ಬೆಳ್ತಂಗಡಿ : ಪೊಲೀಸ್ ಸಿಬ್ಬಂದಿಯ ಮನೆಯಲ್ಲೇ ಕೈ ಚಳಕ ತೋರಿದ ಕಳ್ಳರು – ಪ್ರಕರಣ ದಾಖಲು !

ಪದ್ಮುಂಜ, ಮೇ. 15 : ಇಲ್ಲಿಯ ಗಾಡಕೋಡಿ ಎಂಬಲ್ಲಿಯ ಬೆಳ್ತಂಗಡಿ ಪೋಲೀಸ್ ಸಿಬ್ಬಂದಿ ಕರುಣಾಕರ ಗೌಡ ಎಂಬವರ ಮನೆಯಲ್ಲಿ ಕಳ್ಳತನವಾದ ಬಗ್ಗೆ ಉಪ್ಪಿನಂಗಡಿ ಪೊಲೀಸರಿಗೆ ದೂರು ನೀಡಿದ್ದಾರೆ.

Advertisement

ಸುಮಾರು 13 ಲಕ್ಷ ರೂಪಾಯಿ ವೆಚ್ಚದ ಚಿನ್ನಾಭರಣ ಹಾಗೂ ಒಂದು ಲಕ್ಷ ರೂಪಾಯಿ ನಗದು ಕಳುವಾಗಿದೆ ಎಂದು ದೂರು ನೀಡಿಲಾಗಿದೆ . ಮನೆಯ ಒಡೆಯ ಕರುಣಾಕರ ಮನೆಯಲ್ಲಿ ಒಬ್ಬರೇ ಇದ್ದು ಪತ್ನಿ ಮಕ್ಕಳು ಬೆಂಗಳೂರಿನಲ್ಲಿ ವಾಸಿಸುತ್ತಿರುವುದೆಂದು ತಿಳಿದುಬಂದಿದೆ.

ಕರುಣಾಕರ ಅವರು ರಾತ್ರಿ ಸುಮಾರು ಒಂದು ಗಂಟೆಯವರೆಗೂ ಎಚ್ಚರದಲ್ಲಿದ್ದರು. ಬೆಳಿಗ್ಗೆ ಏಳೂವರೆ ಗಂಟೆಗೆ ಎದ್ದು, ನೋಡುವಾಗ ಬಾಗಿಲಿನ ಚಿಲಕ ತೆರೆದಿರುವುನ್ನು ಕಂಡು ಸಂಶಯಗೊಂಡ ಕರುಣಾಕರ ಗೌಡರು ಪರಿಶೀಲಿಸಿದಾಗ ಮನೆಯೊಳಗೆ ಕಳವಾಗಿರುವುದು ಬೆಳಕಿಗೆ ಬಂದಿದೆ.

ಬೆಳ್ತಂಗಡಿ ಉಪ ವಿಭಾಗಾಧಿಕಾರಿ ರೋಹಿಣಿ ಠಾಣಾಧಿಕಾರಿ ಕೌಶಿಕ್ ಬಿ ಸಿ. ಬೆಳ್ತಂಗಡಿ ವತ್ತ ನಿರೀಕ್ಷಕರು ರವಿ ಬಿ ಎಸ್ ರವರು ಸ್ಥಳಕ್ಕೆ ಭೇಟಿ ತನಿಖೆ ನಡೆಸುತ್ತಿದ್ದಾರೆ.

ಇನ್ನು, ಬೆಳ್ತಂಗಡಿ ತಾಲೂಕಿನ ಹಲವು ಕಡೆಗಳಲ್ಲಿ ಕಳೆದ ಹಲವು ದಿನಗಳಿಂದ ಕಳ್ಳತನ ಕೃತ್ಯಗಳು ಬೆಳಕಿಗೆ ಬರುತ್ತಿದೆ. ಕೆಲ ದಿನಗಳ ಹಿಂದೆ ತಾಲೂಕಿನ ಎರಡು ದೇವಸ್ಥಾನಗಳಲ್ಲಿ ಕಳ್ಳತನ ಕೃತ್ಯ ನಡೆದಿತ್ತು ಆದರೆ ಕಳ್ಳರ ಸುಳಿವು ಪತ್ತೆಯಾಗಿಲ್ಲ. ಇದೀಗ ಪೊಲೀಸ್ ಸಿಬ್ಬಂದಿಯ ಮನೆಯಲ್ಲಿಯೇ ಕಳ್ಳತನ ಕೃತ್ಯ ನಡೆದಿರುವುದು ಸಾರ್ವಜನಿಕರ ಆತಂಕಕ್ಕೆ ಕಾರಣವಾಗಿದೆ.

Advertisement
Advertisement

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಟಾಪ್ ಸುದ್ದಿಗಳು, ರಾಜ್ಯ / ದೇಶ

ನವದೆಹಲಿ : ಪ್ರಶ್ನೆ ಪತ್ರಿಕೆ ಸೋರಿಕೆ ತಡೆ ಕಾನೂನು ತಿದ್ದುಪಡಿ ಮಸೂದೆ ಅಂಗೀಕಾರ

ಟಾಪ್ ಸುದ್ದಿಗಳು, ರಾಜ್ಯ / ದೇಶ

ಬೆಂಗಳೂರು : ಭೀಕರ ರೈಲು ಅಪಘಾತ : ಕ್ರಿಕೆಟ್ ಮೈದಾನಕ್ಕೆ ತೂರಿ ಬಿದ್ದಿದ್ದ ವ್ಯಕ್ತಿಯ ರುಂಡ !

ತಾಲೂಕು, ಬೆಳ್ತಂಗಡಿ

ಉಪ್ಪಿನಂಗಡಿ : ನಿಂತಿದ್ದ ಟಿಪ್ಪರ್ ಹಿಂಬದಿಗೆ ಕಾರು ಢಿಕ್ಕಿ – 4 ವರ್ಷದ ಮಗು ಸೇರಿ ಐವರಿಗೆ ಗಾಯ

⚠️ Contents are protected on this website.