ಉಡುಪಿ : ಕೆಎಂಎಫ್ ಹಳೆಯ ಹಾಲು ಸಂಸ್ಕರಣಾ ಘಟಕದಲ್ಲಿ ಅಗ್ನಿ ಅವಘಡ

Advertisement

ಉಡುಪಿ, ಏ. 20 : ಮಣಿಪಾಲದ ಈಶ್ವರ ನಗರದಲ್ಲಿರುವ ಕೆಎಂಎಫ್ ಹಳೆಯ ಹಾಲು ಸಂಸ್ಕರಣಾ ಘಟಕದಲ್ಲಿ ಸೋಮವಾರ ಬೆಂಕಿ ಕಾಣಿಸಿಕೊಂಡಿದ್ದು, ಸ್ಥಳಕ್ಕೆ ಧಾವಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ಕೂಡಲೇ ಬೆಂಕಿಯನ್ನು ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ.

Advertisement

ಘಟಕದಲ್ಲಿ ವೆಲ್ಡಿಂಗ್ ಕೆಲಸ ನಡೆಯುತ್ತಿದ್ದಾಗ ಬೆಳಿಗ್ಗೆ ಸುಮಾರು 11 ಗಂಟೆಗೆ ಈ ಘಟನೆ ಸಂಭವಿಸಿದೆ. ವೆಲ್ಡಿಂಗ್ ಮಾಡುವಾಗ ಬಂದ ಕಿಡಿಗಳು ಹತ್ತಿರದಲ್ಲಿದ್ದ ಎಣ್ಣೆಗೆ ತಗುಲಿ ಬೆಂಕಿ ಹೊತ್ತಿಕೊಂಡಿದೆ. ಕ್ಷಣಾರ್ಧದಲ್ಲಿ ಬೆಂಕಿ ವ್ಯಾಪಿಸಿ ಘಟಕದಲ್ಲಿದ್ದ ಬಾಯ್ಲರ್‌ಗೂ ಹರಡಿದೆ ಎಂದು ಹೇಳಲಾಗಿದೆ.

Advertisement

ಉಡುಪಿಯ ಅಗ್ನಿಶಾಮಕ ದಳದ ಸಿಬ್ಬಂದಿ ಸುಮಾರು ಒಂದು ಗಂಟೆಗಳ ಕಾಲ ಸತತ ಕಾರ್ಯಾಚರಣೆ ನಡೆಸಿ ಬೆಂಕಿಯನ್ನು ನಿಯಂತ್ರಣಕ್ಕೆ ತಂದರು. ಈ ಅಗ್ನಿ ಅವಘಡದಿಂದಾಗಿ ಘಟಕಕ್ಕೆ ಗಣನೀಯ ಪ್ರಮಾಣದ ಹಾನಿಯಾಗಿದೆ ಎಂದು ತಿಳಿದುಬಂದಿದೆ.

Advertisement
Advertisement

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಟಾಪ್ ಸುದ್ದಿಗಳು, ತಾಲೂಕು, ಬೆಳ್ತಂಗಡಿ

ಬೆಳ್ತಂಗಡಿ : ಗಣೇಶೋತ್ಸವ ಹಿನ್ನೆಲೆ ಶಾಂತಿ ಸಭೆ : ನಿಯಮ ಮೀರಿದರೆ ಅನುಮತಿ ರದ್ದು – ಕಾನೂನು ಕ್ರಮದ ಎಚ್ಚರಿಕೆ

ಕರಾವಳಿ, ಟಾಪ್ ಸುದ್ದಿಗಳು

ಕಾಸರಗೋಡು : ಜಿಂಕೆ ಬೇಟೆಯಾಡಿ ಮಾಂಸ ಸಾಗಿಸುತ್ತಿದ್ದ ಆರೋಪ – ಓರ್ವನ ಬಂಧನ

ಟಾಪ್ ಸುದ್ದಿಗಳು, ತಾಲೂಕು, ಬೆಳ್ತಂಗಡಿ

ಬೆಳ್ತಂಗಡಿ : ಮನೆಯ ಬಾವಿಗೆ ಹಾರಿ ಯುವತಿ ಆತ್ಮಹತ್ಯೆ