ಕರಾವಳಿಗೆ ಅಪ್ಪಳಿಸಿದ ಉಷ್ಣ ಅಲೆ – ಮನೆಯಿಂದ ಹೊರ ಬರುವ ಮುನ್ನ ಎಚ್ಚರ ! ತಾಪಮಾನ 45 ಡಿಗ್ರಿ ಸೆಲ್ಸಿಯಸ್​ಗೆ ಏರುವ ಸಾಧ್ಯತೆ

Advertisement

ಕರಾವಳಿ, ಏ. 18 : ಬೇಸಿಗೆಗೆ ಕಾಲಿಡುವಷ್ಟರಲ್ಲೇ ರಾಜ್ಯದಾದ್ಯಂತ ಉಷ್ಣ ಅಲೆ (Karnataka Weather) ಆವರಿಸಿದೆ. ಬೆಂಗಳೂರು ಸೇರಿದಂತೆ ಹಲವೆಡೆ ತಾಪಮಾನ ಹೆಚ್ಚಾಗಿದ್ದು, ಮುಂದಿನ 2 ದಿನಗಳಲ್ಲಿ ಪರಿಸ್ಥಿತಿ ಇನ್ನಷ್ಟು ಹದಗೆಡಬಹುದೆಂದು ಹವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿದೆ. ಈಗಾಗಲೇ ಕರಾವಳಿ ಹಾಗೂ ಕಲ್ಯಾಣ ಕರ್ನಾಟಕವು ಬಿಸಿಲಿನ ಬೇಗೆ ತತ್ತರಿಸಿದ್ದು, ಮುಂಬರುವ ದಿನಗಳಲ್ಲಿ ಈ ಭಾಗಗಳ ತಾಪಮಾನ 45 ಡಿಗ್ರಿ ಸೆಲ್ಸಿಯಸ್​ಗೆ ಏರುವ ಸಾಧ್ಯತೆಯಿದೆ. ಹೀಗಾಗಿ ಬೆಳಿಗ್ಗೆ 10 ರಿಂದ ಸಂಜೆ 5 ರವರೆಗೆ ಅನಗತ್ಯವಾಗಿ ಹೊರಗೆ ಬರಬೇಡಿ, ಹೆಚ್ಚು ನೀರು ಸೇವಿಸಿ ಎಂದು ವೈದ್ಯರು ಸಲಹೆ ನೀಡಿದ್ದಾರೆ.

Advertisement

ಕರಾವಳಿಯು ಬಿಸಿಲ ಬೇಗೆಯಲ್ಲಿ ಸುಡುತ್ತಿದೆ. ಉತ್ತರ ಕನ್ನಡದಲ್ಲಿ ಇಂದಿನ ತಾಪಮಾನ 37 ಡಿಗ್ರಿ ಸೆಲ್ಸಿಯಸ್ ಇದ್ದು, ಇದು 42 ಡಿಗ್ರಿಗೂ ಏರಿಕೆಯಾಗಬಹುದು. ಉಡುಪಿ ಮತ್ತು ದಕ್ಷಿಣ ಕನ್ನಡದಲ್ಲಿಯೂ ಹೆಚ್ಚಿನ ತಾಪಮಾನ ದಾಖಲಾಗಿದ್ದು, ಈ ನಡುವೆ ಸಾಧಾರಣ ಮಳೆಯಾಗುವ ಸಂಭವವೂ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಅಲ್ಲದೆ ವಿಜಯಪುರ, ಕಲಬುರ್ಗಿ, ಬೀದರ್ ಮತ್ತು ಬಾಗಲಕೋಟೆ ಜಿಲ್ಲೆಗಳಲ್ಲಿಯೂ ಹೀಟ್ ವೇವ್ ಅಲರ್ಟ್​ ನೀಡಲಾಗಿದೆ.

Advertisement

ಉಷ್ಣಾಘಾತದಿಂದ ರಕ್ಷಣೆ ಹೇಗೆ?

ಮುಂಬರುವ ದಿನಗಳಲ್ಲಿ ರಾಜ್ಯದೆಲ್ಲೆಡೆ ತಾಪಮಾನ ಇನ್ನಷ್ಟು ಹೆಚ್ಚಾಗುವ ಸಾಧ್ಯತೆ ಇರುವುದರಿಂದ ಮುನ್ನೆಚ್ಚರಿಕಾ ಕ್ರಮ ವಹಿಸುವಂತೆ ಹವಾಮಾನ ಇಲಾಖೆ ಸೂಚಿಸಿದೆ. ಅವಶ್ಯಕತೆ ಇಲ್ಲದೆ ಮನೆಯಿಂದ ಹೊರಬರುವುದನ್ನು ತಪ್ಪಿಸುಂತೆ ಹೇಳಲಾಗಿದೆ. ಬೇಸಿಗೆ ರಜೆಯಲ್ಲಿ ಮಕ್ಕಳು ಬಿಸಿಲಲ್ಲಿ ಆಟವಾಡುವುದನ್ನು ಆದಷ್ಟು ನಿಯಂತ್ರಿಸುವಂತೆ ಸೂಚಿಸಲಾಗಿದೆ.

