ಟೆಹ್ರಾನ್ : ಅಮೆರಿಕ-ಇಸ್ರೇಲ್ ಜಂಟಿ ದಾಳಿಯಲ್ಲಿ ಇರಾನ್‌ನ ನೂತನ ಸರ್ವೋಚ್ಚ ನಾಯಕ ಮೊಜ್ವಾಬಾ ಖಮೇನಿ ಗಂಭೀರ – ಕೋಮ್ ನಗರದಲ್ಲಿ ಚಿಕಿತ್ಸೆ

Advertisement

ಟೆಹ್ರಾನ್, ಏ. 07 : ಅಮೆರಿಕ-ಇಸ್ರೇಲ್ ಜಂಟಿ ದಾಳಿಯಲ್ಲಿ ಗಾಯಗೊಂಡಿದ್ದ ಇರಾನ್‌ನ ನೂತನ ಸರ್ವೋಚ್ಚ ನಾಯಕ ಮೊಜ್ವಾಬಾ ಖಮೇನಿ ಅವರು ಗಂಭೀರವಾಗಿ ಗಾಯಗೊಂಡಿದ್ದು, ಕೋಮ್ ನಗರದಲ್ಲಿ ವೈದ್ಯಕೀಯ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ವರದಿಯಾಗಿದೆ.

Advertisement

ದಾಳಿಯಿಂದಾಗಿ 56 ವರ್ಷದ ಧರ್ಮಗುರು ಕೋಮಾಸ್ಥಿತಿಯಲ್ಲಿದ್ದು,”ಗಂಭೀರ” ವೈದ್ಯಕೀಯ ಸ್ಥಿತಿಗೆ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ದಿ ಟೈಮ್ಸ್ ವರದಿ ಮಾಡಿದೆ. ಇರಾನ್‌ನ ಸರ್ವೋಚ್ಚ ನಾಯಕನ ಸ್ಥಳದ ಬಗ್ಗೆ ಇದೇ ಮೊದಲ ಬಾರಿಗೆ ಬಹಿರಂಗಗೊಳಿಸಲಾಗಿದೆ. ಕೋಮ್ ಕೇಂದ್ರ ನಗರವು ಟೆಹ್ರಾನ್‌ನಿಂದ ದಕ್ಷಿಣಕ್ಕೆ 87 ಮೈಲುಗಳು (ಸುಮಾರು 140 ಕಿಲೋಮೀಟರ್) ದೂರದಲ್ಲಿದೆ. ಶಿಯಾ ಮುಸ್ಲಿಮರಿಗೆ ಈ ನಗರ ಪವಿತ್ರವೆಂದು ಪರಿಗಣಿಸಿದ್ದಾರೆ. ಅಲ್ಲದೇ ಇಸ್ಲಾಮಿಕ್ ಗಣರಾಜ್ಯದ ಧಾರ್ಮಿಕ ರಾಜಧಾನಿ ಎಂದು ಕರೆಯಲಾಗುತ್ತದೆ.

Advertisement

“ಮೊಜ್ಜಾಬಾ ಖಮೇನಿ ಅವರು ಕೋಮ್‌ನಲ್ಲಿ ಕೋಮಾ ಸ್ಥಿತಿಯಲ್ಲಿದ್ದು ಚಿಕಿತ್ಸೆ ಪಡೆಯುತ್ತಿದ್ದಾರೆ, ಆಡಳಿತದ ಯಾವುದೇ ನಿರ್ಧಾರ ತೆಗೆದುಕೊಳ್ಳುವಲ್ಲಿ ಭಾಗಿಯಾಗಲು ಸಾಧ್ಯವಾಗುತ್ತಿಲ್ಲ” ಎಂದು ಅಮೆರಿಕ ಮತ್ತು ಇಸ್ರೇಲ್ ಗುಪ್ತಚರ ಮಾಹಿತಿಯನ್ನು ಆಧರಿಸಿದೆ ಎಂದು ನಂಬಲಾದ ದಾಖಲೆಯಲ್ಲಿ ತಿಳಿಸಿದೆ.

ಅಯತೊಲ್ಲಾ ಇರುವ ಸ್ಥಳದ ಬಗ್ಗೆ ಅಮೆರಿಕ ಮತ್ತು ಇಸ್ರೇಲ್ ಬೇಹುಗಾರಿಕೆ ಸಂಸ್ಥೆಗಳಿಗೆ ಸ್ವಲ್ಪ ಸಮಯದ ಹಿಂದೆಯೇ ತಿಳಿದಿತ್ತು ಎಂದು ವರದಿಯಾಗಿದೆ ಆದರೆ ಈ ಹಿಂದೆ ಅದನ್ನು ಬಹಿರಂಗಗೊಳಿಸಿಲ್ಲ ಎಂದು ವರದಿ ವಿವರಿಸಿದೆ.

ಫೆ.28ರಂದು ಇಸ್ರೇಲ್ ಮತ್ತು ಅಮೆರಿಕ ವೈಮಾನಿಕ ಪಡೆ ಜಂಟಿಯಾಗಿ ನಡೆಸಿದ ದಾಳಿಯಲ್ಲಿ ಇರಾನ್ ಸರ್ವೋಚ್ಛ ನಾಯಕ ಅಯತೊಲ್ಲಾ ಅಲಿ ಖಮೇನಿ ಹಾಗೂ ಕುಟುಂಬ ಸದಸ್ಯರು ಹತ್ಯೆಗೀಡಾಗಿದ್ದರು. ಈ ದಾಳಿಯಲ್ಲಿ ನೂತನವಾಗಿ ಆಯ್ಕೆಗೊಂಡಿದ್ದ ಮೊಜ್ಜಾಬಾ ಖಮೇನಿ ಕೂಡಾ ಗಂಭೀರವಾಗಿ ಗಾಯಗೊಂಡು ಚಿಂತಾಜನಕ ಸ್ಥಿತಿಯಲ್ಲಿರುವುದಾಗಿ ವರದಿಯಾಗಿತ್ತು. ಅದರೆ ಈವರೆಗೂ ಇರಾನ್ ಈ ಕುರಿತು ಯಾವುದೇ ಅಧಿಕೃತ ಹೇಳಿಕೆ ನೀಡಿಲ್ಲ.

Advertisement
Advertisement

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಟಾಪ್ ಸುದ್ದಿಗಳು, ತಾಲೂಕು, ಬೆಳ್ತಂಗಡಿ

ಬೆಳ್ತಂಗಡಿ : ಗಣೇಶೋತ್ಸವ ಹಿನ್ನೆಲೆ ಶಾಂತಿ ಸಭೆ : ನಿಯಮ ಮೀರಿದರೆ ಅನುಮತಿ ರದ್ದು – ಕಾನೂನು ಕ್ರಮದ ಎಚ್ಚರಿಕೆ

ಕರಾವಳಿ, ಟಾಪ್ ಸುದ್ದಿಗಳು

ಕಾಸರಗೋಡು : ಜಿಂಕೆ ಬೇಟೆಯಾಡಿ ಮಾಂಸ ಸಾಗಿಸುತ್ತಿದ್ದ ಆರೋಪ – ಓರ್ವನ ಬಂಧನ

ಟಾಪ್ ಸುದ್ದಿಗಳು, ತಾಲೂಕು, ಬೆಳ್ತಂಗಡಿ

ಬೆಳ್ತಂಗಡಿ : ಮನೆಯ ಬಾವಿಗೆ ಹಾರಿ ಯುವತಿ ಆತ್ಮಹತ್ಯೆ