ಹೊಸದೆಹಲಿ : ಸಿಜೆಪಿ ಪ್ರತಿಭಟನೆಯಲ್ಲಿ 2,873 ಅಪರಾಧಿಗಳು – ಫೋಕ್ಸೋ, ಕೊಲೆ ಅಪರಾಧಿಗಳು ಭಾಗಿ !!

ಹೊಸದೆಹಲಿ, ಜು. 28 : ದೇಶದಾದ್ಯಂತ ತೀವ್ರ ಚರ್ಚೆಗೆ ಗುರಿಯಾಗಿರುವ ದೆಹಲಿಯ ಜಂತರ್ ಮಂತರ್‌ನಲ್ಲಿ ಸಿಜೆಪಿ (CJP) ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಸಾವಿರಾರು ಸಂಖ್ಯೆಯಲ್ಲಿ ಅಪರಾಧಿಗಳು ಭಾಗಿಯಾಗಿರುವ ಆತಂಕಕಾರಿ ವಿಚಾರ ಬಯಲಾಗಿದೆ.

Advertisement

ಸಿಜೆಪಿ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಹಿಂಸಾಚಾರ ಹಾಗೂ ಘರ್ಷಣೆಗಳು ನಡೆದ ಹಿನ್ನೆಲೆಯಲ್ಲಿ, ದೆಹಲಿ ಪೊಲೀಸರು ನೂರಾರು ಜಿಬಿ (GB) ತಂತ್ರಜ್ಞಾನ ಆಧಾರಿತ ಸಿಸಿಟಿವಿ (CCTV) ದೃಶ್ಯಾವಳಿಗಳನ್ನು ಪರಿಶೀಲಿಸಿ 2,873 ಅಪರಾಧ ಹಿನ್ನೆಲೆಯುಳ್ಳ ವ್ಯಕ್ತಿಗಳನ್ನು ಗುರುತಿಸಿದ್ದಾರೆ.

ಸಿಇಟಿ ಪರೀಕ್ಷಾ ಪ್ರಶ್ನೆಪತ್ರಿಕೆ ಸೋರಿಕೆ ಆರೋಪಕ್ಕೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹಿಸಿ ಈ ಪ್ರತಿಭಟನೆಗಳನ್ನು ನಡೆಸಲಾಗಿತ್ತು.

ಪೊಲೀಸರ ಮೂಲಗಳ ಪ್ರಕಾರ, ಮುಖ ಗುರುತಿಸುವ ತಂತ್ರಜ್ಞಾನವನ್ನು (Facial Recognition System) ಬಳಸಿ ಪರಿಶೀಲಿಸಲಾದ ಅಪರಾಧಿಗಳಲ್ಲಿ 989 ಜನರು ಕೊಲೆ, ಅತ್ಯಾಚಾರ, ಅಪಹರಣ, ದರೋಡೆ, ಶಸ್ತ್ರಾಸ್ತ್ರ ಕಾಯ್ದೆ ಹಾಗೂ ಪೋಕೋ (POCSO) ಕಾಯ್ದೆಯಂತಹ ಗಂಭೀರ ಸ್ವರೂಪದ ಅಪರಾಧ ಪ್ರಕರಣಗಳಲ್ಲಿ ಭಾಗಿಯಾದವರಾಗಿದ್ದಾರೆ. ಇವರಲ್ಲಿ 101 ಜನರು ಕೊಲೆ ಪ್ರಕರಣದ ಆರೋಪಿಗಳಾಗಿದ್ದು, 62 ಜನರು ಕೊಲೆ ಯತ್ನ, 284 ಜನರು ದರೋಡೆ, 61 ಜನರು ಅತ್ಯಾಚಾರ, 25 ಜನರು ಲೈಂಗಿಕ ದೌರ್ಜನ್ಯ, 6 ಜನರು ಪೋಕೋ ಕಾಯ್ದೆ, 229 ಜನರು ಶಸ್ತ್ರಾಸ್ತ್ರ ಕಾಯ್ದೆ ಹಾಗೂ 19 ಜನರು ಅಪಹರಣ ಪ್ರಕರಣಗಳಲ್ಲಿ ಭಾಗಿಯಾದ ದಾಖಲೆ ಹೊಂದಿದ್ದಾರೆ.

