ಧರ್ಮಸ್ಥಳ : ಪುಣ್ಯಕ್ಷೇತ್ರ ಧರ್ಮಸ್ಥಳದಲ್ಲಿ ಲಕ್ಷದೀಪೋತ್ಸವವು ಬಹಳ ವೈಭವದಿಂದ ನಡೆಯುತ್ತಿದೆ. ಎರಡನೇ ದಿನವಾದ ಆದಿತ್ಯವಾರ (ನ.೧೬)ದಂದು ಶ್ರೀ ಮಂಜುನಾಥ ಸ್ವಾಮಿಯ ಕೆರೆಕಟ್ಟೆ ಉತ್ಸವ ಹಾಗೂ ವಿವಿಧ ವೈದಿಕ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳು ನೆರವೇರಿತು.
ವಸ್ತುಪ್ರದರ್ಶನ ಮಂಟಪದಲ್ಲಿ ಡಾ. ವಿಜಯ್ ಕುಮಾರ್ ಪಾಟೀಲ್, ಧಾರವಾಡ ಇವರಿಂದ ಭಜನ್ ಸಂಧ್ಯಾ, ನೃತ್ಯಾಂಜಲಿ, ಧರಿತ್ರಿ ಭಿಡೆ ಹಾಗೂ ಹಂಸಿನಿ ಭಿಡೆ ಸಹೋದರಿಯರಿಂದ ಯುಗಳ ನೃತ್ಯ, ಕುಮಾರಿ ಮಹಿಮಾ ಎನ್. ಮರಾಠೆ ಮತ್ತು ತಂಡ ಬೆಂಗಳೂರು ಇವರಿಂದ ಶಾಸ್ತ್ರೀಯ ಸಮೂಹ ನೃತ್ಯ, ವಿದುಷಿ ಶ್ರೀಮತಿ ವಿದ್ಯಾ ಮನೋಜ್, ಕಲಾನಿಕೇತನ (ರಿ.) ಕಲ್ಲಡ್ಕ ಇವರಿಂದ ನೃತ್ಯ ವಲ್ಲರಿ ಸಾಂಸ್ಕೃತಿಕ ಕಾರ್ಯಕ್ರಮವು ಸಹಸ್ರಾರು ವೀಕ್ಷಕರ ಸಮ್ಮುಖದಲ್ಲಿ ನಡೆಯಿತು.

