ಬಂಟ್ವಾಳ : ಬಸ್ ನಲ್ಲಿ ಬ್ಯಾಗ್‌ನಿಂದ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಕಳವು – ಸೊತ್ತು ಸಹಿತ ಆರೋಪಿಯ ಬಂಧನ

Advertisement

ಬಂಟ್ವಾಳ, ಮಾ. 10 : ಸುಮಾರು ಐದು ತಿಂಗಳ ಹಿಂದೆ ಬಸ್ ನಲ್ಲಿ ಬ್ಯಾಗ್‌ನಿಂದ ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನಾಭರಣ ಕಳವು ಮಾಡಿದ್ದ ಪ್ರಕರಣವನ್ನು ಭೇದಿಸುವಲ್ಲಿ ಬಂಟ್ವಾಳ ನಗರ ಪೊಲೀಸರು ಯಶಸ್ವಿಯಾಗಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಮಧ್ಯಪ್ರದೇಶ ಮೂಲದ ಆರೋಪಿಯನ್ನು ಬಂಧಿಸಿ, ಆಭರಣಗಳನ್ನು ವಶಪಡಿಸಿಕೊಳ್ಳಲಾಗಿದೆ.

Advertisement

ಘಟನೆಯ ಹಿನ್ನೆಲೆ

Advertisement

2025ರ ನವೆಂಬರ್ 19ರಂದು ಬ್ರಹ್ಮಾವರ ಮೂಲದ ದಂಪತಿಗಳು ದುರ್ಗಾಂಬಾ ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದರು. ಬಂಟ್ವಾಳ ತಾಲೂಕಿನ ಕಲ್ಲಡ್ಕ ಸಮೀಪದ ಕುದ್ರೆಬೆಟ್ಟು ಎಂಬಲ್ಲಿರುವ ‘ಸಮುದ್ರ ಹೋಟೆಲ್’ ಬಳಿ ಬಸ್ ನಿಂತಿದ್ದ ಸಂದರ್ಭದಲ್ಲಿ, ದಂಪತಿಗಳ ಬ್ಯಾಗ್‌ನಲ್ಲಿದ್ದ 180 ಗ್ರಾಂ ತೂಕದ (ಅಂದಾಜು 20 ಲಕ್ಷ ರೂ. ಮೌಲ್ಯದ) ಚಿನ್ನಾಭರಣಗಳನ್ನು ಕಳವು ಮಾಡಲಾಗಿತ್ತು. ಈ ಬಗ್ಗೆ ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಆರೋಪಿಯ ಬಂಧನ

ಪೊಲೀಸರು ತನಿಖೆ ಚುರುಕುಗೊಳಿಸಿ, ಕೃತ್ಯ ಎಸಗಿದ ಮಧ್ಯಪ್ರದೇಶ ನಿವಾಸಿ ಸಮದ್ ಖಾನ್ (37) ಎಂಬಾತನನ್ನು ಬಂಧಿಸಿದ್ದಾರೆ. ಆರೋಪಿಯಿಂದ ಕಳವು ಮಾಡಲಾದ ಚಿನ್ನಾಭರಣಗಳನ್ನು ವಶಕ್ಕೆ ಪಡೆಯಲಾಗಿದ್ದು, ಆತನನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.

ಪೊಲೀಸ್ ತಂಡದ ಕಾರ್ಯಾಚರಣೆ

ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಅರುಣ್ ಕೆ. ಹಾಗೂ ಹೆಚ್ಚುವರಿ ಪೊಲೀಸ್ ಅಧೀಕ್ಷಕ ಅನಿಲ್ ಕುಮಾರ್ ಭೂಮರೆಡ್ಡಿ ಅವರ ಮಾರ್ಗದರ್ಶನದಲ್ಲಿ ಬಂಟ್ವಾಳ ಎ.ಎಸ್.ಪಿ ಯಶ್ ಕುಮಾರ್ ಶರ್ಮಾ ನಿರ್ದೇಶನದಂತೆ, ತನಿಖಾಧಿಕಾರಿ ಹಾಗೂ ಬಂಟ್ವಾಳ ನಗರ ಇನ್ಸ್‌ಪೆಕ್ಟರ್ ಆನಂತ ಪದ್ಮನಾಭ ನೇತೃತ್ವದಲ್ಲಿ ಬಂಟ್ವಾಳ ನಗರ ಪೊಲೀಸ್ ಠಾಣೆಯ ಪೊಲೀಸ್ ಉಪ ನಿರೀಕ್ಷಕರಾದ ಸಂದೀಪ್ ಕುಮಾರ್ ಶೆಟ್ಟಿ, ಬಂಟ್ವಾಳ ನಗರ ಪೊಲೀಸ್ ಠಾಣೆಯ ಸಿಬ್ಬಂದಿಗಳಾದ ವಿಜಯ್ ಕುಮಾರ್, ಸುರೇಶ್ ಕುಮಾರ್, ರಾಜೇಶ್, ಇರ್ಷಾದ್ ಪಿ, ಬಸವರಾಜ್, ವಿಜಯ್ ಕುಮಾರ್, ಮಪಿಸಿ ರೇವತಿ ಹಾಗೂ ಜಿಲ್ಲಾ ಪೊಲೀಸ್ ಘಟಕದ ಗಣಕಯಂತ್ರ ಘಟಕದ ಸಂಪತ್ ಕುಮಾರ್ ಮತ್ತು ದಿವಾಕರ್ ಈ ಯಶಸ್ವಿ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.

Advertisement
Advertisement

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಟಾಪ್ ಸುದ್ದಿಗಳು, ತಾಲೂಕು, ಬೆಳ್ತಂಗಡಿ

ಬೆಳ್ತಂಗಡಿ : ಗಣೇಶೋತ್ಸವ ಹಿನ್ನೆಲೆ ಶಾಂತಿ ಸಭೆ : ನಿಯಮ ಮೀರಿದರೆ ಅನುಮತಿ ರದ್ದು – ಕಾನೂನು ಕ್ರಮದ ಎಚ್ಚರಿಕೆ

ಕರಾವಳಿ, ಟಾಪ್ ಸುದ್ದಿಗಳು

ಕಾಸರಗೋಡು : ಜಿಂಕೆ ಬೇಟೆಯಾಡಿ ಮಾಂಸ ಸಾಗಿಸುತ್ತಿದ್ದ ಆರೋಪ – ಓರ್ವನ ಬಂಧನ

ಟಾಪ್ ಸುದ್ದಿಗಳು, ತಾಲೂಕು, ಬೆಳ್ತಂಗಡಿ

ಬೆಳ್ತಂಗಡಿ : ಮನೆಯ ಬಾವಿಗೆ ಹಾರಿ ಯುವತಿ ಆತ್ಮಹತ್ಯೆ