ಬೆಳ್ತಂಗಡಿ : ಕೋಮು ಪ್ರಚೋದನಕಾರಿ ಪೋಸ್ಟ್ ಪ್ರಕರಣ – ಯುವತಿಗೆ ಜಾಮೀನು ಮಂಜೂರು

ಬೆಳ್ತಂಗಡಿ, ಮಾ. 20 : ಸಾಮಾಜಿಕ ಜಾಲತಾಣದಲ್ಲಿ ಕೋಮು ಪ್ರಚೋದನಕಾರಿ ಸಂದೇಶವೊಂದನ್ನು ಹಂಚಿಕೊಂಡ ಪ್ರಕರಣದಲ್ಲಿ ಕರಂಬಾರು ನಿವಾಸಿ ಯುವತಿಯೋರ್ವಳನ್ನು ಪೊಲೀಸರು ಬಂಧಿಸಿ, ನ್ಯಾಯಾಲಯಕ್ಕೆ ಹಾಜರುಪಡಿಸಿದ್ದರು. ಯುವತಿಗೆ ಜಾಮೀನು ಮಂಜೂರುಗೊಂಡಿದೆ ಎಂದು ತಿಳಿದುಬಂದಿದೆ.

Advertisement

ಸಾಮಾಜಿಕ ಜಾಲತಾಣದಲ್ಲಿ ಕೋಮು ಪ್ರಚೋದನೆ ಮಾಡುವಂತಹ ಪೋಸ್ಟ್ ಗಳನ್ನು 353 (1), 353(2), 61 (2), 55 ಬಿ.ಎನ್.ಎಸ್.2023 ರಂತೆ ದಾಖಲಾದ ಪ್ರಕರಣದಲ್ಲಿ ಬೆಳ್ತಂಗಡಿ ತಾಲೂಕಿನ ಕರಂಬಾರು ನಿವಾಸಿಯಾಗಿರುವ ಯುವತಿಯೊಬ್ಬಳು ಹಂಚಿಕೊಂಡ ಬಗ್ಗೆ ತನಿಖೆಯಲ್ಲಿ ಕಂಡು ಬಂದಿರುವ ಬಗ್ಗೆ, ಮಾ. 19 ರಂದು ಆಕೆಯನ್ನು ಬಂಧಿಸಿ, ಯುವತಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿತ್ತು.

ನ್ಯಾಯಾದೀಶರು ಯುವತಿಗೆ ಮಧ್ಯಂತರ ಜಾಮೀನು ಮಂಜೂರು ಮಾಡಿ ಆದೇಶಿಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಮನವಿಯಂತೆ ಜಾಮೀನು ಪಡೆಯುವಲ್ಲಿ ವಕೀಲರಾದ ಅಜಯ್ ಸುವರ್ಣ, ಸಂತೋಷ್ ಶೆಟ್ಟಿ ಸಹಕರಿಸಿದ್ದಾರೆ.

Advertisement
Advertisement

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಟಾಪ್ ಸುದ್ದಿಗಳು, ರಾಜ್ಯ / ದೇಶ

ನವದೆಹಲಿ : ಪ್ರಶ್ನೆ ಪತ್ರಿಕೆ ಸೋರಿಕೆ ತಡೆ ಕಾನೂನು ತಿದ್ದುಪಡಿ ಮಸೂದೆ ಅಂಗೀಕಾರ

ಟಾಪ್ ಸುದ್ದಿಗಳು, ರಾಜ್ಯ / ದೇಶ

ಬೆಂಗಳೂರು : ಭೀಕರ ರೈಲು ಅಪಘಾತ : ಕ್ರಿಕೆಟ್ ಮೈದಾನಕ್ಕೆ ತೂರಿ ಬಿದ್ದಿದ್ದ ವ್ಯಕ್ತಿಯ ರುಂಡ !

ತಾಲೂಕು, ಬೆಳ್ತಂಗಡಿ

ಉಪ್ಪಿನಂಗಡಿ : ನಿಂತಿದ್ದ ಟಿಪ್ಪರ್ ಹಿಂಬದಿಗೆ ಕಾರು ಢಿಕ್ಕಿ – 4 ವರ್ಷದ ಮಗು ಸೇರಿ ಐವರಿಗೆ ಗಾಯ

⚠️ Contents are protected on this website.