ಉಡುಪಿ : ಪತ್ನಿಯೊಂದಿಗೆ ಜಗಳವಾಡಿ ವಿಷ ಸೇವನೆ – ಆಸ್ಪತ್ರೆಯಿಂದ ಮಹಡಿಯಿಂದಲೂ ಹಾರಿ ಆತ್ಮಹತ್ಯೆಗೆ ಯತ್ನ

ಉಡುಪಿ, ಸೆ. 30 : ಕಸ್ತೂರ್ಬಾ ಮೆಡಿಕಲ್‌ ಆಸ್ಪತ್ರೆ (KMC) ಒಳರೋಗಿಯಾಗಿ ದಾಖಲಾಗಿ ಚಿಕಿತ್ಸೆ ಪಡೆದಿದ್ದ ವ್ಯಕ್ತಿಯೊಬ್ಬ ಕಟ್ಟಡದ ನಾಲ್ಕನೇ ಮಹಡಿಯಿಂದ ಆತ್ಮಹತ್ಯೆಗೆ ಯತ್ನಿಸಿ ಗಂಭೀರವಾಗಿ ಗಾಯಗೊಂಡಿರುವ ಆಘಾತಕಾರಿ ಘಟನೆ ನಡೆದಿದೆ.

ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ಮೂಲದ ರಾಜೇಶ್ ಆರ್. ಶೆಟ್ಟಿ ಗಾಯಗೊಂಡ ದುರ್ದೈವಿ. ಕೆಲ ದಿನಗಳ ಹಿಂದೆ ಪತ್ನಿ ಜೊತೆ ಜಗಳವಾಡಿ ವಿಷ ಕುಡಿದಿದ್ದ ರಾಜೇಶ್‌ ತೀವ್ರ ಅಸ್ವಸ್ಥಗೊಂಡಿದ್ದ. ಹೆಚ್ಚಿನ ಚಿಕಿತ್ಸೆಗಾಗಿ ರಾಜೇಶ್‌ನನ್ನು ಮಣಿಪಾಲದ(Manipal) ಕೆಎಂಸಿ ಆಸ್ಪತ್ರೆಗೆ ದಾಖಲಿಸಿ ತುರ್ತು ನಿಗಾ ಘಟಕದಲ್ಲಿ (ICU) ಇರಿಸಿ ವೈದ್ಯರು ಚಿಕಿತ್ಸೆ ನೀಡುತ್ತಿದ್ದರು.

ಚಿಕಿತ್ಸೆಯಿಂದ ಚೇತರಿಸಿಕೊಂಡು ಆತ ಡಿಸ್ಚಾರ್ಜ್‌ ಆಗಬೇಕಿತ್ತು. ಇಂದು ಆಸ್ಪತ್ರೆ ಸಿಬ್ಬಂದಿ ಜೊತೆ ವಾಕಿಂಗ್‌ ಹೋಗುತ್ತೇನೆ ಎಂದು ಹೇಳಿ ರೂಮಿನಿಂದ ಹೊರ ಬಂದಿದ್ದ ರಾಜೇಶ್‌ ಏಕಾಏಕಿ ಕಿಟಕಿಯಿಂದ ಜಿಗಿದಿದ್ದಾನೆ. ಸುರಕ್ಷತೆಗಾಗಿ ಅಳವಡಿಸಲಾಗಿದ್ದ ಜಾಲರಿಯನ್ನು (ನೆಟ್) ಹರಿದು ಹೊರಬಂದ ರಾಜೇಶ್ ನಾಲ್ಕನೇ ಮಹಡಿಯಿಂದ ಕೆಳಗೆ ಹಾರಿದ್ದಾನೆ.

ನಾಲ್ಕನೇ ಮಹಡಿಯಿಂದ ಬಿದ್ದ ರಭಸಕ್ಕೆ ರಾಜೇಶ್‌ಗೆ ತೀವ್ರ ಸ್ವರೂಪದ ಗಾಯಗಳಾಗಿದ್ದು, ತಕ್ಷಣವೇ ಆಸ್ಪತ್ರೆಯ ಸಿಬ್ಬಂದಿ ಅವರನ್ನು ರಕ್ಷಿಸಿ ತುರ್ತು ಚಿಕಿತ್ಸಾ ವಿಭಾಗಕ್ಕೆ ರವಾನಿಸಿದ್ದಾರೆ. ಸದ್ಯ ಆತನ ಸ್ಥಿತಿ ಗಂಭೀರವಾಗಿದ್ದು, ಅದೇ ಆಸ್ಪತ್ರೆಯಲ್ಲಿ ತಜ್ಞ ವೈದ್ಯರ ತಂಡದಿಂದ ಚಿಕಿತ್ಸೆ ಮುಂದುವರಿದಿದೆ.

Advertisement

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಟಾಪ್ ಸುದ್ದಿಗಳು, ತಾಲೂಕು, ಬೆಳ್ತಂಗಡಿ

ಬೆಳ್ತಂಗಡಿ :  ಟೆಂಪೋ ಹಾಗೂ 2 ದ್ವಿಚಕ್ರ ವಾಹನಗಳ ನಡುವೆ ಸರಣಿ ಅಪಘಾತ – ಸ್ಕೂಟ‌ರ್ ಸವಾರ ಸಾವು

ಟಾಪ್ ಸುದ್ದಿಗಳು, ತಾಲೂಕು, ಬೆಳ್ತಂಗಡಿ

ಉಜಿರೆ : ಲಕ್ಷ್ಮಿ ಇಂಡಸ್ಟ್ರೀಸ್ ಕನಸಿನ ಮನೆ ಇವರ ನೂತನ ಉತ್ಪನ್ನ ನೂತನ ತಂತ್ರಜ್ಞಾನದ “ಲಕ್ಷ್ಮೀದ್ವಾರ” ಲೋಕಾರ್ಪಣೆ

ಟಾಪ್ ಸುದ್ದಿಗಳು

ಬೆಳ್ತಂಗಡಿ : ಬಿಜೆಪಿ ಯುವ ಮೋರ್ಚಾ ಬೆಳ್ತಂಗಡಿ ವತಿಯಿಂದ ಶಾಸಕ ಹರೀಶ್ ಪೂಂಜ ನೇತೃತ್ವದಲ್ಲಿ 7ನೇ ವರ್ಷದ ದೀಪಾವಳಿ ದೋಸೆ ಹಬ್ಬ-2026, ಸಹಸ್ರಾರು ಜನರು ಭಾಗಿ !