ದಾಖಲೆಗಳ ಸರದಾರ ವಿರಾಟ್ ಕೊಹ್ಲಿ ಮತ್ತೊಂದು ವಿಶ್ವ ದಾಖಲೆ

Advertisement

ಬರ್ಮಿಂಗ್​ಹ್ಯಾಮ್, ಜು. 15​ : ಇಂಗ್ಲೆಂಡ್ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ಕಣಕ್ಕಿಳಿಯುವ ಮೂಲಕ ವಿರಾಟ್ ಕೊಹ್ಲಿ ಏಕದಿನ ಅಂತಾರಾಷ್ಟ್ರೀಯ ಕ್ರಿಕೆಟ್​ನಲ್ಲಿ 300 ಇನಿಂಗ್ಸ್​ ಆಡಿದ ಸಾಧನೆ ಮಾಡಿದ್ದಾರೆ. ಈ ಸಾಧನೆಯೊಂದಿಗೆ 300 ಏಕದಿನ ಇನಿಂಗ್ಸ್​ಗಳ ಮೂಲಕ ಅತ್ಯಧಿಕ ರನ್​ ಕಲೆಹಾಕಿದ ಬ್ಯಾಟರ್ ಎನಿಸಿಕೊಂಡಿದ್ದಾರೆ.

Advertisement

ಇಂಗ್ಲೆಂಡ್ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ 3ನೇ ಕ್ರಮಾಂಕದಲ್ಲಿ ಕಣಕ್ಕಿಳಿದು ಕೇವಲ 5 ರನ್​ಗಳಿಸಿದರೂ ವಿರಾಟ್ ಕೊಹ್ಲಿ 2 ಭರ್ಜರಿ ದಾಖಲೆಗಳನ್ನು ನಿರ್ಮಿಸಿದ್ದಾರೆ. ಇದಕ್ಕೂ ಮುನ್ನ ಈ ದಾಖಲೆ ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡೂಲ್ಕರ್ ಹೆಸರಿನಲ್ಲಿತ್ತು. ಸಚಿನ್ ತೆಂಡೂಲ್ಕರ್ 300 ಏಕದಿನ ಇನಿಂಗ್ಸ್ ಪೂರ್ಣಗೊಳಿಸಿದಾಗ ಕಲೆಹಾಕಿದ ಒಟ್ಟು ರನ್ 12,015. ಈ ಮೂಲಕ 300 ಇನಿಂಗ್ಸ್​ಗಳಲ್ಲಿ ಅತೀ ಹೆಚ್ಚು ರನ್ ಕಲೆಹಾಕಿದ ಬ್ಯಾಟರ್ ಎನಿಸಿಕೊಂಡಿದ್ದರು.

Advertisement

ಇದೀಗ ಈ ದಾಖಲೆಯನ್ನು ಕಿಂಗ್ ವಿರಾಟ್ ಕೊಹ್ಲಿ ತಮ್ಮ ಹೆಸರಿಗೆ ಬರೆದುಕೊಂಡಿದ್ದಾರೆ. ಕಿಂಗ್ ಕೊಹ್ಲಿ 300 ಏಕದಿನ ಇನಿಂಗ್ಸ್​ ಮೂಲಕ ಒಟ್ಟು 14,802 ರನ್ ಕಲೆಹಾಕಿದ್ದಾರೆ. ಈ ಮೂಲಕ ಏಕದಿನ ಕ್ರಿಕೆಟ್ ಇತಿಹಾಸದಲ್ಲೇ 300 ಇನಿಂಗ್ಸ್​ಗಳ ಮೂಲಕ ಅತೀ ಹೆಚ್ಚು ರನ್ ಕಲೆಹಾಕಿದ ಬ್ಯಾಟರ್ ಎಂಬ ವಿಶ್ವ ದಾಖಲೆಯನ್ನು ತಮ್ಮದಾಗಿಸಿಕೊಂಡಿದ್ದಾರೆ. ಈ ರನ್​ಗಳ ವಿಶ್ವ ದಾಖಲೆಯೊಂದಿಗೆ ವಿರಾಟ್ ಕೊಹ್ಲಿ ಇನಿಂಗ್ಸ್​ಗಳ ಮತ್ತೊಂದು ವರ್ಲ್ಡ್​ ರೆಕಾರ್ಡ್ ಅನ್ನು ಕೂಡ ಬರೆದಿದ್ದಾರೆ.

ಅಂದರೆ ಅಂತರರಾಷ್ಟ್ರೀಯ ಕ್ರಿಕೆಟ್ ಇತಿಹಾಸದಲ್ಲೇ 300 ಏಕದಿನ, 100 ಟೆಸ್ಟ್ ಮತ್ತು 100 ಟಿ20 ಇನಿಂಗ್ಸ್​ಗಳನ್ನು ಆಡಿದ ವಿಶ್ವದ ಏಕೈಕ ಮತ್ತು ಮೊದಲ ಕ್ರಿಕೆಟಿಗ ವಿರಾಟ್ ಕೊಹ್ಲಿ. ಈ ದಾಖಲೆಗಳೊಂದಿಗೆ ಕಿಂಗ್ ಕೊಹ್ಲಿ ಕ್ರಿಕೆಟ್ ಸಾಮ್ರಾಜ್ಯದ ಅಧಿಪತಿಯಾಗಿ ಮುಂದುವರೆದಿದ್ದಾರೆ.

Advertisement
Advertisement

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಟಾಪ್ ಸುದ್ದಿಗಳು, ತಾಲೂಕು, ಬೆಳ್ತಂಗಡಿ

ಬೆಳ್ತಂಗಡಿ : ಗಣೇಶೋತ್ಸವ ಹಿನ್ನೆಲೆ ಶಾಂತಿ ಸಭೆ : ನಿಯಮ ಮೀರಿದರೆ ಅನುಮತಿ ರದ್ದು – ಕಾನೂನು ಕ್ರಮದ ಎಚ್ಚರಿಕೆ

ಕರಾವಳಿ, ಟಾಪ್ ಸುದ್ದಿಗಳು

ಕಾಸರಗೋಡು : ಜಿಂಕೆ ಬೇಟೆಯಾಡಿ ಮಾಂಸ ಸಾಗಿಸುತ್ತಿದ್ದ ಆರೋಪ – ಓರ್ವನ ಬಂಧನ

ಟಾಪ್ ಸುದ್ದಿಗಳು, ತಾಲೂಕು, ಬೆಳ್ತಂಗಡಿ

ಬೆಳ್ತಂಗಡಿ : ಮನೆಯ ಬಾವಿಗೆ ಹಾರಿ ಯುವತಿ ಆತ್ಮಹತ್ಯೆ