ಜೈಪುರ : ಮಸೀದಿಯ ಅತಿಕ್ರಮಣ ತೆರವು ಕಾರ್ಯಾಚರಣೆ – ಕಲ್ಲು ತೂರಾಟ ನಡೆಸಿದ ಗುಂಪು

ಜೈಪುರ, ಡಿ. 26 : ಮಸೀದಿಯ ಹೊರಗೆ ಶುಕ್ರವಾರ ಬೆಳಗ್ಗೆ ರಸ್ತೆಯ ಉದ್ದಕ್ಕೂ ನಿರ್ಮಿಸಲಾದ ಕಬ್ಬಿಣದ ಬೇಲಿಗಳನ್ನು ತೆಗೆದುಹಾಕುತ್ತಿದ್ದಾಗ ಗುಂಪೊಂದು ಕಲ್ಲು ತೂರಾಟ ನಡೆಸಿದ್ದು ನಾಲ್ವರು ಪೊಲೀಸರು ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದೆ. ಜೈಪುರದಿಂದ 40 ಕಿಲೋಮೀಟರ್ ದೂರದಲ್ಲಿರುವ ಜೋಮು ಪಟ್ಟಣದ ಬಸ್ ನಿಲ್ದಾಣ ಪ್ರದೇಶದಲ್ಲಿ ಬಳಿ ಬೆಳಗಿನ ಜಾವ 3 ಗಂಟೆ ಸುಮಾರಿಗೆ ಈ ಘಟನೆ ಸಂಭವಿಸಿದೆನ್ನಲಾಗಿದೆ.

Advertisement

ರಸ್ತೆಗೆ ಅತಿಕ್ರಮಣ ಮಾಡಿದ ಕಬ್ಬಿಣದ ಬೇಲಿಗಳನ್ನು ಪೊಲೀಸರು ತೆಗೆದುಹಾಕಲು ಪ್ರಯತ್ನಿಸಿದಾಗ ಉದ್ವಿಗ್ನತೆ ಉಂಟಾಗಿದೆ. ಗುಂಪನ್ನು ಚದುರಿಸಲು ಪೊಲೀಸರು ಅಶ್ರುವಾಯು ಶೆಲ್‌ಗಳನ್ನು ಮತ್ತು ಬಲಪ್ರಯೋಗವನ್ನು ಮಾಡಬೇಕಾಯಿತು ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಸ್ಥಳಕ್ಕೆ ಹೆಚ್ಚುವರಿ ಪೊಲೀಸರನ್ನು ಕರೆಸಿಕೊಳ್ಳಲಾಗಿದ್ದು, ಬಿಗಿ ಬಂದೋಬಸ್ತ್ ಏರ್ಪಡಿಸಲಾಗಿದೆ.

ಪೊಲೀಸರ ಪ್ರಕಾರ, ಗುರುವಾರ ಸಂಜೆ ಮಸೀದಿಯ ಹೊರಗಿನ ರಸ್ತೆ ಪ್ರದೇಶದಲ್ಲಿ ಅತಿಕ್ರಮಣ ತೆರವು ಮಾಡುವ ಕುರಿತು ಆಡಳಿತ ಮತ್ತು ಸಮುದಾಯದ ಸದಸ್ಯರ ನಡುವೆ ಮಾತುಕತೆ ನಡೆಸಲಾಗಿತ್ತು. ಸಮುದಾಯದ ಸದಸ್ಯರು ಅವುಗಳನ್ನು ತಾವಾಗಿಯೇ ತೆಗೆದುಹಾಕಲು ಒಪ್ಪಿಕೊಂಡಿದ್ದರು ಎಂದು ಅಧಿಕಾರಿಗಳು ಹೇಳಿದ್ದಾರೆ.

Advertisement
Advertisement

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ತಾಲೂಕು, ಬೆಳ್ತಂಗಡಿ

ಬೆಳ್ತಂಗಡಿ : ಕರ್ನಾಟಕ ಸ್ಟೇಟ್ ಟೈಲರ್ಸ್ ಅಸೋಸಿಯೇಶನ್ (ರಿ.) ಕ್ಷೇತ್ರ ಸಮಿತಿ ಬೆಳ್ತಂಗಡಿ ವತಿಯಿಂದ “ಆಟಿದ ಕಮ್ಮೆನ ಬೊಕ್ಕಗೊಬ್ಬು”

ಟಾಪ್ ಸುದ್ದಿಗಳು, ವಿದೇಶ

ಟೋಕಿಯೋ : ಜಪಾನ್ ನಲ್ಲಿ 7.1 ತೀವ್ರತೆಯ ಪ್ರಬಲ ಭೂಕಂಪ – ಭೀಕರ ಸುನಾಮಿ ಎಚ್ಚರಿಕೆ !

ಟಾಪ್ ಸುದ್ದಿಗಳು, ತಾಲೂಕು, ಮಂಗಳೂರು

ಮಂಗಳೂರು : ಖಾಸಗಿ ಬಸ್ – ಬೈಕ್ ಮಧ್ಯೆ ಅಪಘಾತ; ಪತಿ ಸಾವು, ಪತ್ನಿಗೆ ಗಂಭೀರ

⚠️ Contents are protected on this website.