ಬೆಳ್ತಂಗಡಿ, ಜು. 28 : ಕರ್ನಾಟಕ ಸ್ಟೇಟ್ ಟೈಲರ್ಸ್ ಅಸೋಸಿಯೇಶನ್ (ರಿ.) ಕ್ಷೇತ್ರ ಸಮಿತಿ ಬೆಳ್ತಂಗಡಿ ವತಿಯಿಂದ ಒಂಬಂತ್ತು ವಲಯಗಳ ಕೂಡುವಿಕೆಯಲ್ಲಿ ಆಗಸ್ಟ್ 02ರ ಆದಿತ್ಯವಾರದಂದು ಬೆಳ್ತಂಗಡಿ ಸಂತೆಕಟ್ಟೆಯ ಶ್ರೀ ಮಂಜುನಾಥ ಬಯಲು ಮಂಟಪದಲ್ಲಿ “ಆಟಿದ ಕಮ್ಮೆನ ಬೊಕ್ಕಗೊಬ್ಬು” ಕಾರ್ಯಕ್ರಮ ಜರುಗಲಿದೆ.
ಸಭಾ ಕಾರ್ಯಕ್ರಮದ ಅಧ್ಯಕ್ಷರಾಗಿ ಕ್ಷೇತ್ರ ಸಮಿತಿ ಬೆಳ್ತಂಗಡಿ ಇದರ ಅಧ್ಯಕ್ಷರಾದ ಶ್ರೀ ರಾಜು ಪೂಜಾರಿ ವಹಿಸಲಿದ್ದಾರೆ. ಧಾರ್ಮಿಕ ಮುಖಂಡರಾದ ಶ್ರೀ ಕಿರಣ್ ಚಂದ್ರ ಪುಷ್ಪಗಿರಿ ಇವರು ಉದ್ಘಾಟಿಸಲಿದ್ದಾರೆ. ಕ್ಷೇತ್ರ ಸಮಿತಿ ಕಾರ್ಯದರ್ಶಿಗಳಾದ ಶ್ರೀ ಲೆನ್ಸಿ ಡಿಸೋಜ, ಮಂಗಳೂರು ನಿವೃತ್ತ ರಾ.ಹೆ., ನಿವೃತ್ತ ಮುಖ್ಯ ಅಭಿಯಂತರರಾದ ಶ್ರೀ ಶಿವಪ್ರಸಾದ್ ಅಜಿಲರು ಸೇರಿದಂತೆ ಹಲವಾರು ಗಣ್ಯರು ಉಪಸ್ಥಿತ ಇರಲಿದ್ದಾರೆ.


