ಕಡಿರುದ್ಯಾವರ ಗ್ರಾಮದ ಕುಕ್ಕುದಡಿಯಲ್ಲಿ ಸೇತುವೆ ಸಹಿತ ಕಿಂಡಿ ಅಣೆಕಟ್ಟು ನಿರ್ಮಾಣಕ್ಕೆ ರೂ.1.00 ಕೋಟಿ ಅನುದಾನ – ಶಾಸಕ ಹರೀಶ್ ಪೂಂಜ

ಬೆಳ್ತಂಗಡಿ, ಮಾ. 03 : ಕಡಿರುದ್ಯಾವರ ಗ್ರಾಮದ ಕುಕ್ಕುದಡಿ ಪ್ರದೇಶದಲ್ಲಿ ಸೇತುವೆ ಸಹಿತ ಕಿಂಡಿ ಅಣೆಕಟ್ಟು ನಿರ್ಮಾಣ ಕಾಮಗಾರಿಗೆ ರಾಜ್ಯ ಸರ್ಕಾರವು ರೂ.1.00 ಕೋಟಿ ಅನುದಾನವನ್ನು ಮಂಜೂರು ಮಾಡಿದೆ ಎಂದು ಶಾಸಕ ಹರೀಶ್ ಪೂಂಜ ತಿಳಿಸಿದ್ದಾರೆ.

Advertisement

ಸ್ಥಳೀಯ ರೈತಾಪಿ ವರ್ಗದ ಬಹುಕಾಲದ ಬೇಡಿಕೆಗೆ ಸ್ಪಂದಿಸಿ, ಈ ಯೋಜನೆಯ ಅಗತ್ಯತೆಯನ್ನು ಮಾನ್ಯ ಸಣ್ಣ ನೀರಾವರಿ ಸಚಿವರ ಗಮನಕ್ಕೆ ತಂದು ಸಮಗ್ರವಾಗಿ ಮನವರಿಕೆ ಮಾಡಲಾಗಿದ್ದು, ಅದರ ಫಲವಾಗಿ ಅನುದಾನ ಮಂಜೂರಾಗಿದೆ. ಈ ಕಾಮಗಾರಿಯಿಂದ ಕೃಷಿ ಜಮೀನುಗಳಿಗೆ ಸಮರ್ಪಕ ನೀರಾವರಿ ಸೌಲಭ್ಯ ಲಭಿಸುವುದರ ಜೊತೆಗೆ ಸೇತುವೆ ನಿರ್ಮಾಣದಿಂದ ಸಾರ್ವಜನಿಕರಿಗೆ ಸುರಕ್ಷಿತ ಹಾಗೂ ಸುಗಮ ಸಂಚಾರ ವ್ಯವಸ್ಥೆಯೂ ಒದಗಲಿದೆ.

ಈ ಮಹತ್ವದ ಯೋಜನೆಗೆ ಅನುಮೋದನೆ ನೀಡಿದ ರಾಜ್ಯ ಸರ್ಕಾರಕ್ಕೆ ಹಾಗೂ ವಿಶೇಷ ಸಹಕಾರ ನೀಡಿದ ಮಾನ್ಯ ಸಣ್ಣ ನೀರಾವರಿ ಸಚಿವರಿಗೆ ಶಾಸಕ ಹರೀಶ್ ಪೂಂಜ ಅವರು ಹೃತ್ಪೂರ್ವಕ ಧನ್ಯವಾದಗಳನ್ನು ಸಲ್ಲಿಸಿದ್ದಾರೆ.

Advertisement
Advertisement

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಟಾಪ್ ಸುದ್ದಿಗಳು, ತಾಲೂಕು, ಬಂಟ್ವಾಳ, ಬೆಳ್ತಂಗಡಿ

ಉಪ್ಪಿನಂಗಡಿ : ಲಾವಣ್ಯ ಹತ್ಯೆಗೆ ಚೇತನ್ ತಲ್ವಾರ್ ಖರೀದಿಸಿದ್ದು ಉಪ್ಪಿನಂಗಡಿ ಕೃಷಿ ಕೇಂದ್ರದಿಂದ !

ಟಾಪ್ ಸುದ್ದಿಗಳು

ಮುಂಬೈ : ಭಾರತದಲ್ಲಿ ಸದ್ದು ಮಾಡುತ್ತಿದೆ “ರಾಮಾಯಣ” ಸಿನಿಮಾ – ಯಶ್ ಪಾತ್ರಕ್ಕೆ ಪಾತ್ರಕ್ಕೆ ಕನ್ನಡಿಗರು ಫಿದಾ !

ಟಾಪ್ ಸುದ್ದಿಗಳು, ತಾಲೂಕು, ಬೆಳ್ತಂಗಡಿ

ಧರ್ಮಸ್ಥಳ : ಬುರುಡೆ ಪ್ರಕರಣ – ಬಂಗ್ಲೆಗುಡ್ಡೆಯಲ್ಲಿ ಪತ್ತೆಯಾದ ಅಸ್ಥಿಪಂಜರ ಪುರುಷರದ್ದು ! ಎಫ್ ಎಸ್ ಎಲ್ ವರದಿಯಲ್ಲಿ ದೃಢ

⚠️ Contents are protected on this website.