ಕನ್ಯಾಡಿ : ಅಯೋಧ್ಯೆಯ ಕನ್ಯಾಡಿ ಶ್ರೀರಾಮ ಮಠದ ಯೋಜನೆಗೆ ಮಸ್ಕತ್‌ನ ಶ್ರೀರಾಮ ಭಕ್ತರಿಂದ ₹10 ಲಕ್ಷಕ್ಕೂ ಅಧಿಕ ದೇಣಿಗೆ

ಕನ್ಯಾಡಿ, ಅ. 24 : ಉತ್ತರ ಪ್ರದೇಶದ ಅಯೋಧ್ಯೆಯಲ್ಲಿ ಉದ್ದೇಶಿತ ಕನ್ಯಾಡಿ ಶ್ರೀರಾಮ ಮಠದ ನಿರ್ಮಾಣ ಯೋಜನೆಗೆ ಮಸ್ಕತ್‌ನಲ್ಲಿರುವ ಶ್ರೀರಾಮ ಭಕ್ತರು ಒಗ್ಗೂಡಿ ಸಂಗ್ರಹಿಸಿದ ₹10 ಲಕ್ಷಕ್ಕೂ ಅಧಿಕ ಮೊತ್ತವನ್ನು ಕನ್ಯಾಡಿಯ ಶ್ರೀರಾಮ ಕ್ಷೇತ್ರದ ಪರಮಪೂಜ್ಯ ಶ್ರೀ ಮಂಡಲೇಶ್ವರ ಶ್ರೀ ಬ್ರಹ್ಮಾನಂದ ಸ್ವಾಮೀಜಿ ಮಹಾರಾಜ್ ಇವರಿಗೆ ಹಸ್ತಾಂತರಿಸಲಾಯಿತು.

ಒಮಾನ್ ಬಿಲ್ಲವಾಸ್‌ ಮಸ್ಕತ್‌ನ ಮಾಜಿ ಅಧ್ಯಕ್ಷರು ಹಾಗೂ ಕನ್ಯಾಡಿಯ ಶ್ರೀರಾಮ ಕ್ಷೇತ್ರ ಮಹಾಸಂಸ್ಥಾನದ ಗಲ್ಫ್ ರಾಷ್ಟ್ದಗಳ ಉಪಾಧ್ಯಕ್ಷರಾದ ಸುಜಿತ್ ಅಂಚನ್ ಪಾಂಗಾಳ ಅವರ ನೇತೃತ್ವದಲ್ಲಿ ಈ ದೇಣಿಗೆಯನ್ನು ಹಸ್ತಾಂತರಿಸಲಾಯಿತು.

ಈ ಸಂದರ್ಭದಲ್ಲಿ ಬ್ರಹ್ಮಾವರ ಬಿಲ್ಲವ ಸಂಘದ ಅಧ್ಯಕ್ಷ ಬಿ. ಎನ್. ಶಂಕರ್ ಪೂಜಾರಿ, ಶ್ರೀ  ರಾಮ ಪೂಜಾರಿ ಕಲ್ಯಾಣಪುರ , ಕಟಪಾಡಿ ಶ್ರೀ ವಿಶ್ವನಾಥ ಕ್ಷೇತ್ರದ ಅಧ್ಯಕ್ಷ ಮಹೇಶ್ ಅಂಚನ್, ಉಡುಪಿ ಜಿಲ್ಲಾ ಬಿಲ್ಲವ ಮಹಾಮಂಡಲದ ಅಧ್ಯಕ್ಷೆ ಗೀತಾಂಜಲಿ ಸುವರ್ಣ, ಬಿಜೆಪಿ ಪ್ರಭಾರಿ ಜಯಂತ್ ಕೋಟ್ಯಾನ್, ಮೂಡುಬಿದಿರೆ ಮಂಡಲ ಬಿಜೆಪಿ ಕಾರ್ಯದರ್ಶಿ ರಂಜೀತ್ ಪೂಜಾರಿ ತೋಡಾರ್, ಬೆಳ್ತಂಗಡಿ ತಾಲೂಕು ಪಂಚಾಯತ್ ಮಾಜಿ ಸದಸ್ಯ ಮಂಜುನಾಥ್ ಸಾಲ್ಯಾನ್, ಯುವ ಉದ್ಯಮಿ ಕೆ. ಕಾಮರಾಜ್ ಸುವರ್ಣ, ಬಿರುವೆರ್ ಕಾಪು ಸಮಿತಿಯ ಸ್ಥಾಪಕಾಧ್ಯಕ್ಷ ಬಾಲಕೃಷ್ಣ ಕೋಟಿಯನ್, ಮಜೂರು ಗ್ರಾಮ ಪಂಚಾಯತ್ ಮಾಜಿ ಸದಸ್ಯ ಭಾಸ್ಕರ ಪೂಜಾರಿ, ರಾಮ ಪೂಜಾರಿ, ರಿತೇಶ್ ಕೋಟ್ಯಾನ್, ಶುಭ ರಾಜೇಂದ್ರ ಚಿಲಿಂಬಿ, ಸುರೇಂದ್ರ ಅಂಚನ್, ಉಮೇಶ್ ಬಂಗೇರ ಹಾಗೂ ದೀಪಕ್‌ರಾಜ್ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.

