ಬೆಳ್ತಂಗಡಿ, ಆ. 15 : 80ನೇ ಸ್ವಾತಂತ್ರೋತ್ಸವ ಸಂಭ್ರಮದ ಹಿನ್ನಲೆಯಲ್ಲಿ ಲಾಯಿಲ ಗ್ರಾಮದ ಕನ್ನಾಜೆ ಅಂಗನವಾಡಿ ಮಕ್ಕಳಿಗೆ ಶ್ರೀ ದುರ್ಗಾ ಭಜನಾ ಮಂದಿರ ಅಧ್ಯಕ್ಷರಾದ ಜಗದೀಶ್ ಕನ್ನಾಜೆಯವರು ಸಮವಸ್ತ್ರ ವಿತರಿಸಿದರು ಹಾಗೂ ಅವರ ಸಹಕಾರದಲ್ಲಿ ಮುಳಿಯ ಸಂಸ್ಥೆಯ ವತಿಯಿಂದ ಮಕ್ಕಳಿಗೆ ಬ್ಯಾಗ್ ವಿತರಿಸಲಾಯಿತು.
ಕನ್ನಾಜೆ ಅಂಗನವಾಡಿ ಕೇಂದ್ರದಲ್ಲಿ ನಡೆದ ಧ್ವಜಾರೋಹಣವನ್ನು ನಿವೃತ್ತ ಶಿಕ್ಷಕರಾದ ಸುರೇಶ್ ಮಾಸ್ಟರ್ ಅವರು ನೆರವೇರಿಸಿದರು. ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷರಾದ ರುಕ್ಮಯ ಕನ್ನಾಜೆಯವರು ಸ್ವಾತಂತ್ರ್ಯೋತ್ಸವದ ಸಂದೇಶ ನೀಡಿದರು.

ಶ್ರೀ ದುರ್ಗಾ ಭಜನಾ ಮಂದಿರ ಅಧ್ಯಕ್ಷರಾದ ಜಗದೀಶ್ ಕನ್ನಾಜೆಯವರ ಸೇವಾಕಾರ್ಯಕ್ಕೆ ಸ್ಥಳೀಯರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ಮಾಜಿ ಸದಸ್ಯರಾದ ಚಿದಾನಂದ ಶೆಟ್ಟಿ, ಅಂಗನವಾಡಿ ಕೇಂದ್ರದ ಶಿಕ್ಷಕಿ, ಸಿಬ್ಬಂದಿಗಳು ಹಾಗೂ ಮಕ್ಕಳ ಪೋಷಕರು ಮತ್ತು ದೇಶಭಕ್ತರು ಉಪಸ್ಥಿತರಿದ್ದರು.




