ಕಲ್ಮಂಜ : ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ, ಸಿದ್ಧಬೈಲು ಇದರ 20ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Advertisement

ಕಲ್ಮಂಜ, ಸೆ. 02 : ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ, ವಿಶ್ವ ಹಿಂದೂ ಪರಿಷತ್, ಭಜರಂಗದಳ ಕಲ್ಮಂಜ ಹಾಗೂ ಊರವರ ಸಂಯುಕ್ತ ಆಶ್ರಯದಲ್ಲಿ ನಡೆಯುವ 20ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವದ ಆಮಂತ್ರಣ ಪತ್ರಿಕೆ ಇಂದು ಪಜೀರಡ್ಕ ಶ್ರೀ ಸದಾಶಿವೇಶ್ವರ ದೇವಸ್ಥಾನದಲ್ಲಿ ಬಿಡುಗಡೆಗೊಳಿಸಲಾಯಿತು.

ದೇವಸ್ಥಾನದ ಪ್ರಧಾನ ಅರ್ಚಕರಾದ ಶ್ರೀ ರಾಜೇಶ್ ಹೊಳ್ಳ ಇವರು ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿ, ಆಮಂತ್ರಣ ಪತ್ರಿಕೆ ಬಿಡುಗಡೆಗೊಳಿಸಿದರು.

ಈ ಸಂದರ್ಭದಲ್ಲಿ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯ ಅಧ್ಯಕ್ಷರಾದ ಶ್ರೀ ಮೋಹನ್ ಕುಮಾರ್ ಮೂಡಯಿಬೆಟ್ಟು, ಉಪಾಧ್ಯಕ್ಷರಾದ ಶ್ರೀ ಪ್ರವೀಣ್ ಗೌಡ ಕರಿಯನೆಲ, ಕಾರ್ಯದರ್ಶಿ ಶ್ರೀ ಲೋಹಿತ್ ಕುಮಾರ್, ವಿಶ್ವ ಹಿಂದೂ ಪರಿಷತ್ ಸಿದ್ದಬೈಲು ಘಟಕ ಅಧ್ಯಕ್ಷರಾದ ಶ್ರೀ ಸಾಂತಪ್ಪ ಎಂ., ಪದಾಧಿಕಾರಿಗಳಾದ ಶ್ರೀ ಅನಿಲ್ ಎಂ., ಶ್ರೀ ಸಂದೀಪ್ ಎಸ್., ಶ್ರೀ ಧನಂಜಯ ಎಂ., ಶ್ರೀ ಸತ್ಯಪ್ರಸಾದ್, ಶ್ರೀ ಗಿರಿಧರ, ಶ್ರೀ ಗುರುರಾಜ್ ಕರಿಯನೆಲ ಉಪಸ್ಥಿತರಿದ್ದರು.

Advertisement
Advertisement

Advertisement
Advertisement

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಟಾಪ್ ಸುದ್ದಿಗಳು, ತಾಲೂಕು, ಬೆಳ್ತಂಗಡಿ

ಬೆಳ್ತಂಗಡಿ : ಗಣೇಶೋತ್ಸವ ಹಿನ್ನೆಲೆ ಶಾಂತಿ ಸಭೆ : ನಿಯಮ ಮೀರಿದರೆ ಅನುಮತಿ ರದ್ದು – ಕಾನೂನು ಕ್ರಮದ ಎಚ್ಚರಿಕೆ

ಕರಾವಳಿ, ಟಾಪ್ ಸುದ್ದಿಗಳು

ಕಾಸರಗೋಡು : ಜಿಂಕೆ ಬೇಟೆಯಾಡಿ ಮಾಂಸ ಸಾಗಿಸುತ್ತಿದ್ದ ಆರೋಪ – ಓರ್ವನ ಬಂಧನ

ಟಾಪ್ ಸುದ್ದಿಗಳು, ತಾಲೂಕು, ಬೆಳ್ತಂಗಡಿ

ಬೆಳ್ತಂಗಡಿ : ಮನೆಯ ಬಾವಿಗೆ ಹಾರಿ ಯುವತಿ ಆತ್ಮಹತ್ಯೆ