ಕಲಬುರಗಿ : ತರಗತಿ ನಡೆಯುತ್ತಿದ್ದಾಗಲೇ ಕಾಲೇಜಿನ ಮೇಲ್ಛಾವಣಿಯ ಸಿಮೆಂಟ್ ಪದರ ಕುಸಿತ – 5 ಮಂದಿ ವಿದ್ಯಾರ್ಥಿನಿಯರಿಗೆ ಗಾಯ | VIDEO

ಕಲಬುರಗಿ, ಜೂ. 13 : ನಗರದ ಹೃದಯಭಾಗದಲ್ಲಿರುವ ಸರ್ಕಾರಿ ಕಾಲೇಜೊಂದರಲ್ಲಿ ತರಗತಿ ನಡೆಯುತ್ತಿದ್ದ ವೇಳೆಯಲ್ಲೇ ಮೇಲ್ಚಾವಣಿಯ ಸಿಮೆಂಟ್ ಪದರು ಕುಸಿದು ಬಿದ್ದು, ಐವರು ವಿದ್ಯಾರ್ಥಿನಿಯರು ಗಾಯಗೊಂಡಿರುವ ಆತಂಕಕಾರಿ ಘಟನೆ ಶುಕ್ರವಾರ ಬೆಳಿಗ್ಗೆ ಸಂಭವಿಸಿದೆ. ಕಲಬುರಗಿ ನಗರದ ಎಸ್ಪಿ ಕಚೇರಿ ಸಮೀಪದ ಸರ್ಕಾರಿ ಪದವಿಪೂರ್ವ ಬಾಲಕಿಯರ ಕಾಲೇಜಿನಲ್ಲಿ ಈ ಅವಘಡ ನಡೆದಿದೆ.

Advertisement

​ಕಾಲೇಜಿನ ಪ್ರಥಮ ಪಿಯುಸಿ ಕಾಮರ್ಸ್ ವಿಭಾಗದ ಕೊಠಡಿಯಲ್ಲಿ ಎಂದಿನಂತೆ ತರಗತಿ ನಡೆಯುತ್ತಿತ್ತು. ಈ ವೇಳೆ ಸುಮಾರು 80ಕ್ಕೂ ಹೆಚ್ಚು ವಿದ್ಯಾರ್ಥಿನಿಯರು ಕೊಠಡಿಯಲ್ಲಿದ್ದರು. ಪಾಠ ಕೇಳುತ್ತಿದ್ದ ಸಂದರ್ಭದಲ್ಲೇ ಮೇಲ್ಚಾವಣಿಯ ಸಿಮೆಂಟ್ ಪದರು ಏಕಾಏಕಿ ಭಾರಿ ಶಬ್ದದೊಂದಿಗೆ ವಿದ್ಯಾರ್ಥಿನಿಯರ ಮೇಲೆ ಕುಸಿದು ಬಿದ್ದಿದೆ. ಪರಿಣಾಮವಾಗಿ ಪೂಜಾ, ಸೃಷ್ಟಿ, ನಿಶಾ, ಶೀತಲ್ ಸೇರಿದಂತೆ ಐವರು ವಿದ್ಯಾರ್ಥಿನಿಯರು ಗಾಯಗೊಂಡಿದ್ದಾರೆ.


​ಘಟನೆ ಸಂಭವಿಸುತ್ತಿದ್ದಂತೆ ತರಗತಿಯಲ್ಲಿದ್ದ ವಿದ್ಯಾರ್ಥಿನಿಯರು ತೀವ್ರ ಭಯಭೀತರಾಗಿ, ಪ್ರಾಣಭಯದಿಂದ ತರಗತಿಯಿಂದ ಹೊರಗೆ ಓಡಿ ಬರುತ್ತಿರುವ ದೃಶ್ಯಗಳು ಕಾಲೇಜಿನ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಸದ್ಯ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿ ತೀವ್ರ ಆತಂಕ ಮೂಡಿಸಿದೆ.

​ಗಾಯಗೊಂಡ ತಕ್ಷಣವೇ ಕಾಲೇಜು ಸಿಬ್ಬಂದಿ ವಿದ್ಯಾರ್ಥಿನಿಯರನ್ನು ನಗರದ ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಿದ್ದಾರೆ. ಗಾಯಾಳು ವಿದ್ಯಾರ್ಥಿನಿಯರ ತಲೆ, ಬೆನ್ನು ಹಾಗೂ ಮೊಣಕೈ ಭಾಗಕ್ಕೆ ಪೆಟ್ಟಾಗಿದ್ದು, ಸದ್ಯ ಎಲ್ಲರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ವೈದ್ಯಕೀಯ ಮೂಲಗಳು ಖಚಿತಪಡಿಸಿವೆ.

Advertisement
Advertisement

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಟಾಪ್ ಸುದ್ದಿಗಳು, ರಾಜ್ಯ / ದೇಶ

ನವದೆಹಲಿ : ಪ್ರಶ್ನೆ ಪತ್ರಿಕೆ ಸೋರಿಕೆ ತಡೆ ಕಾನೂನು ತಿದ್ದುಪಡಿ ಮಸೂದೆ ಅಂಗೀಕಾರ

ಟಾಪ್ ಸುದ್ದಿಗಳು, ರಾಜ್ಯ / ದೇಶ

ಬೆಂಗಳೂರು : ಭೀಕರ ರೈಲು ಅಪಘಾತ : ಕ್ರಿಕೆಟ್ ಮೈದಾನಕ್ಕೆ ತೂರಿ ಬಿದ್ದಿದ್ದ ವ್ಯಕ್ತಿಯ ರುಂಡ !

ತಾಲೂಕು, ಬೆಳ್ತಂಗಡಿ

ಉಪ್ಪಿನಂಗಡಿ : ನಿಂತಿದ್ದ ಟಿಪ್ಪರ್ ಹಿಂಬದಿಗೆ ಕಾರು ಢಿಕ್ಕಿ – 4 ವರ್ಷದ ಮಗು ಸೇರಿ ಐವರಿಗೆ ಗಾಯ

⚠️ Contents are protected on this website.