ಚಿಕ್ಕಮಗಳೂರು : ಮುಳ್ಳಯ್ಯನಗಿರಿಗೆ ಪ್ರವಾಸಕ್ಕೆ ಬಂದಿದ್ದ ಶಾಲಾ ಮಕ್ಕಳಿದ್ದ ಜೀಪ್ ಪಲ್ಟಿಯಾಗಿ ಆರು ವಿದ್ಯಾರ್ಥಿಗಳಿಗೆ ಗಾಯ

Advertisement

ಚಿಕ್ಕಮಗಳೂರು, ಡಿ. 22 : ಶಾಲಾ ಮಕ್ಕಳಿದ್ದ ಜೀಪ್ ಪಲ್ಟಿಯಾಗಿ ಆರು ವಿದ್ಯಾರ್ಥಿಗಳು ಗಾಯಗೊಂಡ ಮುಳ್ಳಯ್ಯನಗಿರಿಯಲ್ಲಿ ಇಂದು ಬೆಳಗ್ಗೆ ನಡೆದಿದೆ.

Advertisement

ಕೇರಳ ಮೂಲದ ಶಾಲೆಯೊಂದರ ವಿದ್ಯಾರ್ಥಿಗಳು ಚಿಕ್ಕಮಗಳೂರಿನ ಪ್ರವಾಸಿ ತಾಣವಾದ ಮುಳ್ಳಯ್ಯನ ಗಿರಿಗೆ ಪ್ರವಾಸಕ್ಕೆ ಬಂದಿದ್ದರು. ಮುಳ್ಳಯ್ಯನಗಿರಿಗೆ ದೊಡ್ಡ ಬಸ್ ಗಳ ಪ್ರವೇಶ ಕಠಿಣವಾಗಿರುವುದರಿಂದ, ಬಸ್ ನಿಲ್ಲಿಸಿ ವಿದ್ಯಾರ್ಥಿಗಳನ್ನು ಜೀಪ್ ಮೂಲಕ ಕರೆದೊಯ್ಯಲಾಗುತ್ತಿತ್ತು. ಈ ವೇಳೆ ಚಾಲಕನ ನಿಯಂತ್ರಣ ತಪ್ಪಿದ ಜೀಪ್ ರಸ್ತೆಯಲ್ಲಿ ಪಲ್ಟಿಯಾಗಿದೆ. ಇದರಿಂದ ಆರು ಮಂದಿ ವಿದ್ಯಾರ್ಥಿಗಳು ಸಣ್ಣಪುಟ್ಟ ಗಾಯಗಳೊಂದಿಗೆ ಪ್ರಾಣಾಪಾಯದಿಂದ ಪಾರಾಗಿದ್ದಾರೆಂದು ತಿಳಿದು ಬಂದಿದೆ.

Advertisement

ಇನ್ನು, ಅಪಘಾತಕ್ಕೆ ಚಾಲಕನ ಅತಿ ವೇಗ ಹಾಗೂ ನಿರ್ಲಕ್ಷ್ಯದ ಚಾಲನೆ ಕಾರಣ ಎನ್ನಲಾಗುತ್ತಿದೆ. ಅಪಘಾತ ಸಂಭವಿಸುತ್ತಿದ್ದಂತೆಯೇ ಗಾಬರಿಗೊಂಡ ಜೀಪ್ ಚಾಲಕ ಜೀಪನ್ನು ಸ್ಥಳದಲ್ಲೇ ಬಿಟ್ಟು ಪರಾರಿಯಾಗಿದ್ದಾನೆ. ಸ್ಥಳೀಯರು ಗಾಯಾಳು ಮಕ್ಕಳನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಿದ್ದಾರೆ. ಈ ಬಗ್ಗೆ ಚಿಕ್ಕಮಗಳೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Advertisement
Advertisement

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಟಾಪ್ ಸುದ್ದಿಗಳು, ತಾಲೂಕು, ಬೆಳ್ತಂಗಡಿ

ಬೆಳ್ತಂಗಡಿ : ಗಣೇಶೋತ್ಸವ ಹಿನ್ನೆಲೆ ಶಾಂತಿ ಸಭೆ : ನಿಯಮ ಮೀರಿದರೆ ಅನುಮತಿ ರದ್ದು – ಕಾನೂನು ಕ್ರಮದ ಎಚ್ಚರಿಕೆ

ಕರಾವಳಿ, ಟಾಪ್ ಸುದ್ದಿಗಳು

ಕಾಸರಗೋಡು : ಜಿಂಕೆ ಬೇಟೆಯಾಡಿ ಮಾಂಸ ಸಾಗಿಸುತ್ತಿದ್ದ ಆರೋಪ – ಓರ್ವನ ಬಂಧನ

ಟಾಪ್ ಸುದ್ದಿಗಳು, ತಾಲೂಕು, ಬೆಳ್ತಂಗಡಿ

ಬೆಳ್ತಂಗಡಿ : ಮನೆಯ ಬಾವಿಗೆ ಹಾರಿ ಯುವತಿ ಆತ್ಮಹತ್ಯೆ