ಹೊಟ್ಟೆನೋವಿನಿಂದ ಆಸ್ಪತ್ರೆಗೆ ದಾಖಲಾದ ಸ್ಟಾರ್ ಬ್ಯಾಟ್ಸ್‌ಮನ್ ಯಶಸ್ವಿ ಜೈಸ್ವಾಲ್

ಮುಂಬೈ, ಡಿ. 18 : ಟೀಂ ಇಂಡಿಯಾದ ಸ್ಟಾರ್ ಬ್ಯಾಟ್ಸ್‌ಮನ್ ಯಶಸ್ವಿ ಜೈಸ್ವಾಲ್ ತೀವ್ರ ಅಸ್ವಸ್ಥತೆಯಿಂದ ಪಿಂಪ್ರಿ-ಚಿಂಚ್ವಾಡ್ ಆದಿತ್ಯ ಬಿರ್ಲಾ ಆಸ್ಪತ್ರೆಗೆ ದಾಖಲಾಗಿದ್ದಾರೆ. ಜೈಸ್ವಾಲ್ ಸೈಯದ್ ಮುಷ್ತಾಕ್ ಅಲಿ ಟಿ20 ಟೂರ್ನಿಯಲ್ಲಿ ಭಾಗವಹಿಸಿದ್ದಾರೆ. ಪಂದ್ಯ ಮುಗಿದ ಬಳಿಕ ಜೈಸ್ವಾಲ್ಗೆ ಹೊಟ್ಟೆ ನೋವು ತೀವ್ರಗೊಂಡಿತ್ತು, ತಕ್ಷಣ ವೈದ್ಯಕೀಯ ಪರಿಶೀಲನೆಗಾಗಿ ಆಸ್ಪತ್ರೆಗೆ ಕರೆದೊಯ್ಯಲಾಯಿತು ಎಂದು ತಿಳಿದು ಬಂದಿದೆ. ಈ ಬಗ್ಗೆ ತಮ್ಮ ಎಕ್ಸ್ ಖಾತೆಯಲ್ಲಿ ಕೂಡಾ ಜೈಸ್ವಾಲ್ ಮಾಹಿತಿ ಹಂಚಿಕೊಂಡಿದ್ದಾರೆ.

Advertisement

ಸಿಟಿ ಸ್ಕ್ಯಾನ್ ಮತ್ತು ಅಲ್ಟ್ರಾಸೌಂಡ್ ನಂತರ ವೈದ್ಯರು ಜೈಸ್ವಾಲ್ಗೆ ಸಾಕಷ್ಟು ವಿಶ್ರಾಂತಿ ಪಡೆಯಲು ಸೂಚಿಸಿದ್ದಾರೆ. ಅವರನ್ನು ಇಂಟ್ರಾವೆನಸ್ ಔಷಧ ನೀಡಿ ಚಿಕಿತ್ಸೆ ಮಾಡಲಾಗಿದೆ. ಪ್ರಸ್ತುತ ಅವರು ಯಾವುದೇ ಕ್ರಿಕೆಟ್ ಪಂದ್ಯಗಳಲ್ಲಿ ಭಾಗವಹಿಸಲಾರರು ಎಂದು ಹೇಳಲಾಗಿದೆ. ಆದರೆ, ಐಪಿಎಲ್‌ನಲ್ಲಿ ಕಣಕ್ಕಿಳಿಯಲಿದ್ದಾರೆ. ಕಳೆದ ಕೆಲವು ವಾರಗಳಿಂದ ಅತ್ಯುತ್ತಮ ಫಾರ್ಮ್‌ನಲ್ಲಿರುವ ಜೈಸ್ವಾಲ್, ಸೈಯದ್ ಮುಷ್ತಾಕ್ ಅಲಿ ಟ್ರೋಫಿಯ ಮೂರು ಪಂದ್ಯಗಳಲ್ಲಿ 48.33 ಸರಾಸರಿ ಮತ್ತು 168.6 ಸ್ಟ್ರೈಕ್ ರೇಟ್‌ನಲ್ಲಿ 145 ರನ್ ಗಳಿಸಿದ್ದಾರೆ. ಇದಕ್ಕೂ ಮುನ್ನ, ದಕ್ಷಿಣ ಆಫ್ರಿಕಾ ವಿರುದ್ಧದ ಏಕದಿನ ಸರಣಿಯಲ್ಲಿ ಅವರು ಮೂರು ಪಂದ್ಯಗಳಲ್ಲಿ 78ರ ಸರಾಸರಿಯಲ್ಲಿ 156 ರನ್ ಗಳಿಸಿದ್ದರು. ಈ ಅವಧಿಯಲ್ಲಿ ಅವರು ತಮ್ಮ ಮೊದಲ ಏಕದಿನ ಶತಕವನ್ನೂ ಬಾರಿಸಿದ್ದರು.

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ತಾಲೂಕು, ಮಂಗಳೂರು

ಮಂಗಳೂರು : ಲೈಟ್ ಕಂಬ ಮುರಿದು ಮೈಮೇಲೆ ಬಿದ್ದು ಮೀನು ಕಾರ್ಮಿಕ ಸಾವು

ಟಾಪ್ ಸುದ್ದಿಗಳು, ರಾಜ್ಯ / ದೇಶ

ಕಲ್ಲಂಗಡಿ, ಐಸ್ ಕ್ರೀಂ ತಿನ್ನುವ ಮುನ್ನ ಹುಷಾರ್‌ – ಆರೋಗ್ಯ ಇಲಾಖೆ ಎಚ್ಚರಿಕೆ !

ಟಾಪ್ ಸುದ್ದಿಗಳು, ತಾಲೂಕು, ಬೆಳ್ತಂಗಡಿ

ಉಜಿರೆ : ಮಾರ್ಚ್ 3ರಿಂದ ಶ್ರೀ ಜನಾರ್ದನ ದೇವಸ್ಥಾನದ ಬ್ರಹ್ಮಕಲಶೋತ್ಸವ, ವಿಜಯಗೋಪುರ ಲೋಕಾರ್ಪಣೆ, ನೂತನಬ್ರಹ್ಮರಥ, ಪುಷ್ಪರಥ ಸಮರ್ಪಣೆ – ಶ್ರೀ ಶರತ್ ಕೃಷ್ಣಪಡ್ವೆಟ್ನಾಯ

⚠️ Contents are protected on this website.