ಅಕ್ರಮವಾಗಿ ಜಾನುವಾರು ವಧೆ : ಇಬ್ಬರು ಆರೋಪಿಗಳ ಬಂಧನ..

Advertisement

ಬಂಟ್ವಾಳ, ಮೇ 28 : ಅಕ್ರಮವಾಗಿ ಜಾನುವಾರು ವಧೆ ಮಾಡಿ ಮಾಂಸ ಮಾರಾಟ ಮಾಡುತ್ತಿರುವ ಬಗ್ಗೆ ಬಂದ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಪೊಲೀಸರು ಇಬ್ಬರು ಆರೋಪಿಗಳ ಸಹಿತ ಜಾನುವಾರು, ವಾಹನ ಸೇರಿದಂತೆ ಸೊತ್ತುಗಳನ್ನು ವಶಕ್ಕೆ ಪಡೆದುಕೊಂಡ ಘಟನೆ ಮೇ.27ರಂದು ನಡೆದಿದೆ.

ಬಂಧಿತ ಆರೋಪಿಗಳನ್ನು ಮುಸ್ತಾಫಾ (33) ಹಾಗೂ ಮಹಮ್ಮದ್ ಸಾದೀಕ್ (30) ಎಂದು ಗುರುತಿಸಲಾಗಿದೆ.

ಘಟನೆಯ ವಿವರ:

ತಾಲೂಕಿನ ಸಜಿಪಮೂಡ ಗ್ರಾಮದ ಪಂಜಾಜೆ-ಕೊಳಕೆ ಪ್ರದೇಶದಲ್ಲಿರುವ ಮನೆಯ ಹಿಂಭಾಗದ ದನದ ಕೊಟ್ಟಿಗೆಯಲ್ಲಿ ಜಾನುವಾರುಗಳನ್ನು ಅಕ್ರಮವಾಗಿ ವಧೆ ಮಾಡಿ ಮಾಂಸ ಮಾರಾಟ ಮಾಡುತ್ತಿರುವ ಬಗ್ಗೆ ಮಾಹಿತಿ ದೊರೆತ ಹಿನ್ನೆಲೆಯಲ್ಲಿ ಬಂಟ್ವಾಳ ನಗರ ಠಾಣೆಯ ಪೊಲೀಸ್ ಉಪ ನಿರೀಕ್ಷಕರ ನೇತೃತ್ವದಲ್ಲಿ ಸಿಬ್ಬಂದಿಗಳೊಂದಿಗೆ ದಾಳಿ ನಡೆಸಲಾಯಿತು.

ದಾಳಿ ವೇಳೆ ಆರೋಪಿಗಳಾದ ಜಾಪರ್ ಹಾಗೂ ಅಸ್ಪಾಕ್ ಪರಾರಿಯಾಗಿದ್ದು, ಬಂಧನಕ್ಕೆ ಕ್ರಮ ಕೈಗೊಳ್ಳಲಾಗಿದೆ. ಇಬ್ಬರನ್ನು ಸಿಬ್ಬಂದಿಗಳ ಸಹಾಯದಿಂದ ವಶಕ್ಕೆ ಪಡೆಯಲಾಗಿದೆ.

ಸ್ಥಳ ಪರಿಶೀಲನೆಯ ವೇಳೆ ಐದು ಜಾನುವಾರುಗಳು, ಒಂದು ಕರು, ಸುಮಾರು 31 ಕೆ.ಜಿ ಪ್ಯಾಕೇಟ್ ಮಾಂಸ, ಸುಮಾರು 40 ಕೆ.ಜಿ ಮಾಂಸ, ಮಾಂಸ ಸಾಗಾಟಕ್ಕೆ ಬಳಸುತ್ತಿದ್ದ ಮಾರುತಿ ಸುಜುಕಿ ಇಕೋ ಕಾರು, ಮಾಂಸ ಕತ್ತರಿಸುವ ಉಪಕರಣಗಳು ಸೇರಿದಂತೆ ವಿವಿಧ ಸ್ವತ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ.

ಈ ಘಟನೆಯ ಸಂಬಂಧ ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ಅ.ಕ್ರ. 68/2026 ಕಲಂ 4, 7, 12 ಕರ್ನಾಟಕ ಜಾನುವಾರು ಹತ್ಯೆ ಪ್ರತಿಬಂಧಕ ಮತ್ತು ಸಂರಕ್ಷಣಾ ಕಾಯ್ದೆ-2020 ರಡಿ ಪ್ರಕರಣ ದಾಖಲಿಸಲಾಗಿದೆ.

Advertisement

Advertisement

Advertisement
Advertisement

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಟಾಪ್ ಸುದ್ದಿಗಳು, ತಾಲೂಕು, ಬೆಳ್ತಂಗಡಿ

ಬೆಳ್ತಂಗಡಿ : ಗಣೇಶೋತ್ಸವ ಹಿನ್ನೆಲೆ ಶಾಂತಿ ಸಭೆ : ನಿಯಮ ಮೀರಿದರೆ ಅನುಮತಿ ರದ್ದು – ಕಾನೂನು ಕ್ರಮದ ಎಚ್ಚರಿಕೆ

ಕರಾವಳಿ, ಟಾಪ್ ಸುದ್ದಿಗಳು

ಕಾಸರಗೋಡು : ಜಿಂಕೆ ಬೇಟೆಯಾಡಿ ಮಾಂಸ ಸಾಗಿಸುತ್ತಿದ್ದ ಆರೋಪ – ಓರ್ವನ ಬಂಧನ

ಟಾಪ್ ಸುದ್ದಿಗಳು, ತಾಲೂಕು, ಬೆಳ್ತಂಗಡಿ

ಬೆಳ್ತಂಗಡಿ : ಮನೆಯ ಬಾವಿಗೆ ಹಾರಿ ಯುವತಿ ಆತ್ಮಹತ್ಯೆ