ಕಲಬುರಗಿ : ಕೂಲಿ ಹಣ ಕೇಳಿದ್ದಕ್ಕೆ ಕಾಂಗ್ರೆಸ್‌ ಮುಖಂಡನಿಂದ ಬೆದರಿಕೆ ಆರೋಪ – ವ್ಯಕ್ತಿ ಆತ್ಮಹತ್ಯೆ !

Advertisement

ಕಲಬುರಗಿ, ಜು. 31 : ಗುತ್ತಿಗೆ ಪಡೆದ ಕೆಲಸದ ಹಣ ಕೇಳಿದ ಹಿನ್ನೆಲೆಯಲ್ಲಿ ಕಾಂಗ್ರೆಸ್‌ ಮುಖಂಡನ ಬೆದರಿಕೆಗೆ ಹೆದರಿದ ವ್ಯಕ್ತಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕಲಬುರಗಿ (Kalaburagi) ಜಿಲ್ಲೆಯ ಕಾಳಗಿ ತಾಲೂಕಿನ ರಟಕಲ್ ಗ್ರಾಮದಲ್ಲಿ ನಡೆದಿದೆ.

Advertisement

ರಟಕಲ್ ಗ್ರಾಮದ ನಿವಾಸಿ ಖದೀರ್ ಪಾಷಾ (38) ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಕೆಲಸಗಾರ. ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಮುಖಂಡ (Congress Leader) ಅರವಿಂದ್ ಚವ್ಹಾಣ್ ಹಾಗೂ ಅವರ ಅಳಿಯ ಅಮಿತ್ ರಾಠೋಡ್ ವಿರುದ್ಧ ದೂರು ದಾಖಲಾಗಿದೆ.

Advertisement

ಪೊಲೀಸರ ಮಾಹಿತಿ ಪ್ರಕಾರ, ಸೇಡಂನ ಸಿಮೆಂಟ್ ಕಾರ್ಖಾನೆಯ ಕಾಮಗಾರಿಯನ್ನು ಗುತ್ತಿಗೆ ಪಡೆದಿದ್ದ ಅರವಿಂದ್ ಚವ್ಹಾಣ್ ಅದರ ಕೆಲಸಕ್ಕೆ ಖದೀರ್ ಪಾಷಾ ನನ್ನ ಕೂಲಿಗಾಗಿ ನೇಮಿಸಿಕೊಂಡಿದ್ದರು. ಬಳಿಕ ಕಾಮಗಾರಿಗೆ ಸಂಬಂಧಿಸಿದ ಬಾಕಿ ಹಣ ಕೇಳಿದಾಗ ಅರವಿಂದ್ ಚವ್ಹಾಣ್ ಹಾಗೂ ಅಮಿತ್ ರಾಠೋಡ್ ಬೆದರಿಕೆ ಹಾಕಿದ್ದಾರೆ ಎಂದು ಆರೋಪಿಸಲಾಗಿದೆ.

Advertisement
Advertisement

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಟಾಪ್ ಸುದ್ದಿಗಳು, ತಾಲೂಕು, ಬೆಳ್ತಂಗಡಿ

ಬೆಳ್ತಂಗಡಿ : ಗಣೇಶೋತ್ಸವ ಹಿನ್ನೆಲೆ ಶಾಂತಿ ಸಭೆ : ನಿಯಮ ಮೀರಿದರೆ ಅನುಮತಿ ರದ್ದು – ಕಾನೂನು ಕ್ರಮದ ಎಚ್ಚರಿಕೆ

ಕರಾವಳಿ, ಟಾಪ್ ಸುದ್ದಿಗಳು

ಕಾಸರಗೋಡು : ಜಿಂಕೆ ಬೇಟೆಯಾಡಿ ಮಾಂಸ ಸಾಗಿಸುತ್ತಿದ್ದ ಆರೋಪ – ಓರ್ವನ ಬಂಧನ

ಟಾಪ್ ಸುದ್ದಿಗಳು, ತಾಲೂಕು, ಬೆಳ್ತಂಗಡಿ

ಬೆಳ್ತಂಗಡಿ : ಮನೆಯ ಬಾವಿಗೆ ಹಾರಿ ಯುವತಿ ಆತ್ಮಹತ್ಯೆ