ಉಪ್ಪಿನಂಗಡಿ : ಖೋಟಾನೋಟು ಮುದ್ರಣ ಜಾಲ ಪತ್ತೆ – ಆರೋಪಿಗಳ ಮಾಹಿತಿ ಬಿಡುಗಡೆ ಮಾಡಿದ ಪೊಲೀಸ್ ಇಲಾಖೆ !

ಉಪ್ಪಿನಂಗಡಿ, ಏ. 16 : ಬೆಳ್ತಂಗಡಿ ತಾಲೂಕು ಕಣಿಯೂರು ಗ್ರಾಮದ ಅಡೆಂಜ ಎಂಬಲ್ಲಿರುವ ಕಟ್ಟಡವೊಂದರಲ್ಲಿ ಎಲೆಕ್ಟ್ರಾನಿಕ್ ಉಪಕರಣಗಳನ್ನು ಬಳಸಿಕೊಂಡು ಭಾರತೀಯ ನಕಲಿ ಕರೆನ್ಸಿ ನೋಟುಗಳನ್ನು (ಖೋಟಾ ನೋಟುಗಳನ್ನು) ಮುದ್ರಿಸುತ್ತಿರುವ ಬಗ್ಗೆ, ಉಪ್ಪಿನಂಗಡಿ ಠಾಣಾ ಪೊಲೀಸ್ ಉಪನಿರೀಕ್ಷಕರಾದ ಸುತೇಶ್ ಕೆ ಪಿ, ರವರಿಗೆ ಮಾಹಿತಿ ಬಂದ ಮೇರೆಗೆ, ಸದ್ರಿಯವರು ಸಿಬ್ಬಂದಿಗಳೊಂದಿಗೆ ಏ. 16ರಂದು ಸ್ಥಳಕ್ಕೆ ದಾಳಿ ನಡೆಸಿ ಆರೋಪಿಗಳನ್ನು ಬಂಧಿಸಿದ್ದಾರೆ.

Advertisement

ಆರೋಪಿಗಳಾದ 1) ಇಬ್ರಾಹಿಂ 2) ಶರೀಪ 3) ಸಂದೀಪ ಪುಂಡಲಿಕ ಶೋಳಂಬಿ 4) ಮಹಮ್ಮದ್ ನಬಾಸ್ 5) ಸಲ್ಮಾನ್ ಫಾರೀಸ್. 6) ಸಿರಾಜುದ್ದೀನ್. 7) ಇರ್ಷಾದ್ ಎಂಬವರುಗಳನ್ನು ವಶಕ್ಕೆ ಪಡೆದಿದ್ದಾರೆ . ಸ್ಥಳದಲ್ಲಿ ₹500 ಮುಖಬೆಲೆಯ ನೋಟು -1, 500 ರೂ., ಮುಖ ಬೆಲೆಯ ನೋಟುಗಳಂತೆ ಕಾಣುವ A-4 ಸೈಜ್ ಹಾಳೆಗಳು-21 ಹಾಗೂ ಗಣಕಯಂತ್ರ, ಝರಾಕ್ಸ್ ಮೆಷಿನ್, ಸೀಲ್ ಗಳು ಸೇರಿದಂತೆ ಇತರೆ ಸೊತ್ತುಗಳು ಪತ್ತೆಯಾಗಿದ್ದು, ಅವುಗಳನ್ನು ಸ್ವಾಧೀನಪಡಿಸಿಕೊಂಡು ಈ ಬಗ್ಗೆ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಅ.ಕ್ರ: 103/2026 ಕಲಂ: 178 BNS-2023 ರಂತೆ ಪ್ರಕರಣ ದಾಖಲಿಸಿ ತನಿಖೆ ನಡೆಸಲಾಗುತ್ತಿದೆ.

ಕೊಡಗು ಜಿಲ್ಲಾ ಪೊಲೀಸ್ ಅಧೀಕ್ಷಕರಾದ ಬಿಂದು ಮಣಿ ಆರ್ ಎನ್, ಐ.ಪಿ.ಎಸ್ ರವರು ಹಾಗೂ ಕೊಡಗು ಜಿಲ್ಲಾ ಸಿಬ್ಬಂದಿಗಳಾದ ಯೊಗೀಶ್ ಬಿ, HC 193 ಮತ್ತು ನಿರಂಜನ್ ಎಂ ಎನ್, HC 190 ರವರುಗಳು, ದ.ಕ ಜಿಲ್ಲಾ ವಿಶೇ಼ಷ ಘಟಕದ ಪೊಲೀಸ್ ನಿರೀಕ್ಷಕರಾದ ನಂದಕುಮಾರ್ ರವರು ಹಾಗೂ ಸಿಬ್ಬಂದಿಗಳಾದ ಎ.ಎಸ್.ಐ ದೀಪಕ್, ಹೆಚ್.ಸಿ ಸತೀಶ್ ಹಾಗೂ ಹೆಚ್.ಸಿ ರೌಫ್ ರವರುಗಳು ಸದ್ರಿ ಜಾಲವನ್ನು ಪತ್ತೆ ಮಾಡಿ ಪ್ರಕರಣ ದಾಖಲಿಸುವಲ್ಲಿ ಉಪ್ಪಿನಂಗಡಿ ಪಿ.ಎಸ್.ಐ ರವರೊಂದಿಗೆ ಸಹಕರಿಸಿದ್ದಾರೆ.

Advertisement
Advertisement

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಟಾಪ್ ಸುದ್ದಿಗಳು, ರಾಜ್ಯ / ದೇಶ

ಬೆಂಗಳೂರು : ಮೋದಿ ಪೋಸ್ಟ್ ನಿರ್ಬಂಧ – ಕ್ಷಮೆಯಾಚಿಸಿದ ಟೆಕ್‌ ದೈತ್ಯ ಮೆಟಾ !

ಟಾಪ್ ಸುದ್ದಿಗಳು, ರಾಜ್ಯ / ದೇಶ

ಹೊಸದೆಹಲಿ : ಸಿಜೆಪಿ ಪ್ರತಿಭಟನೆಯಲ್ಲಿ 2,873 ಅಪರಾಧಿಗಳು – ಫೋಕ್ಸೋ, ಕೊಲೆ ಅಪರಾಧಿಗಳು ಭಾಗಿ !!

ಟಾಪ್ ಸುದ್ದಿಗಳು

ಕೋಝಿಕೋಡ್ : ಮಾದಕ ದ್ರವ್ಯ ವಿರೋಧಿ ಜಾಗೃತಿ ಅಭಿಯಾನಗಳ ಲೀಡರ್ ಗಳಿಂದಲೇ ಮಕ್ಕಳಿಗೆ ಡ್ರಗ್ಸ್ ಸಪ್ಲೈ !!

⚠️ Contents are protected on this website.