ಕಾರವಾರ : ಆರೋಗ್ಯ ಸಚಿವ ಯುಟಿ ಖಾದರ್ ಬೆಂಗಾವಲು ವಾಹನಕ್ಕೆ ಸ್ಕೂಟಿ ಢಿಕ್ಕಿ – ಸವಾರ ಗಂಭೀರ

Advertisement

ಕಾರವಾರ, ಜು. 5 : ಸ್ಕೂಟಿಯೊಂದು ಆರೋಗ್ಯ ಸಚಿವ ಯು.ಟಿ.ಖಾದರ್ ಅವರ ಬೆಂಗಾವಲು ವಾಹನಕ್ಕೆ ಢಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಗಂಭೀರವಾಗಿ ಗಾಯಗೊಂಡಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಅಂಕೋಲಾದಲ್ಲಿ ನಡೆದಿದೆ.

Advertisement

ಕಾರವಾರದಿಂದ ಉಡುಪಿ ಕಡೆಗೆ ಆರೋಗ್ಯ ಸಚಿವ ಯು.ಟಿ.ಖಾದರ್ ಅವರನ್ನು ಬೆಂಗಾವಲು ವಾಹನಗಳೊಂದಿಗೆ ಕರೆದೊಯ್ಯುವ ವೇಳೆ ಅಂಕೋಲಾದ ವರದರಾಜ್ ಹೋಟೆಲ್ ಸಮೀಪ ಈ ಅಪಘಾತ ಸಂಭವಿಸಿದೆ.

Advertisement

ಈ ಅಪಘಾತದಲ್ಲಿ ಅಲಗೇರಿ ಮೂಲದ ಸಂದೀಪ್ ನಾಯಕ್ ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದೆ. ಅಪಘಾತವಾಗುತ್ತಿದ್ದಂತೆಯೇ ಸಚಿವ ಯು.ಟಿ.ಖಾದರ್ ಅವರು ಸ್ವತಃ ಗಾಯಾಳುವನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆಗೆ ವ್ಯವಸ್ಥೆ ಮಾಡಿದ್ದಾರೆನ್ನಲಾಗಿದೆ.

ಘಟನೆ ಸಂಬಂಧ ಅಂಕೋಲಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Advertisement
Advertisement

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಟಾಪ್ ಸುದ್ದಿಗಳು, ತಾಲೂಕು, ಬೆಳ್ತಂಗಡಿ

ಬೆಳ್ತಂಗಡಿ : ಗಣೇಶೋತ್ಸವ ಹಿನ್ನೆಲೆ ಶಾಂತಿ ಸಭೆ : ನಿಯಮ ಮೀರಿದರೆ ಅನುಮತಿ ರದ್ದು – ಕಾನೂನು ಕ್ರಮದ ಎಚ್ಚರಿಕೆ

ಕರಾವಳಿ, ಟಾಪ್ ಸುದ್ದಿಗಳು

ಕಾಸರಗೋಡು : ಜಿಂಕೆ ಬೇಟೆಯಾಡಿ ಮಾಂಸ ಸಾಗಿಸುತ್ತಿದ್ದ ಆರೋಪ – ಓರ್ವನ ಬಂಧನ

ಟಾಪ್ ಸುದ್ದಿಗಳು, ತಾಲೂಕು, ಬೆಳ್ತಂಗಡಿ

ಬೆಳ್ತಂಗಡಿ : ಮನೆಯ ಬಾವಿಗೆ ಹಾರಿ ಯುವತಿ ಆತ್ಮಹತ್ಯೆ