು ಭಜನಾ ಪರಿಷತ್ ಹಾಗೂ ಗ್ರಾಮಭಿವೃದ್ಧಿ ಯೋಜನೆಯ ನೇತೃತ್ವದಲ್ಲಿ ಪೂಜ್ಯರಿಗಾಗಿ ದೇವರಲ್ಲಿ ಪ್ರಾರ್ಥಿಸಿಕೊಳ್ಳುವ ಪ್ರಥಮ ಕಾರ್ಯಕ್ರಮವಾಗಿದ್ದು, ರಾಜ್ಯ ಭಜನಾ ಪರಿಷತ್ತಿನ ನಿರ್ದೇಶನದಂತೆ ಇನ್ನು ಮುಂದಕ್ಕೆ ತಾಲೂಕಿನ ವಿವಿಧ ದೇವಸ್ಥಾನಗಳಲ್ಲಿ ಹಾಗೂ ಭಜನಾ ಮಂಡಳಿಗಳಲ್ಲಿ ಇದೇ ತಿಂಗಳ 24ನೇ ತಾರೀಕಿನವರೆಗೆ ಭಜನೆಯನ್ನು ನಡೆಸಿ ಪೂಜ್ಯರಿಗಾಗಿ ದೇವರಲ್ಲಿ ಪ್ರಾರ್ಥಿಸಿಕೊಳ್ಳುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ಸಂಘಟಕರು ಮಾಹಿತಿ ನೀಡಿದ್ದಾರೆ.

Advertisement
Advertisement

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಟಾಪ್ ಸುದ್ದಿಗಳು, ರಾಜ್ಯ / ದೇಶ

ಬೆಂಗಳೂರು : ಮೋದಿ ಪೋಸ್ಟ್ ನಿರ್ಬಂಧ – ಕ್ಷಮೆಯಾಚಿಸಿದ ಟೆಕ್‌ ದೈತ್ಯ ಮೆಟಾ !

ಟಾಪ್ ಸುದ್ದಿಗಳು, ರಾಜ್ಯ / ದೇಶ

ಹೊಸದೆಹಲಿ : ಸಿಜೆಪಿ ಪ್ರತಿಭಟನೆಯಲ್ಲಿ 2,873 ಅಪರಾಧಿಗಳು – ಫೋಕ್ಸೋ, ಕೊಲೆ ಅಪರಾಧಿಗಳು ಭಾಗಿ !!

ಟಾಪ್ ಸುದ್ದಿಗಳು

ಕೋಝಿಕೋಡ್ : ಮಾದಕ ದ್ರವ್ಯ ವಿರೋಧಿ ಜಾಗೃತಿ ಅಭಿಯಾನಗಳ ಲೀಡರ್ ಗಳಿಂದಲೇ ಮಕ್ಕಳಿಗೆ ಡ್ರಗ್ಸ್ ಸಪ್ಲೈ !!

⚠️ Contents are protected on this website.