ರಾಷ್ಟ್ರ ಮಟ್ಟದ ಕಬಡ್ಡಿ ತಂಡಕ್ಕೆ ಆಯ್ಕೆಯಾದ ದಕ್ಷಿಣ ಕನ್ನಡ ಜಿಲ್ಲೆಯ ಆಟಗಾರ ತೀರ್ಥೇಶ್

Advertisement

ಬೆಂಗಳೂರು : 14ರ ವಯೋಮಾನದ ಬಾಲಕರ ರಾಜ್ಯ ಮಟ್ಟದ ಕಬಡ್ಡಿ ಪಂದ್ಯಾಟದಲ್ಲಿ ತೀರ್ಥೇಶ್ ಬೆಸ್ಟ್ ರೈಡರ್ ವೈಯಕ್ತಿಕ ಪ್ರಶಸ್ತಿ ಪಡೆದು, ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

Advertisement

ವಿಟ್ಲ ಪಿ.ಎಂ. ಶ್ರೀ. ಸರಕಾರಿ ಪ್ರೌಢಶಾಲಾ 8ನೇ ತರಗತಿ ವಿದ್ಯಾರ್ಥಿಯಾಗಿರುವ ತೀರ್ಥೇಶ್ ರವರು ಶಾಲಾ ಶಿಕ್ಷಣ ಇಲಾಖೆ ಏರ್ಪಡಿಸಿದ್ದ 14ನೇ ವಯೋಮಾನದ ಬಾಲಕರ ವಿಭಾಗದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಿಂದ ಮೈಸೂರು ವಿಭಾಗವನ್ನು ಪ್ರತಿನಿಧಿಸಿ, ನ.10 ಮತ್ತು ನ.11 ರಂದು ಡಾ || ಬಿ. ಆರ್.ಅಂಬೇಡ್ಕರ್ ಕ್ರೀಡಾಂಗಣ ಬಸವೇಶ್ವರ ನಗರ ಬೆಂಗಳೂರು ನಲ್ಲಿ ನಡೆದ ರಾಜ್ಯಮಟ್ಟದ ಕಬಡ್ಡಿ ಪಂದ್ಯಾಟದಲ್ಲಿ ಮಂಡ್ಯ ತಂಡವನ್ನು ಪ್ರತಿನಿಧಿಸಿ ದ್ವಿತೀಯ ಸ್ಥಾನ ಜೊತೆಗೆ ಬೆಸ್ಟ್ ರೈಡರ್ ವೈಯಕ್ತಿಕ ಬಹುಮಾನ ತನ್ನದಾಗಿಸಿಕೊಂಡಿದ್ದಾರೆ.ಆ ಮೂಲಕ ಛತ್ತೀಸ್ ಗಢ ದಲ್ಲಿ ನಡೆಯುವ ರಾಷ್ಟ ಮಟ್ಟದ ಪಂದ್ಯಾಟಕ್ಕೆ ಆಯ್ಕೆಯಾಗಿದ್ದಾರೆ. ತೀರ್ಥೇಶ್ ಬೆಳ್ತಂಗಡಿ ತಾಲೂಕು ಬಂದಾರು ಗ್ರಾಮ ಖಂಡಿಗ ನಿವಾಸಿ ಶ್ರೀಮತಿ ಚೆನ್ನಮ್ಮ ರಾಮ್ಮಣ್ಣ ಗೌಡ ದಂಪತಿಗಳ ಮೊಮ್ಮಗ, ಬಂಟ್ವಾಳ ತಾಲೂಕು ವಿಟ್ಲ ದೇವಸ್ಯ ನಿವಾಸಿ ಶ್ರೀಮತಿ ಮೀನಾಕ್ಷಿ ಚೆನ್ನಪ್ಪ ದಂಪತಿಗಳ ಪುತ್ರರಾಗಿದ್ದಾರೆ.

Advertisement

Advertisement
Advertisement

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಟಾಪ್ ಸುದ್ದಿಗಳು, ತಾಲೂಕು, ಬೆಳ್ತಂಗಡಿ

ಬೆಳ್ತಂಗಡಿ : ಗಣೇಶೋತ್ಸವ ಹಿನ್ನೆಲೆ ಶಾಂತಿ ಸಭೆ : ನಿಯಮ ಮೀರಿದರೆ ಅನುಮತಿ ರದ್ದು – ಕಾನೂನು ಕ್ರಮದ ಎಚ್ಚರಿಕೆ

ಕರಾವಳಿ, ಟಾಪ್ ಸುದ್ದಿಗಳು

ಕಾಸರಗೋಡು : ಜಿಂಕೆ ಬೇಟೆಯಾಡಿ ಮಾಂಸ ಸಾಗಿಸುತ್ತಿದ್ದ ಆರೋಪ – ಓರ್ವನ ಬಂಧನ

ಟಾಪ್ ಸುದ್ದಿಗಳು, ತಾಲೂಕು, ಬೆಳ್ತಂಗಡಿ

ಬೆಳ್ತಂಗಡಿ : ಮನೆಯ ಬಾವಿಗೆ ಹಾರಿ ಯುವತಿ ಆತ್ಮಹತ್ಯೆ