‘ಯುದ್ಧ ಸಂಕಷ್ಟದಲ್ಲಿ ಸಿಲುಕಿದ ಕನ್ನಡಿಗರನ್ನ ತಾಯ್ನಾಡಿಗೆ ಕರೆತರಲು ಕೇಂದ್ರ ಸನ್ನದ್ಧ’- ಪ್ರಹ್ಲಾದ್ ಜೋಶಿ

ನವದೆಹಲಿ, ಮಾ. 02 : ಇರಾನ್-ಇಸ್ರೇಲ್ ಯುದ್ಧ ಸನ್ನಿವೇಶದಲ್ಲಿ ಸಂಕಷ್ಟದಲ್ಲಿ ಸಿಲುಕಿದ ಎಲ್ಲಾ ಕನ್ನಡಿಗರನ್ನು ಸುರಕ್ಷಿತವಾಗಿ ತಾಯ್ನಾಡಿಗೆ ಕರೆತರಲು ಕೇಂದ್ರ ಸರ್ಕಾರ ಸನ್ನದ್ಧವಾಗಿದೆ. ಅಲ್ಲಿನ ರಾಯಭಾರಿ ಕಚೇರಿಯ ಉನ್ನತ ಅಧಿಕಾರಿಗಳ ಜೊತೆಗೆ ಮಾತುಕತೆ ನಡೆಸಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹೇಲಿದ್ದಾರೆ.

Advertisement

“ಜಗತ್ತಿನ ಎಲ್ಲೇ ಆಗಲಿ ಕನ್ನಡಿಗರು ಸೇರಿದಂತೆ ಭಾರತೀಯರು ಸಂಕಷ್ಟಕ್ಕೆ ಸಿಲುಕಿದಾಗ ಕೇಂದ್ರ ಸರ್ಕಾರ ಸುರಕ್ಷಿತವಾಗಿ ಕರೆ ತಂದಿದೆ. ಹಿಂದೆ ಯುಕ್ರೇನ್ ಅಲ್ಲಿ ಸಿಲುಕಿದ್ದವರನ್ನು ಮರಳಿ ಕರೆ ತಂದಿದ್ದೇವೆ. ಭಾರತೀಯರು ಎಲ್ಲೇ ಇದ್ದರೂ ಅವರ ಸುರಕ್ಷತೆಗೆ ಕೇಂದ್ರ ಸರ್ಕಾರ ಪ್ರಥಮ ಆದ್ಯತೆ ನೀಡುತ್ತದೆ” ಎಂದು ತಿಳಿಸಿದರು. “ಇರಾನ್-ಇಸ್ರೇಲ್ ಯುದ್ಧದ ಭೀಕರತೆಯಿಂದಾಗಿ ವಿದೇಶಗಳಲ್ಲಿ ನೆಲೆಸಿರುವ ಕನ್ನಡಿಗರು ಸಂಕಷ್ಟ ಎದುರಿಸುತ್ತಿರುವ ಬಗ್ಗೆ ಮಾಹಿತಿಯಿದ್ದು, ಈ ಸಂಬಂಧ ಹಿರಿಯ ಸಚಿವರೊಂದಿಗೆ ತುರ್ತು ಚರ್ಚೆ ನಡೆಸಿದ್ದು, ಎಲ್ಲಾ ಕನ್ನಡಿಗರ ರಕ್ಷಣೆಗೆ ಅಗತ್ಯ ಕ್ರಮ ಕೈಗೊಳ್ಳಲಾಗುತ್ತಿದೆ” ಎಂದರು.

“ಕನ್ನಡಿಗರು ಮಾತ್ರವಲ್ಲ ಭಾರತೀಯರನ್ನೆಲ್ಲ ಸುರಕ್ಷಿತವಾಗಿ ಸ್ವದೇಶಕ್ಕೆ ಕರೆತರಲು ಪ್ರಧಾನಿ ಮೋದಿ ನೇತೃತ್ವದ ಸರ್ಕಾರ ಸರ್ವ ಸನ್ನದ್ಧವಾಗಿದೆ. ಈಗಾಗಲೇ ರಾಯಭಾರಿ ಅಧಿಕಾರಿಗಳೊಂದಿಗೆ ಮಾತುಕತೆ ನಡೆಸಲಾಗಿದೆ. ಯಾರೊಬ್ಬರೂ ಆತಂಕ ಪಡಬೇಕಿಲ್ಲ” ಎಂದು ಭರವಸೆ ನೀಡಿದರು. ಯುದ್ಧಪೀಡಿತ ಪ್ರದೇಶಗಳಲ್ಲಿ ವಿಮಾನ ಸಂಚಾರ ಅಪಾಯಕಾರಿ ಆಗಿದ್ದು, ತಜ್ಞರ ಸಲಹೆ ಪಡೆಯಲಾಗುತ್ತಿದೆ. ಭಾರತೀಯರ ಸುರಕ್ಷತೆಯೇ ಸರ್ಕಾರದ ಮೊದಲ ಆದ್ಯತೆ. ವಿಧಾನಪರಿಷತ್ ಸದಸ್ಯ ಭೋಜೇಗೌಡರು ಸೇರಿದಂತೆ ಸಂಕಷ್ಟದಲ್ಲಿರುವ ಎಲ್ಲಾ ಕನ್ನಡಿಗರ ರಕ್ಷಣೆಗೆ ಶ್ರಮಿಸುತ್ತೇವೆ” ಎಂದು ಮಾಹಿತಿ ನೀಡಿದರು.

Advertisement
Advertisement

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಟಾಪ್ ಸುದ್ದಿಗಳು, ರಾಜ್ಯ / ದೇಶ

ನವದೆಹಲಿ : ಪ್ರಶ್ನೆ ಪತ್ರಿಕೆ ಸೋರಿಕೆ ತಡೆ ಕಾನೂನು ತಿದ್ದುಪಡಿ ಮಸೂದೆ ಅಂಗೀಕಾರ

ಟಾಪ್ ಸುದ್ದಿಗಳು, ರಾಜ್ಯ / ದೇಶ

ಬೆಂಗಳೂರು : ಭೀಕರ ರೈಲು ಅಪಘಾತ : ಕ್ರಿಕೆಟ್ ಮೈದಾನಕ್ಕೆ ತೂರಿ ಬಿದ್ದಿದ್ದ ವ್ಯಕ್ತಿಯ ರುಂಡ !

ತಾಲೂಕು, ಬೆಳ್ತಂಗಡಿ

ಉಪ್ಪಿನಂಗಡಿ : ನಿಂತಿದ್ದ ಟಿಪ್ಪರ್ ಹಿಂಬದಿಗೆ ಕಾರು ಢಿಕ್ಕಿ – 4 ವರ್ಷದ ಮಗು ಸೇರಿ ಐವರಿಗೆ ಗಾಯ

⚠️ Contents are protected on this website.