ಗುರುತಿಸಲಾದವರಲ್ಲಿ ಹಲವರು ಹಳೆಯ ಅಪರಾಧಿಗಳಾಗಿದ್ದು, 101 ಕೊಲೆ ಆರೋಪಿಗಳ ಪೈಕಿ 42 ಜನರ ಮೇಲೆ 2 ಅಥವಾ ಹೆಚ್ಚಿನ ಪ್ರಕರಣಗಳು ಹಾಗೂ 12 ಜನರ ಮೇಲೆ 10 ಕ್ಕೂ ಹೆಚ್ಚು ಪ್ರಕರಣಗಳು ದಾಖಲಾಗಿವೆ.
ಜುಲೈ 20 ಮತ್ತು ಜುಲೈ 22 ರಂದು ಪ್ರತಿಭಟನಾಕಾರರು ಭದ್ರತಾ ತಡೆಗೋಡೆಗಳನ್ನು ಮುರಿದು, ಪೊಲೀಸರ ಮೇಲೆ ಕಲ್ಲು ತೂರಾಟ ನಡೆಸಿ, ಖಾಸಗಿ ಹಾಗೂ ಸರ್ಕಾರಿ ವಾಹನಗಳನ್ನು ಜಖಂಗೊಳಿಸಿದ್ದಾರೆ. ಸಂಸದ್ ಮಾರ್ಗ ಮತ್ತು ಟಾಲ್‌ಸ್ಟಾಯ್ ಮಾರ್ಗಗಳಲ್ಲಿ ನಡೆದ ಹಿಂಸಾಚಾರದಲ್ಲಿ ಸುಮಾರು 200 ಕ್ಕೂ ಹೆಚ್ಚು ಪೊಲೀಸ್ ಸಿಬ್ಬಂದಿ ಗಾಯಗೊಂಡಿದ್ದು, ಪೋಲಿಸ್ ವಾಹನಗಳನ್ನು ಉರುಳಿಸಲು ಯತ್ನಿಸಿದ ಹಾಗೂ ಬೆಂಕಿ ಹಚ್ಚಿದ ದೃಶ್ಯಗಳು ಕ್ಯಾಮೆರಾಗಳಲ್ಲಿ ಸೆರೆಯಾಗಿವೆ. ಅಲ್ಲದೆ, ಪ್ರಧಾನಿ ನರೇಂದ್ರ ಮೋದಿ, ಸಂಸತ್ತು ಹಾಗೂ ಪೊಲೀಸರ ವಿರುದ್ಧ ನಿಂದನಾತ್ಮಕ ಹೇಳಿಕೆ ನೀಡಿರುವ ವೀಡಿಯೊಗಳನ್ನು ಸಹ ಪೊಲೀಸರು ಮುಂದಿನ ಕಾನೂನು ಕ್ರಮಕ್ಕಾಗಿ ಸಂಗ್ರಹಿಸಿದ್ದಾರೆ.

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ತಮ್ಮ ಹುದ್ದೆಗೆ ರಾಜೀನಾಮೆ ನೀಡಿದ ನಂತರ ಸಿಜೆಪಿ ತನ್ನ ಪ್ರತಿಭಟನೆಯನ್ನು ಹಿಂಪಡೆದಿದ್ದು, ಪ್ರತಿಭಟನಾಕಾರರ ಮೇಲಿನ ಎಲ್ಲಾ ಪ್ರಕರಣಗಳನ್ನು ಹಿಂಪಡೆಯಲು ಸರ್ಕಾರ ಒಪ್ಪಿಕೊಂಡಿದೆ ಎಂದು ಸಿಜೆಪಿ ಹೇಳಿಕೊಂಡಿದೆ.

Advertisement
Advertisement

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಟಾಪ್ ಸುದ್ದಿಗಳು, ರಾಜ್ಯ / ದೇಶ

ಬೆಂಗಳೂರು : ಮೋದಿ ಪೋಸ್ಟ್ ನಿರ್ಬಂಧ – ಕ್ಷಮೆಯಾಚಿಸಿದ ಟೆಕ್‌ ದೈತ್ಯ ಮೆಟಾ !

ಟಾಪ್ ಸುದ್ದಿಗಳು

ಕೋಝಿಕೋಡ್ : ಮಾದಕ ದ್ರವ್ಯ ವಿರೋಧಿ ಜಾಗೃತಿ ಅಭಿಯಾನಗಳ ಲೀಡರ್ ಗಳಿಂದಲೇ ಮಕ್ಕಳಿಗೆ ಡ್ರಗ್ಸ್ ಸಪ್ಲೈ !!

ಟಾಪ್ ಸುದ್ದಿಗಳು, ತಾಲೂಕು, ಬಂಟ್ವಾಳ

ಬಂಟ್ವಾಳ : ಕೃಷಿಕ ಕೃಷ್ಣಪ್ಪ ಕುಲಾಲ್ ಅಂತ್ಯಕ್ರಿಯೆಯಲ್ಲಿ ಪರಿಸರ ಕಾಳಜಿ – ಮೃತ ಪ್ರಕೃತಿ ಪ್ರೀತಿ ಜೀವಂತವಾಗಿರಿಸಲು ಗಿಡ ವಿತರಣೆ !

⚠️ Contents are protected on this website.