ಬೆಳ್ತಂಗಡಿ : ನೆರಿಯ, ಪುದುವೆಟ್ಟು, ಮುಂಡಾಜೆ, ಕಲ್ಮಂಜ ಪಂಚಾಯತ್ ಮಟ್ಟದ ಜನಸ್ಪಂದನ ಕಾರ್ಯಕ್ರಮ

ಬೆಳ್ತಂಗಡಿ : ಕಳೆದ ಬಿಜೆಪಿ ಅವಧಿಯಲ್ಲಿ 13  ಕೋಟಿ ಅನುದಾನವನ್ನು ಕಲ್ಮಂಜ ಪಂಚಾಯತ್ ವ್ಯಾಪ್ತಿಯ ಅಭಿವೃದ್ಧಿ ಕೆಲಸಕ್ಕೆ ನೀಡಿದ್ದೇನೆ. ಈ ಬಾರಿ ಕಾಂಗ್ರೆಸ್ ಸರ್ಕಾರ ಬಂದ ನಂತರ ಗ್ರಾಮದ ಅಭಿವೃದ್ಧಿಗೆ ಅನುದಾನ ನೀಡುತ್ತಿಲ್ಲ. ಗ್ರಾಮೀಣ ಮಟ್ಟದ ಸಮಸ್ಯೆಗಳನ್ನು ತಾಲೂಕು ಮಟ್ಟದ ಅಧಿಕಾರಿಗಳು ಜನರ ಬಳಿಗೆ ಬಂದು ನಿರ್ವಹಿಸುವ ಕೆಲಸವನ್ನು ಮಾಡುತ್ತಿದ್ದೇವೆ. 17ನೇ ಜನಸ್ಪಂದನ ಕಾರ್ಯಕ್ರಮವನ್ನು ಪೂರ್ಣಗೊಳಿಸಿದ್ದೇನೆ, ರಾಜ್ಯದಲ್ಲೇ ಮೊದಲ ಬಾರಿಗೆ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದಲ್ಲಿ ಜನಸ್ಪಂದನ ಕಾರ್ಯಕ್ರಮ ಮಾಡುತ್ತಿದ್ದೇವೆ ಎಂದು ಶಾಸಕ ಹರೀಶ್ ಪೂಂಜ ಹೇಳಿದರು. ಅವರು ನ.29 ರಂದು ನೆರಿಯ, ಪುದುವೆಟ್ಟು, ಮುಂಡಾಜೆ, ಹಾಗೂ ಕಲ್ಮಂಜ ಈ ಎಲ್ಲಾ ಪಂಚಾಯತ್ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದ್ದ  ಗ್ರಾಮ ಪಂಚಾಯತ್ ಮಟ್ಟದ ಜನಸ್ಪಂದನ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಗ್ರಾಮದಲ್ಲಿ ಇನ್ನೂ ಕೂಡ ಸಮರ್ಪಕ ಸ್ಮಶಾನ ಇಲ್ಲದೇ ಸಾರ್ವಜನಿಕರಿಗೆ ತೊಂದರೆಯಾಗುತಿದ್ದು, ಗ್ರಾಮ ಪಂಚಾಯತ್ ಹಾಗೂ ಅಧಿಕಾರಿಗಳಲ್ಲಿ ಈ ಬಗ್ಗೆ ಪ್ರಶ್ನಿಸಿದಾಗ ಸ್ಪಂದಿಸುತ್ತಿಲ್ಲ, ಎಂದು ಗ್ರಾಮಸ್ಥರು ಆಕ್ರೋಶ ಹೊರ ಹಾಕಿದ ಘಟನೆ ನೆರಿಯದಲ್ಲಿ ನಡೆಯಿತು.

ಮಕ್ಕಳಿಗೆ ಸರಿಯಾದ ಶಿಕ್ಷಣ ಸಿಗಬೇಕಾದರೆ ಗ್ರಾಮಕ್ಕೆ ಒಂದು ಸರ್ಕಾರಿ ಶಾಲೆ ಬೇಕು, ಒಂದು ಶಾಲೆಯ ಅಭಿವೃದ್ಧಿಯ ದೃಷ್ಟಿಯಿಂದ ನಾನೂ ನಿಮ್ಮ ಜೊತೆ ಇದ್ದೇನೆ, ಎಂದು ಮುಂಡಾಜೆಯ ಜನಸ್ಪಂದನ ಕಾರ್ಯಕ್ರಮದಲ್ಲಿ ಹೇಳಿದರು.