ಸಭಿಕರನ್ನು ಆತ್ಮೀಯವಾಗಿ ಸ್ವಾಗತಿಸಿದ ಪರಮಪೂಜ್ಯ ಶ್ರೀ ಶ್ರೀ ಬ್ರಹ್ಮಾನಂದ ಸ್ವಾಮೀಜಿಯವರು ಉಪಸ್ಥಿತರಿದ್ದ ಎಲ್ಲರಿಗೂ ಆಶೀರ್ವಚನ ನೀಡಿದರು.

ಮಸ್ಕತ್‌ನ ಶ್ರೀರಾಮ ಭಕ್ತರು ಉದಾರ ಮನಸ್ಸಿನಿಂದ ನೀಡಿರುವ ಈ ದೇಣಿಗೆಯು ಅವರ ಭಕ್ತಿ, ಒಗ್ಗಟ್ಟು ಹಾಗೂ ಅಯೋಧ್ಯೆಯಲ್ಲಿ ಉದ್ದೇಶಿತ ಶ್ರೀರಾಮ ಮಠದ ಅಭಿವೃದ್ಧಿಗೆ ಸಹಕರಿಸುವ ಬದ್ಧತೆಯನ್ನು ಪ್ರತಿಬಿಂಬಿಸುತ್ತದೆ. ವಿದೇಶದಲ್ಲಿ ನೆಲೆಸಿದ್ದರೂ ಧಾರ್ಮಿಕ ಕಾರ್ಯಗಳ ಬಗ್ಗೆ ತೋರುವ ಭಕ್ತರ ಕಾಳಜಿ, ಸಾಮೂಹಿಕ ಸೇವಾ ಮನೋಭಾವ ಮತ್ತು ಧಾರ್ಮಿಕ ಯೋಜನೆಗಳಿಗೆ ಬೆಂಬಲ ನೀಡುವ ಅವರ ಸಮರ್ಪಣಾ ಭಾವಕ್ಕೆ ಈ ಕಾರ್ಯವು ಸಾಕ್ಷಿಯಾಗಿದೆ.

Advertisement

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ತಾಲೂಕು, ಬೆಳ್ತಂಗಡಿ

ಉಜಿರೆ ಎಸ್‌ಡಿಎಂಐಟಿಯಲ್ಲಿ ಅ. 29ರಿಂದ ‘ಸ್ಪರ್ಧಂ-2026’ ಅಂತರಕಾಲೇಜು ಸ್ಪರ್ಧೋತ್ಸವ – ಅ. 30ರಂದು ಸ್ಟಾರ್ ನೈಟ್

ಟಾಪ್ ಸುದ್ದಿಗಳು, ರಾಜ್ಯ / ದೇಶ

ಮುಂಬೈ : ನೆಪಕ್ಕೆ ರ‍್ಯಾಪಿಡೋ ರೈಡರ್ : ಪ್ರಧಾನಿ ಮೋದಿ ಹತ್ಯೆಗೆ ಜೈಶ್ ಉಗ್ರರೊಂದಿಗೆ ಸಂಚು ರೂಪಿಸುತ್ತಿದ್ದ ಅಖ್ತರ್ ಎಂಬಾತ ಎಟಿಎಸ್ ಬಲೆಗೆ

ತಾಲೂಕು, ಬೆಳ್ತಂಗಡಿ

ಬೆಳ್ತಂಗಡಿ : ಯುವ ವಾಹಿನಿ (ರಿ.) ಕೇಂದ್ರ ಸಮಿತಿ ಮಂಗಳೂರು ಆಶ್ರಯದಲ್ಲಿ, ಬೆಳ್ತಂಗಡಿ ಘಟಕದ ಆತಿಥ್ಯದಲ್ಲಿ ಅ. 25ರಂದು “ಬೃಹತ್ ರಕ್ತದಾನ ಶಿಬಿರ ಮತ್ತು ವೈದ್ಯಕೀಯ ಶಿಬಿರ”