ಟೋಕಿಯೋ : ಜಪಾನ್ ನಲ್ಲಿ 7.1 ತೀವ್ರತೆಯ ಪ್ರಬಲ ಭೂಕಂಪ – ಭೀಕರ ಸುನಾಮಿ ಎಚ್ಚರಿಕೆ !

ಟೋಕಿಯೋ, ಜು. 28 : ಜಪಾನ್‌ನ ದಕ್ಷಿಣ ಭಾಗದ ಕ್ಯುಶು ದ್ವೀಪದಲ್ಲಿರುವ ಕುಮಾಮೊಟೊ ಪ್ರಾಂತ್ಯದಲ್ಲಿ 7.1 ತೀವ್ರತೆಯ ಪ್ರಬಲ ಭೂಕಂಪ ಸಂಭವಿಸಿದೆ. ಭೂಕಂಪದ ಕೇಂದ್ರಬಿಂದು ಸಮುದ್ರ ಮಟ್ಟದಿಂದ 10 ಕಿಲೋಮೀಟರ್ ಆಳದಲ್ಲಿತ್ತು ಎಂದು ಜಪಾನ್ ಹವಾಮಾನ ಇಲಾಖೆ (JMA) ತಿಳಿಸಿದೆ.

Advertisement

ಭೂಕಂಪದ ಕಂಪನಕ್ಕೆ ಹಲವು ಕಟ್ಟಡಗಳು ಕುಸಿದಿದ್ದು, ಹಲವರು ಗಾಯಗೊಂಡಿದ್ದಾರೆ. ಗಾಯಾಳುಗಳ ಸಂಖ್ಯೆ ಇನ್ನೂ ಹೆಚ್ಚುವ ಸಾಧ್ಯತೆ ಇದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಭೂಕಂಪದ ಬಳಿಕ ಜಪಾನ್ ಸರ್ಕಾರ ಸುನಾಮಿ ಎಚ್ಚರಿಕೆ ನೀಡಿದೆ. ಒಂದು ಮೀಟರ್ ಎತ್ತರದ ಅಲೆಗಳು ಏಳುವ ಸಾಧ್ಯತೆ ಇರುವುದರಿಂದ ಕರಾವಳಿ ಭಾಗದ ಜನರು ತಕ್ಷಣ ಸುರಕ್ಷಿತ ಹಾಗೂ ಎತ್ತರದ ಪ್ರದೇಶಗಳಿಗೆ ತೆರಳುವಂತೆ ಸೂಚಿಸಲಾಗಿದೆ.

ಭೂಕಂಪದ ಬಳಿಕ ಪರಮಾಣು ವಿದ್ಯುತ್ ಸ್ಥಾವರಗಳಲ್ಲಿ ಯಾವುದೇ ತಕ್ಷಣದ ಅಸಹಜತೆ ಕಂಡುಬಂದಿಲ್ಲ ಎಂದು ಪರಮಾಣು ನಿಯಂತ್ರಣ ಪ್ರಾಧಿಕಾರ ತಿಳಿಸಿದೆ. ಆದರೂ ಪರಿಸ್ಥಿತಿಯ ಮೇಲೆ ಅಧಿಕಾರಿಗಳು ನಿಗಾ ವಹಿಸಿದ್ದಾರೆ. ಕುಮಾಮೊಟೊ, ನಾಗಸಾಕಿ, ಕಾಗೋಶಿಮಾ, ಫುಕುವೋಕಾ, ಸಾಗಾ, ಓಯಿಟಾ ಹಾಗೂ ಮಿಯಾಜಾಕಿ ಸೇರಿದಂತೆ ಹಲವು ಪ್ರಾಂತ್ಯಗಳಿಗೆ ತುರ್ತು ಎಚ್ಚರಿಕೆ ನೀಡಲಾಗಿದೆ. ಇದು ಒಂದು ವಾರದೊಳಗೆ ಜಪಾನ್‌ನಲ್ಲಿ ಸಂಭವಿಸಿದ ಎರಡನೇ ಪ್ರಬಲ ಭೂಕಂಪವಾಗಿದೆ. ಜೂನ್ 25ರಂದು ಉತ್ತರ ಜಪಾನ್‌ನಲ್ಲಿ 7.2 ತೀವ್ರತೆಯ ಭೂಕಂಪ ಸಂಭವಿಸಿದ್ದರೂ ಹೆಚ್ಚಿನ ಹಾನಿ ಆಗಿರಲಿಲ್ಲ.

ಪೆಸಿಫಿಕ್‌ನ ‘ರಿಂಗ್ ಆಫ್ ಫೈರ್’ ಪ್ರದೇಶದಲ್ಲಿರುವ ಜಪಾನ್ ವಿಶ್ವದಲ್ಲೇ ಹೆಚ್ಚು ಭೂಕಂಪ ಸಂಭವಿಸುವ ದೇಶಗಳಲ್ಲಿ ಒಂದಾಗಿದೆ. 2011ರಲ್ಲಿ ಸಂಭವಿಸಿದ್ದ 9.0 ತೀವ್ರತೆಯ ಭೂಕಂಪ ಮತ್ತು ಸುನಾಮಿ ಸಾವಿರಾರು ಜೀವಗಳನ್ನು ಬಲಿ ಪಡೆದಿದ್ದ ಘಟನೆ ಇನ್ನೂ ಜನರ ಮನಸ್ಸಿನಲ್ಲಿ ಹಸಿಯಾಗಿಯೇ ಉಳಿದಿದೆ.

Advertisement
Advertisement

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಟಾಪ್ ಸುದ್ದಿಗಳು, ರಾಜ್ಯ / ದೇಶ

ನವದೆಹಲಿ : ಪ್ರಶ್ನೆ ಪತ್ರಿಕೆ ಸೋರಿಕೆ ತಡೆ ಕಾನೂನು ತಿದ್ದುಪಡಿ ಮಸೂದೆ ಅಂಗೀಕಾರ

ಟಾಪ್ ಸುದ್ದಿಗಳು, ರಾಜ್ಯ / ದೇಶ

ಬೆಂಗಳೂರು : ಭೀಕರ ರೈಲು ಅಪಘಾತ : ಕ್ರಿಕೆಟ್ ಮೈದಾನಕ್ಕೆ ತೂರಿ ಬಿದ್ದಿದ್ದ ವ್ಯಕ್ತಿಯ ರುಂಡ !

ತಾಲೂಕು, ಬೆಳ್ತಂಗಡಿ

ಉಪ್ಪಿನಂಗಡಿ : ನಿಂತಿದ್ದ ಟಿಪ್ಪರ್ ಹಿಂಬದಿಗೆ ಕಾರು ಢಿಕ್ಕಿ – 4 ವರ್ಷದ ಮಗು ಸೇರಿ ಐವರಿಗೆ ಗಾಯ

⚠️ Contents are protected on this website.