ಪುದುವೆಟ್ಟು ಜನಸ್ಪಂದನ ಕಾರ್ಯಕ್ರಮದಲ್ಲಿ ಸಾರ್ವಜನಿಕರು ಮಾತನಾಡಿ ಹೊಸ ಪಡಿತರ ಚೀಟಿಗೆ ಅರ್ಜಿ ಪ್ರಾರಂಭ ಆಗಿಲ್ಲ ಇದರಿಂದ ತುಂಬಾ ಸಮಸ್ಯೆಯಾಗುತ್ತಿದೆ ಎಂದಾಗ ಸಂಬಂಧಪಟ್ಟ ಇಲಾಖಾಧಿಕಾರಿ ಮಾತನಾಡಿ ಹೊಸ ಪಡಿತರ ಚೀಟಿಗೆ ಅರ್ಜಿಗಳ ಸಲ್ಲಿಕೆಗೆ 3 ವರ್ಷದಿಂದ ಆಗುತ್ತಿಲ್ಲ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯಲು ಬೇಕಾದಲ್ಲಿ ಅಗತ್ಯ ದಾಖಲೆ ಕೊಟ್ಟು ಹೊಸ ಪಡಿತರ ಚೀಟಿ ಪಡೆದುಕೊಳ್ಳಬಹುದು ಎಂದರು.

ಈ ಸಂಧರ್ಭದಲ್ಲಿ ಶಾಸಕ ಹರೀಶ್ ಪೂಂಜ,  ನೆರಿಯ ಗ್ರಾ ಪಂ ಅಧ್ಯಕ್ಷೆ ವಸಂತಿ, ಕಲ್ಮ೦ಜ ಅಧ್ಯಕ್ಷೆ ವಿಮಲಾ, ಮುಂಡಾಜೆ ಅಧ್ಯಕ್ಷ ಗಣೇಶ್ ಬಂಗೇರ, ಪುದುವೆಟ್ಟು ಅಧ್ಯಕ್ಷ ಪೂರ್ಣಕ್ಷ,  ತಹಶೀಲ್ದಾರ್ ಪೃಥ್ವಿ ಸಾನಿಕಂ, ಕಾರ್ಯನಿರ್ವಹಣಾಧಿಕಾರಿ ಭವಾನಿ ಶಂಕರ್, ಇಲಾಖೆ ಅಧಿಕಾರಿಗಳು, ಪಂಚಾಯತ್ ಅಭಿವೃದ್ಧಿ ಅಧಿಕಾರಿ, ಕಾರ್ಯದರ್ಶಿ, ಪಂಚಾಯತ್ ಉಪಾಧ್ಯಕ್ಷರು, ಸದಸ್ಯರು, ಗ್ರಾಮಸ್ಥರು ಉಪಸ್ಥಿತರಿದ್ದರು.

Advertisement

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಟಾಪ್ ಸುದ್ದಿಗಳು, ರಾಜ್ಯ / ದೇಶ

ಬೆಂಗಳೂರು : ಸಚಿವ ಸ್ಥಾನಕ್ಕಾಗಿ ಶಾಸಕ ಅಶೋಕ್ ಕುಮಾರ್ ರೈ ಸೇರಿದಂತೆ 31 ಶಾಸಕರಿಂದ ಪತ್ರ – ಕೈ ಪಾಳಯದಲ್ಲಿ “ಪತ್ರ ಸ್ಫೋಟ”

ಟಾಪ್ ಸುದ್ದಿಗಳು, ರಾಜ್ಯ / ದೇಶ

ತಮಿಳುನಾಡು : ಎಐಎಡಿಎಂಕೆ ಅಧಿಕಾರಕ್ಕೆ ಬಂದರೆ ಪ್ರತಿ ಕುಟುಂಬಕ್ಕೆ 10,000 ರೂ. ಘೋಷಣೆ !

ವಿದೇಶ

ಅಮೆರಿಕದಲ್ಲಿ ಭಾರಿ ಹಿಮಪಾತ: 5,600 ಕ್ಕೂ ಹೆಚ್ಚು ವಿಮಾನಗಳ ಹಾರಾಟ ರದ್ದು, ಶಾಲೆಗಳಿಗೆ ರಜೆ

⚠️ Contents are protected on this website.