ಬೆಳ್ತಂಗಡಿ, ಜ. 14 : ಯಾವುದೇ ಅನುಮತಿಗಳನ್ನು ಪಡೆಯದೆ ಅನಧಿಕೃತವಾಗಿ ವೇಣೂರಿನಲ್ಲಿ ಬೃಹತ್ ಖಾಸಗಿ ಶಾಲೆಯ ಕಟ್ಟಡ ನಿರ್ಮಾಣ ಮಾಡುತ್ತಿರುವ ಕಾಮಗಾರಿಗೆ ಕೊನೆಗೂ ಬ್ರೇಕ್ ಬಿದ್ದಿದೆ. ಧ್ವನಿ ನ್ಯೂಸ್ ವರದಿ ಬಳಿಕ ಎಚ್ಚೆತ್ತುಕೊಂಡ ಅಧಿಕಾರಿಗಳು ಬ್ರೇಕ್ ಹಾಕಿದ್ದಾರೆ.
ಸರಕಾರಕ್ಕೆ ಲಕ್ಷಾಂತರ ರೂಪಾಯಿ ತೆರಿಗೆ ವಂಚನೆ ಮಾಡಿ ಅನಧಿಕೃತ ಕಟ್ಟಡ ಕಾಮಗಾರಿಯ ಬಗ್ಗೆ ಧ್ವನಿ ನ್ಯೂಸ್ ಜ.13 ರಂದು ಸಮಗ್ರ ವರದಿ ಬಿಟ್ಟರಿಸಿತ್ತು. ಬೈಟ್ ಹಾರಿಜೋನ್ ಇಂಟರ್ ನ್ಯಾಷನಲ್ ಸ್ಕೂಲ್/ ಬೆಸ್ಟ್ ವಸತಿ ಶಾಲೆ ಎಂಬ ಹೆಸರಿನಲ್ಲಿ ಅನಧಿಕೃತ ಕಟ್ಟಡ ಕಾಮಗಾರಿ ನಡೆಯುತ್ತಿದ್ದರೂ ಅಧಿಕಾರಿ ವರ್ಗ ಮೌನ ವಹಿಸಿರುವ ಬಗ್ಗೆ ವರದಿ ಬಿತ್ತರಿಸಿತ್ತು.
ಬೆಳ್ತಂಗಡಿ ಕಾರ್ಯನಿರ್ವಾಹಕ ಅಧಿಕಾರಿ ಭವಾನಿ ಶಂಕರ್ ನೇತೃತ್ವದಲ್ಲಿ ವೇಣೂರು ಗ್ರಾಮದ ಅಭಿವೃದ್ಧಿ ಅಧಿಕಾರಿ ಪ್ರಕಾಶ್ ತಂಡದ ಅಧಿಕಾರಿಗಳು ಜ.14 ರಂದು ಸರ್ವೆ ನಂಬರ್ 125/2A,125/282,155/1C2,155/1B ໖ ಹಾರಿಜೋನ್ ಇಂಟರ್ ನ್ಯಾಷನಲ್ ಸ್ಕೂಲ್ / ಬೆಸ್ಟ್ ವಸತಿ ಶಾಲೆಯ ಅನಧಿಕೃತ ಕಟ್ಟಡದ ಕಾಮಗಾರಿಯನ್ನು ನಿಲ್ಲಿಸಿ ಸಕ್ಷಮ ಪ್ರಾಧಿಕಾರದಿಂದ ಎಚ್ಚರಿಕೆ ಟೇಪ್ ಅಳವಡಿಸಿ ಕಾಮಗಾರಿ ಸ್ಥಳಕ್ಕೆ ಪ್ರವೇಶ ನಿರ್ಬಂಧಿಸಿ ಸ್ಥಗಿತಗೊಳಿಸಿದ್ದಾರೆ. ಇದನ್ನು ಉಲ್ಲಂಘಿಸಿ ಕಾಮಗಾರಿಯನ್ನು ಪುನರ್ ಆರಂಭಿಸಿದಲ್ಲಿ ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ ಅಧಿನಿಯಮ 1993 ರ ಪ್ರಕಾರ ಹಾಗೂ ಅಕ್ರಮ ಕಟ್ಟಡಗಳನ್ನು ನಿರ್ಬಂಧಿಸುವ ಬಗ್ಗೆ ಮಾನ್ಯ ಸರ್ವೋಚ್ಚ ನ್ಯಾಯಾಲಯದ ಮಾರ್ಗಸೂಚಿಯಂತೆ ಮತ್ತು ಕರ್ನಾಟಕ ಸರಕಾರ ಸುತ್ತೋಲೆ ಸಂಖ್ಯೆ ಆರ್.ಡಿ.ಪಿ.ಆರ್ /27/2໖໖ 2025 2 13-05-2025 03 ಕ್ರಮವನ್ನು ಸಂಬಂಧಪಟ್ಟರವ ಮೇಲೆ ಜರುಗಿಸಲಾಗುವುದು ಎಂದು ಎಚ್ಚರಿಕೆ ಬ್ಯಾನರ್ ಹಾಕಲಾಗಿದೆ.
ಅನಧೀಕೃತ ಕಟ್ಟಡ ಬಗ್ಗೆ ಸಾರ್ವಜನಿಕರ ಪರವಾಗಿ ಧ್ವನಿ ನ್ಯೂಸ್ ವರದಿ ಮಾಡಿತ್ತು. ಇದೀಗ ಅಧಿಕಾರಿಗಳು ಕ್ರಮ ಜರುಗಿಸಿದ್ದಾರೆ.


