ಸುರತ್ಕಲ್ : ಅಂಗಡಿಯಲ್ಲಿ ಬಾಲಕನನ್ನು ಕಟ್ಟಿ ಹಾಕಿ ಲೈಂಗಿಕ ಕಿರುಕುಳ – ಆರೋಪಿಯ ಬಂಧನ

ಸುರತ್ಕಲ್, ಡಿ.08 : ಅಪ್ರಾಪ್ತ ವಯಸ್ಸಿನ ಬಾಲಕನಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಲ್ಲಿ ವ್ಯಕ್ತಿಯೋರ್ವನನ್ನು ಪೊಕ್ಸ್ ಕಾಯ್ದೆಯಡಿ ಸುರತ್ಕಲ್ ಠಾಣಾ ಪೊಲೀಸರು ಬಂಧಿಸಿದ್ದಾರೆ. ಚೊಕ್ಕಬೆಟ್ಟು ನಿವಾಸಿ ಅಬ್ದುಲ್ ಇಸ್ಮಾಯೀಲ್ ಬಂಧಿತ ಆರೋಪಿ ಎಂದು ಗುರುತಿಸಲಾಗಿದೆ.

Advertisement

ಚೊಕ್ಕಬೆಟ್ಟು ಪೇಟೆಯಲ್ಲಿ ಹನಿ ಫ್ಯಾಶನ್ ಮತ್ತು ಜನರಲ್ ಸ್ಟೋರ್ ನಡೆಸಿಕೊಂಡಿರುವ ಆರೋಪಿ ಇಸ್ಮಾಯೀಲ್ ತನ್ನ ಅಂಗಡಿಗೆ ಚಾಕಲೇಟು ಖರೀದಿಸಲೆಂದು ಬಂದಿದ್ದ 11 ವರ್ಷದ ಬಾಲಕನ ಕೈ-ಕಾಲನ್ನು ಕಟ್ಟಿ ಅಂಗಡಿಯ ಒಂದು ಕೊಠಡಿಯಲ್ಲಿ ಕೂಡಿಹಾಕಿ ಲೈಂಗಿಕ ಕಿರುಕುಳ ನೀಡಿದ್ದಾನೆ ಎಂದು ಬಾಲಕನ ತಾಯಿ ಸುರತ್ಕಲ್ ಪೊಲೀಸರಿಗೆ ನೀಡಿರುವ ದೂರಿನಲ್ಲಿ ತಿಳಿಸಿದ್ದಾರೆ. ಈ ಸಂಬಂಧ ಕಲಂ 4, 6 ಪೊಕ್ಕೊ ಹಾಗೂ 351(2), 117(2) ಬಿಎನ್‌ಎಸ್ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡಿರುವ ಸುರತ್ಕಲ್ ಪೊಲೀಸ್ ನಿರೀಕ್ಷಕ ಪ್ರಮೋದ್ ಕುಮಾರ್ ನೇತೃತ್ವದ ತಂಡ ಆರೋಪಿಯನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ ಎಂದು ತಿಳಿದು ಬಂದಿದೆ.

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಟಾಪ್ ಸುದ್ದಿಗಳು, ರಾಜ್ಯ / ದೇಶ

ಇಂದು ರಾಜ್ಯದ ಹಲವೆಡೆ ಗುಡುಗು ಸಹಿತ ಲಘು ಮಳೆ- 11 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್

ಟಾಪ್ ಸುದ್ದಿಗಳು, ತಾಲೂಕು, ಮಂಗಳೂರು

ಮಂಗಳೂರು: ಪಾಂಡೇಶ್ವರ ಅಗ್ನಿಶಾಮಕ ಚಾಲಕ ಕಾರ್ತಿಕ್‌ ಗೆ ಮುಖ್ಯಮಂತ್ರಿಗಳ ಚಿನ್ನದ ಪದಕ

ಟಾಪ್ ಸುದ್ದಿಗಳು, ತಾಲೂಕು, ಮಂಗಳೂರು

ಮಹಾರಾಷ್ಟ್ರದಲ್ಲಿ ರಸ್ತೆ ಅಪಘಾತ- ಮಂಗಳೂರು ಮೂಲದ ಯುವ ಟ್ರಕ್ ಚಾಲಕ ಸಾವು

⚠️ Contents are protected on this website.