ಉಷ್ಣ ಅಲೆ ಹಾಗೂ ಉಷ್ಣಾಘಾತದಿಂದ (ಹೀಟ್ ಸ್ಟ್ರೋಕ್) ರಕ್ಷಿಸಿಕೊಳ್ಳಲು ಆರೋಗ್ಯ ಇಲಾಖೆ ಕೆಲವು ಸಲಹೆ ಸೂಚನೆಗಳನ್ನು ನೀಡಿದೆ. ಮಧ್ಯಾಹ್ನ 12 ರಿಂದ 4 ಗಂಟೆಯವರೆಗೆ ಸೂರ್ಯನ ಬೆಳಕಿಗೆ ನೇರ ಮೈಯೊಡ್ಡುವುದನ್ನು ಆದಷ್ಟು ತಪ್ಪಿಸಿ. ನಿಯಮಿತವಾಗಿ ನೀರು ಕುಡಿಯಿರಿ. ಎಳನೀರು, ಮಜ್ಜಿಗೆ ಅಥವಾ ಮನೆಯಲ್ಲಿ ತಯಾರಿಸಿದ ಹಣ್ಣಿನ ರಸಗಳನ್ನು ಸೇವಿಸಿ. ತಿಳಿ ಬಣ್ಣದ, ಸಡಿಲವಾದ ಹತ್ತಿ ಬಟ್ಟೆಗಳನ್ನು ಧರಿಸಿ. ಹೊರಗೆ ಹೋಗುವಾಗ ಛತ್ರಿ ಅಥವಾ ಟೋಪಿಯನ್ನು ಬಳಸಿ. ಕೆಫೀನ್ (ಕಾಫಿ/ಟೀ) ಮತ್ತು ಹೆಚ್ಚಿನ ಸಕ್ಕರೆಯುಕ್ತ ಪಾನೀಯಗಳ ಸೇವನೆ ಕಡಿಮೆ ಮಾಡಿ, ಇವು ದೇಹವನ್ನು ನಿರ್ಜಲೀಕರಣಗೊಳಿಸುತ್ತವೆ.

ಎಲ್ಲೆಲ್ಲಿ ಒಣ ಹವೆ?

ಉತ್ತರ ಒಳನಾಡು ಭಾಗದ ಜಿಲ್ಲೆಗಳಾದ ಬೆಳಗಾವಿ, ಬೀದರ್, ವಿಜಯಪುರ, ಬಾಗಲಕೋಟೆ, ಹಾವೇರಿ, ಗದಗ, ಧಾರವಾಡ, ಕಲಬುರಗಿ, ಕೊಪ್ಪಳ, ಬಳ್ಳಾರಿ, ರಾಯಚೂರು, ಯಾದಗಿರಿ ಮತ್ತು ವಿಜಯನಗರದಲ್ಲಿಯೂ ಶುಷ್ಕ ವಾತಾವರಣವಿರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ದಕ್ಷಿಣ ಒಳನಾಡಿನ ಶಿವಮೊಗ್ಗ, ಚಾಮರಾಜನಗರ, ಮೈಸೂರು, ಮಂಡ್ಯ, ಕೊಡಗು, ಹಾಸನ, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದ್ದು, ಉಳಿದೆಡೆ ಒಣ ಹವೆಯಿರಲಿದೆ ಎಂದು ಇಲಾಖೆ ತಿಳಿಸಿದೆ.

Advertisement
Advertisement

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಟಾಪ್ ಸುದ್ದಿಗಳು, ತಾಲೂಕು, ಬೆಳ್ತಂಗಡಿ

ಬೆಳ್ತಂಗಡಿ : ಗಣೇಶೋತ್ಸವ ಹಿನ್ನೆಲೆ ಶಾಂತಿ ಸಭೆ : ನಿಯಮ ಮೀರಿದರೆ ಅನುಮತಿ ರದ್ದು – ಕಾನೂನು ಕ್ರಮದ ಎಚ್ಚರಿಕೆ

ಕರಾವಳಿ, ಟಾಪ್ ಸುದ್ದಿಗಳು

ಕಾಸರಗೋಡು : ಜಿಂಕೆ ಬೇಟೆಯಾಡಿ ಮಾಂಸ ಸಾಗಿಸುತ್ತಿದ್ದ ಆರೋಪ – ಓರ್ವನ ಬಂಧನ

ಟಾಪ್ ಸುದ್ದಿಗಳು, ತಾಲೂಕು, ಬೆಳ್ತಂಗಡಿ

ಬೆಳ್ತಂಗಡಿ : ಮನೆಯ ಬಾವಿಗೆ ಹಾರಿ ಯುವತಿ ಆತ್ಮಹತ್ಯೆ