ಕಾಪು : ಕೌನ್ಸಿಲಿಂಗ್ ನೆಪದಲ್ಲಿ ಮಹಿಳೆಯೊಂದಿಗೆ ಅಸಭ್ಯ ವರ್ತನೆ ಆರೋಪ- ಆರೋಪಿಯ ಬಂಧನ

Advertisement

ಕಾಪು : ಕೌನ್ಸಿಲಿಂಗ್ ನೆಪದಲ್ಲಿ ಮಹಿಳೆಯೊಂದಿಗೆ ಅಸಭ್ಯವಾಗಿ ವರ್ತಿಸಿ, ಲೈಂಗಿಕ ಕಿರುಕುಳ ಆರೋಪದಡಿ ಕಾಪು ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ಮೂಳೂರು ಗ್ರಾಮದ ಕಂಕಣಗುತ್ತು ನಿವಾಸಿ ನಿರಂಜನ ಶೇಖರ ಶೆಟ್ಟಿ ಬಂಧಿತ ಆರೋಪಿ ಎಂದು ಗುರುತಿಸಲಾಗಿದೆ.

Advertisement

ಸಂತ್ರಸ್ತ ಮಹಿಳೆಯೋರ್ವರು ದಾಂಪತ್ಯ ಸಮಸ್ಯೆಯ ಬಗ್ಗೆ ಕೌನ್ಸಿಲಿಂಗ್ ಪಡೆದುಕೊಳ್ಳುವುದಕ್ಕಾಗಿ ಆರೋಪಿಯ “ಸುನಂದಾ ವೆಲ್‌ನೆಸ್‌ ಸೆಂಟರ್‌” ಗೆ ಭೇಟಿ ನೀಡಿದ್ದರೆನ್ನಲಾಗಿದೆ. ಈ ಸಂದರ್ಭ ಕೌನ್ಸಿಲಿಂಗ್ ನೆಪದಲ್ಲಿ ಆರೋಪಿಯು ಮಹಿಳೆಯ ಜೊತೆಗೆ ಅಸಭ್ಯವಾಗಿ ವರ್ತಿಸಿ, ಲೈಂಗಿಕ ಕಿರುಕುಳ ನೀಡಿದ್ದ ಎಂದು ಆರೋಪಿಸಲಾಗಿದೆ. ಈ ಬಗ್ಗೆ ಮಹಿಳೆಯು ಕಾಪು ಪೊಲೀಸ್ ಠಾಣೆಯಲ್ಲಿ ಲಿಖಿತ ದೂರು ದಾಖಲಿಸಿದ್ದರು. ತಕ್ಷಣ ಕಾರ್ಯಪ್ರವೃತ್ತರಾದ ಕಾಪು ಪೊಲೀಸರು ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

Advertisement

Advertisement
Advertisement

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಟಾಪ್ ಸುದ್ದಿಗಳು, ತಾಲೂಕು, ಬೆಳ್ತಂಗಡಿ

ಬೆಳ್ತಂಗಡಿ : ಗಣೇಶೋತ್ಸವ ಹಿನ್ನೆಲೆ ಶಾಂತಿ ಸಭೆ : ನಿಯಮ ಮೀರಿದರೆ ಅನುಮತಿ ರದ್ದು – ಕಾನೂನು ಕ್ರಮದ ಎಚ್ಚರಿಕೆ

ಕರಾವಳಿ, ಟಾಪ್ ಸುದ್ದಿಗಳು

ಕಾಸರಗೋಡು : ಜಿಂಕೆ ಬೇಟೆಯಾಡಿ ಮಾಂಸ ಸಾಗಿಸುತ್ತಿದ್ದ ಆರೋಪ – ಓರ್ವನ ಬಂಧನ

ಟಾಪ್ ಸುದ್ದಿಗಳು, ತಾಲೂಕು, ಬೆಳ್ತಂಗಡಿ

ಬೆಳ್ತಂಗಡಿ : ಮನೆಯ ಬಾವಿಗೆ ಹಾರಿ ಯುವತಿ ಆತ್ಮಹತ್ಯೆ