ಕನ್ಯಾಡಿ : ಕನ್ಯಾಡಿ ಶ್ರೀ ರಾಮ ಕ್ಷೇತ್ರದಲ್ಲಿ 66ನೇ ವರ್ಷದ ಶ್ರೀ ರಾಮ ನಾಮ ತಾರಕ ಮಂತ್ರ ಸಪ್ತಾಹಕ್ಕೆ ಚಾಲನೆ – ಮಾ.20 ರಿಂದ ಮಾ.27ರವರೆಗೆ ಪ್ರತಿಷ್ಠಾ ಜಾತ್ರಾ ಮಹೋತ್ಸವ

ಕನ್ಯಾಡಿ, ಮಾ.​ 20 : ಜಗದ್ಗುರು ಶ್ರೀ ಶ್ರೀ ಆತ್ಮಾನಂದ ಸರಸ್ವತಿ ಸ್ವಾಮೀಜಿಯವರ ದಿವ್ಯಸ್ಮರಣೆಯೊಂದಿಗೆ ಮಹಾಮಂಡಲೇಶ್ವರ 1008 ಶ್ರೀ ಸ್ವಾಮಿ ಸದ್ಗುರು ಬ್ರಹ್ಮಾನಂದ ಸರಸ್ವತಿ ಮಹಾರಾಜರವರ ನೇತೃತ್ವದಲ್ಲಿ ದಕ್ಷಿಣದ ಅಯೋಧ್ಯೆಯೆಂದೇ ಕರೆಯಲ್ಪಡುವ ಶ್ರೀ ರಾಮ ಭಗವಾನ್ ನಿತ್ಯಾನಂದ ಮಂದಿರದಲ್ಲಿ 66ನೇ ವರ್ಷದ ಶ್ರೀ ರಾಮ ನಾಮ ತಾರಕ ಮಂತ್ರ ಸಪ್ತಾಹ ಸಮಾರಂಭ ಹಾಗೂ ಶ್ರೀ ರಾಮಕ್ಷೇತ್ರ ಮಹಾಸಂಸ್ಥಾನದ ಪ್ರತಿಷ್ಠಾ ಜಾತ್ರಾ ಮಹೋತ್ಸವ ಮತ್ತು ಮಹಾಬ್ರಹ್ಮ ರಥೋತ್ಸವವು ಮಾ.20 ರಿಂದ ಪ್ರಾರಂಭಗೊಂಡು ಮಾ.27ರವರೆಗೆ ನಡೆಯಲಿದೆ.

Advertisement

ಮಾ.20ರಂದು ಬೆಳಿಗ್ಗೆ ಶ್ರೀ ರಾಮ ಕ್ಷೇತ್ರ ಮಹಾಸಂಸ್ಥಾನದ ಜಗದ್ಗುರು ಪೀಠದ ಪೀಠಾಧೀಶರಾದ ಮಹಾಮಂಡಲೇಶ್ವರ 1008 ಶ್ರೀ ಸ್ವಾಮಿ ಸದ್ಗುರು ಬ್ರಹ್ಮಾನಂದ ಸರಸ್ವತಿ ಮಹಾರಾಜರವರ ದಿವ್ಯ ಸಾನ್ನಿಧ್ಯದಲ್ಲಿ ಶ್ರೀರಾಮ ನಾಮ ಸಪ್ತಾಹದ ಅಖಂಡ ನಂದಾದೀಪವನ್ನು ಜ್ಯೋತಿ ಬೆಳಗಿಸುವ ಮೂಲಕ ಚಾಲನೆ ನೀಡಲಾಯಿತು.

ಈ ಸಂದರ್ಭದಲ್ಲಿ ಮಹಾಮಂಡಲೇಶ್ವರ 1008 ಶ್ರೀ ಸ್ವಾಮಿ ಸದ್ಗುರು ಬ್ರಹ್ಮಾನಂದ ಸರಸ್ವತಿ ಮಹಾರಾಜರು, ದ.ಕ ಸಂಸದ ಕ್ಯಾ. ಬ್ರಿಜೇಶ್ ಚೌಟ, ಶಾಸಕ ಹರೀಶ್ ಪೂಂಜ, ಮೆಸ್ಕಾಂ ಅಧ್ಯಕ್ಷ ಕೆ. ಹರೀಶ್ ಕುಮಾರ್, ವಿಧಾನ ಪರಿಷತ್ ಶಾಸಕ ಕೆ. ಪ್ರತಾಪಸಿಂಹ ನಾಯಕ್, ಬಿಜೆಪಿ ಬೆಳ್ತಂಗಡಿ ಮಂಡಲ ಅಧ್ಯಕ್ಷ ಶ್ರೀನಿವಾಸ್‌ ರಾವ್ ಧರ್ಮಸ್ಥಳ, ಪ್ರಮುಖರಾದ ಭಗೀರಥ ಜಿ, ಸುನಿಲ್ ಕನ್ಯಾಡಿ, ರವೀಂದ್ರ ಪೂಜಾರಿ ಆರ್ಲ, ತುಕಾರಾಮ ಸಾಲಿಯಾನ್ ಆರ್ಲ, ಕೃಷ್ಣಪ್ಪ ಗುಡಿಗಾರ, ಸೀತರಾಮ ಬೆಳಾಲು, ಯತೀಶ್ ಕನ್ಯಾಡಿ ಶ್ರೀ ರಾಮ ಕ್ಷೇತ್ರ ಸಮಿತಿ ಪದಾಧಿಕಾರಿಗಳು ಗುರುದೇವ ಮಠ ಟ್ರಸ್ಟಿ ಮತ್ತು ಶ್ರೀ ರಾಮ ಕ್ಷೇತ್ರ ಮಹಾಸಂಸ್ಥಾನಮ್ ಟ್ರಸ್ಟ್ ನ ಟ್ರಸ್ಟಿಗಳು, ರಾಮ ಕ್ಷೇತ್ರ ಅಭಿವೃದ್ಧಿ ಸಮಿತಿ ಸದಸ್ಯರು, ವಿವಿಧ ಭಜನಾ ಮಂಡಳಿ ಸದಸ್ಯರು, ಭಕ್ತರು ಉಪಸ್ಥಿತರಿದ್ದರು.

Advertisement
Advertisement

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಟಾಪ್ ಸುದ್ದಿಗಳು, ರಾಜ್ಯ / ದೇಶ

ನವದೆಹಲಿ : ಪ್ರಶ್ನೆ ಪತ್ರಿಕೆ ಸೋರಿಕೆ ತಡೆ ಕಾನೂನು ತಿದ್ದುಪಡಿ ಮಸೂದೆ ಅಂಗೀಕಾರ

ಟಾಪ್ ಸುದ್ದಿಗಳು, ರಾಜ್ಯ / ದೇಶ

ಬೆಂಗಳೂರು : ಭೀಕರ ರೈಲು ಅಪಘಾತ : ಕ್ರಿಕೆಟ್ ಮೈದಾನಕ್ಕೆ ತೂರಿ ಬಿದ್ದಿದ್ದ ವ್ಯಕ್ತಿಯ ರುಂಡ !

ತಾಲೂಕು, ಬೆಳ್ತಂಗಡಿ

ಉಪ್ಪಿನಂಗಡಿ : ನಿಂತಿದ್ದ ಟಿಪ್ಪರ್ ಹಿಂಬದಿಗೆ ಕಾರು ಢಿಕ್ಕಿ – 4 ವರ್ಷದ ಮಗು ಸೇರಿ ಐವರಿಗೆ ಗಾಯ

⚠️ Contents are protected on this website.