ಕಾರ್ಕಳ : ಬಜಗೋಳಿ ಸೊಸೈಟಿಗೆ ನುಗ್ಗಿ ಕಳವು ಯತ್ನ – ಆರೋಪಿಯ ಬಂಧನ

ಕಾರ್ಕಳ, ಜ.18 : ಬಜಗೋಳಿ ಬಂಟ್ಸ್ ಕ್ರೆಡಿಟ್ ಕೋ ಅಪರೇಟಿವ್ ಸೊಸೈಟಿಗೆ ನುಗ್ಗಿ ಕಳವಿಗೆ ಯತ್ನಿಸಿದ್ದ ಆರೋಪಿಯನ್ನು ಕ್ಷಿಪ್ರ ಕಾರ್ಯಾಚರಣೆ ಮೂಲಕ ಬಂಧಿಸುವಲ್ಲಿ ಕಾರ್ಕಳ ಗ್ರಾಮಾಂತರ ಪೊಲೀಸರು ಯಶಸ್ವಿಯಾಗಿದ್ದಾರೆ.

Advertisement

ನಿಟ್ಟೆ ದರ್ಖಾಸು ನಿವಾಸಿ ಸುರೇಶ ಕೊರಗ ಪೂಜಾರಿ(53) ಬಂಧಿತ ಆರೋಪಿ ಎಂದು ಗುರುತಿಸಲಾಗಿದೆ. ಆರೋಪಿ ಜ.16ರಂದು ಸೊಸೈಟಿ ಬೀಗ ಮುರಿದು ಒಳಗೆ ನುಗ್ಗೆ ಕಳ್ಳತನಕ್ಕೆ ಪ್ರಯತ್ನಿಸಿರುವ ಬಗ್ಗೆ ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಸಿಸಿಟಿವಿ ಪರಿಶೀಲಿಸಿದಾಗ ಕಳ್ಳತನಕ್ಕೆ ಪ್ರಯತ್ನಿಸಿದ ವ್ಯಕ್ತಿ ಗುರುತು ಪತ್ತೆಯಾಗಿತ್ತು.

ಖಚಿತ ಮಾಹಿತಿಯಂತೆ ಕಾರ್ಯಾಚರಣೆ ನಡೆಸಿದ ಪೊಲೀಸರು, ಜ.17ರಂದು ಆರೋಪಿಯನ್ನು ಬಂಧಿಸಿದ್ದಾರೆ. ಆರೋಪಿಗೆ ನ್ಯಾಯಾಲಯವು ನ್ಯಾಯಾಂಗ ಬಂಧನ ವಿಧಿಸಿದೆ. ಆರೋಪಿಯ ಮೇಲೆ ಕಾರ್ಕಳ ನಗರ, ಕಾರ್ಕಳ ಗ್ರಾಮಾಂತರ, ಪಡುಬಿದ್ರೆ, ಬೆಳ್ತಂಗಡಿ, ಉಡುಪಿ ನಗರ, ಗೋವಾ ಸೇರಿದಂತೆ ವಿವಿಧ ಪೊಲೀಸ್ ಠಾಣೆಗಳಲ್ಲಿ ಕಳ್ಳತನ ಪ್ರಕರಣಗಳು ದಾಖಲಾಗಿವೆ.

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ತಾಲೂಕು, ಮಂಗಳೂರು

ಮಂಗಳೂರು : ಲೈಟ್ ಕಂಬ ಮುರಿದು ಮೈಮೇಲೆ ಬಿದ್ದು ಮೀನು ಕಾರ್ಮಿಕ ಸಾವು

ಟಾಪ್ ಸುದ್ದಿಗಳು, ರಾಜ್ಯ / ದೇಶ

ಕಲ್ಲಂಗಡಿ, ಐಸ್ ಕ್ರೀಂ ತಿನ್ನುವ ಮುನ್ನ ಹುಷಾರ್‌ – ಆರೋಗ್ಯ ಇಲಾಖೆ ಎಚ್ಚರಿಕೆ !

ಟಾಪ್ ಸುದ್ದಿಗಳು, ತಾಲೂಕು, ಬೆಳ್ತಂಗಡಿ

ಉಜಿರೆ : ಮಾರ್ಚ್ 3ರಿಂದ ಶ್ರೀ ಜನಾರ್ದನ ದೇವಸ್ಥಾನದ ಬ್ರಹ್ಮಕಲಶೋತ್ಸವ, ವಿಜಯಗೋಪುರ ಲೋಕಾರ್ಪಣೆ, ನೂತನಬ್ರಹ್ಮರಥ, ಪುಷ್ಪರಥ ಸಮರ್ಪಣೆ – ಶ್ರೀ ಶರತ್ ಕೃಷ್ಣಪಡ್ವೆಟ್ನಾಯ

⚠️ Contents are protected on this website.