ಕಾನರ್ಪ : ಅಕ್ರಮ ಗೋ ಸಾಗಾಟ – ತಡೆಯಲು ಬಂದ ಸಾರ್ವಜನಿಕರ ಮೇಲೆಯೇ ಪಿಕಪ್ ಹರಿಸಲು ಯತ್ನ !

​ಕಾನರ್ಪ, ಜೂ. 4 : ಇಲ್ಲಿನ ಪಣಿಕಲ್ ರಾಘವೇಂದ್ರ ಭಟ್ಟರ ಮನೆಯಿಂದ ತೋಟತ್ತಾಡಿ ಅನಿಲ್ ಎಂಬವರ ಮನೆಗೆ ಅಕ್ರಮವಾಗಿ ಸಾಗಿಸುತ್ತಿದ್ದ ಪಿಕಪ್ ವಾಹನವು ಅಡ್ಡಗಟ್ಟಿತಡೆಯಲು ಬಂದವರ ಮೇಲೆ , ಡಿಕ್ಕಿ ಹೊಡೆಯುವ ರೀತಿಯಲ್ಲಿ ಬಂದು ಪರಾರಿಯಾದ ಆಘಾತಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ಅಕ್ರಮ ಗೋ ಸಾಗಾಟದ ಜಾಲ ಇದರಲ್ಲಿ ಭಾಗಿಯಾಗಿರುವುದು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ.

Advertisement

ಪನಿಕ್ಕಲ್ ​ರಾಘವೇಂದ್ರ ಭಟ್ಟರ ಮನೆಯಿಂದ ಹೊರಟಿದ್ದ ಗೋಕಳ್ಳರು ಪಿಕಪ್ ನಲ್ಲಿ ತೆರಳುತ್ತಿದ್ದಾಗ, ಸಾರ್ವಜನಿಕರು ತಡೆಯಲು ಯತ್ನಿಸಿದ್ದಾರೆ. ದುಷ್ಕರ್ಮಿಗಳು ಯುವಕರ ಬೈಕಿಗೆ ಮುಖಾಮುಖಿಯಾಗಿ ಡಿಕ್ಕಿ ಹೊಡೆಯುವಂತೆ ಅತ್ಯಂತ ಅಪಾಯಕಾರಿ ರೀತಿಯಲ್ಲಿ ವಾಹನ ಚಲಾಯಿಸಿ ಭೀತಿ ಸೃಷ್ಟಿಸಿದ್ದಾರೆ ಎಂದು ಆರೋಪಿಸಲಾಗಿದೆ.

​ಮಂಜುಶ್ರೀನಗರದಲ್ಲಿ ಗೋವನ್ನು ಬಿಟ್ಟು ಪರಾರಿ, ಒಬ್ಬ ವಶಕ್ಕೆ:

ತಮ್ಮ ಕೃತ್ಯವನ್ನು ಸ್ಥಳೀಯ ಯುವಕರು ಗಮನಿಸಿ ಬೆನ್ನಟ್ಟುತ್ತಿದ್ದಂತೆ ಗಾಬರಿಗೊಂಡ ಗೋ ಕಳ್ಳರು, ಮಂಜುಶ್ರೀನಗರದ ಹತ್ತಿರ ಯಾರಿಗೂ ತಿಳಿಯದಂತೆ ಗೋವನ್ನು ಬಿಟ್ಟು ಕಾಲ್ಕಿತ್ತಿದ್ದಾರೆ. ಈ ವೇಳೆ ಸಾರ್ವಜನಿಕರು ಸಕಾಲದಲ್ಲಿ ಕಾರ್ಯಪ್ರವೃತ್ತರಾಗಿ ವಾಹನದಲ್ಲಿದ್ದ ಒಬ್ಬ ಆರೋಪಿ(ಅನಿಲ್ ತೋಟತ್ತಾಡಿ )ಯನ್ನು ಹಿಡಿದು ಪೊಲೀಸರಿಗೆ ಒಪ್ಪಿಸುವಲ್ಲಿ ಯಶಸ್ವಿಯಾಗಿದ್ದಾರೆ. ಆದರೆ ಪಿಕಪ್‌ನಲ್ಲಿದ್ದ ಇನ್ನುಳಿದ ಇಬ್ಬರು ಆರೋಪಿಗಳು ಸ್ಥಳದಿಂದ ಓಡಿ ಪರಾರಿಯಾಗಿದ್ದಾರೆ.

​ಸ್ಥಳಕ್ಕೆ ಧಾವಿಸಿದ ಪೊಲೀಸರು ಜಾನುವಾರು ವಶಕ್ಕೆ ಪಡೆದುಕೊಂಡಿದ್ದು, ಪರಾರಿಯಾದ ಇಬ್ಬರು ಆರೋಪಿಗಳ ಪತ್ತೆಗಾಗಿ ತೀವ್ರ ಜಾಲ ಬೀಸಿದ್ದಾರೆ. ಸಾರ್ವಜನಿಕ ರಸ್ತೆಯಲ್ಲೇ ಬೈಕ್ ಸವಾರರ ಪ್ರಾಣಕ್ಕೆ ಸಂಚಕಾರ ತರುವಂತೆ ವರ್ತಿಸಿದ ಈ ಗೋ ಕಳ್ಳರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಸ್ಥಳೀಯರು ಆಗ್ರಹಿಸಿದ್ದಾರೆ.

Advertisement
Advertisement

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ತಾಲೂಕು, ಬೆಳ್ತಂಗಡಿ

ಬೆಳ್ತಂಗಡಿ : ಕರ್ನಾಟಕ ಸ್ಟೇಟ್ ಟೈಲರ್ಸ್ ಅಸೋಸಿಯೇಶನ್ (ರಿ.) ಕ್ಷೇತ್ರ ಸಮಿತಿ ಬೆಳ್ತಂಗಡಿ ವತಿಯಿಂದ “ಆಟಿದ ಕಮ್ಮೆನ ಬೊಕ್ಕಗೊಬ್ಬು”

ಟಾಪ್ ಸುದ್ದಿಗಳು, ವಿದೇಶ

ಟೋಕಿಯೋ : ಜಪಾನ್ ನಲ್ಲಿ 7.1 ತೀವ್ರತೆಯ ಪ್ರಬಲ ಭೂಕಂಪ – ಭೀಕರ ಸುನಾಮಿ ಎಚ್ಚರಿಕೆ !

ಟಾಪ್ ಸುದ್ದಿಗಳು, ತಾಲೂಕು, ಮಂಗಳೂರು

ಮಂಗಳೂರು : ಖಾಸಗಿ ಬಸ್ – ಬೈಕ್ ಮಧ್ಯೆ ಅಪಘಾತ; ಪತಿ ಸಾವು, ಪತ್ನಿಗೆ ಗಂಭೀರ

⚠️ Contents are protected on this website.