ರಾಜ್ಯಕ್ಕೆ ಜೂನ್ 5 ರಂದು ಮುಂಗಾರು ಪ್ರವೇಶ- ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು, ಜೂ. 02 : ರಾಜ್ಯಕ್ಕೆ ಜೂನ್ 5 ರಂದು ಮುಂಗಾರು ಪ್ರವೇಶಿಸಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

Advertisement

ಈ ಬಾರಿ ಮುಂಗಾರು ತಡವಾಗಿ ಪ್ರವೇಶಿಸಲಿದೆ ಎಂದು ಹೇಳಲಾಗುತ್ತಿತ್ತು. ಆದರೆ ಸರಿಯಾದ ಸಮಯಕ್ಕೆ ಮುಂಗಾರು ಪ್ರವೇಶಿಸುತ್ತಿದೆ. ಜೂ.2 ರಿಂದ ಮುಂದಿನ ಐದು ದಿನಗಳ ಕಾಲ ರಾಜ್ಯದ ಹಲವೆಡೆ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಗದಗ, ಧಾರವಾಡ, ಮೈಸೂರು, ಹಾಸನ ಸೇರಿದಂತೆ ಒಟ್ಟು 8 ಜಿಲ್ಲೆಗಳಲ್ಲಿ ಬಿರುಗಾಳಿ ಸಹಿತ ಭಾರಿ ಮಳೆಯಾಗುವ ಸಾಧ್ಯತೆಯಿದ್ದು, ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಬೆಂಗಳೂರು ಹಾಗೂ ಕರಾವಳಿ ಭಾಗದಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಬಿರುಗಾಳಿ ವೇಳೆ ಸಾರ್ವಜನಿಕರು ಮತ್ತು ರೈತರು ಅಗತ್ಯ ಮುನ್ನೆಚ್ಚರಿಕೆ ವಹಿಸುವಂತೆ ಇಲಾಖೆ ಸೂಚನೆ ನೀಡಿದೆ.

ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಜೂ.3 ರಿಂದ ಜೂ.5ರ ವರೆಗೆ ಹಾಗೂ ಒಳನಾಡು ಜಿಲ್ಲೆಗಳಲ್ಲಿ ಜೂ.1 ರಿಂದ 4ರ ವರೆಗೆ ಒಂದು ಅಥವಾ ಎರಡು ಸ್ಥಳಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

Advertisement
Advertisement

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ತಾಲೂಕು, ಬೆಳ್ತಂಗಡಿ

ಬೆಳ್ತಂಗಡಿ : ಕರ್ನಾಟಕ ಸ್ಟೇಟ್ ಟೈಲರ್ಸ್ ಅಸೋಸಿಯೇಶನ್ (ರಿ.) ಕ್ಷೇತ್ರ ಸಮಿತಿ ಬೆಳ್ತಂಗಡಿ ವತಿಯಿಂದ “ಆಟಿದ ಕಮ್ಮೆನ ಬೊಕ್ಕಗೊಬ್ಬು”

ಟಾಪ್ ಸುದ್ದಿಗಳು, ವಿದೇಶ

ಟೋಕಿಯೋ : ಜಪಾನ್ ನಲ್ಲಿ 7.1 ತೀವ್ರತೆಯ ಪ್ರಬಲ ಭೂಕಂಪ – ಭೀಕರ ಸುನಾಮಿ ಎಚ್ಚರಿಕೆ !

ಟಾಪ್ ಸುದ್ದಿಗಳು, ತಾಲೂಕು, ಮಂಗಳೂರು

ಮಂಗಳೂರು : ಖಾಸಗಿ ಬಸ್ – ಬೈಕ್ ಮಧ್ಯೆ ಅಪಘಾತ; ಪತಿ ಸಾವು, ಪತ್ನಿಗೆ ಗಂಭೀರ

⚠️ Contents are protected on this website.