ಕುಂದಾಪುರ: ‘ಆಶ್ಲೇಷ ಆನ್‌ಲೈನ್ ಸೇವಾ ಕೇಂದ್ರ’ದಲ್ಲಿ ಆಕಸ್ಮಿಕ ಅಗ್ನಿ ಅವಘಡ – ಲಕ್ಷಾಂತರ ರೂ. ನಷ್ಟ

ಕುಂದಾಪುರ, ಫೆ. 17 : ಕಳೆದ ಒಂದು ವರ್ಷದಿಂದ ಕಾರ್ಯನಿರ್ವಹಿಸುತ್ತಿದ್ದ ‘ಆಶ್ಲೇಷ ಆನ್‌ಲೈನ್ ಸೇವಾ ಕೇಂದ್ರ’ದಲ್ಲಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದಾಗಿ ಅಂಗಡಿಯಲ್ಲಿದ್ದ ಸಾಮಗ್ರಿಗಳು ಸಂಪೂರ್ಣವಾಗಿ ಸುಟ್ಟು ಭಸ್ಮವಾದ ಘಟನೆ ಸೋಮವಾರ ರಾತ್ರಿ ತೆಕ್ಕಟ್ಟೆ ರಾಷ್ಟ್ರೀಯ ಹೆದ್ದಾರಿ 66ರ ಕನ್ನುಕರೆ ಶ್ರೀನವಶಕ್ತಿ ಕಲ್ಯಾಣ ಮಂಟಪದ ಬಳಿ ನಡೆದಿದೆ.

Advertisement

ಸೋಮವಾರ ರಾತ್ರಿ ಸುಮಾರು 9:15ರ ಸುಮಾರಿಗೆ ಈ ಘಟನೆ ನಡೆದಿದೆ. ಅಂಗಡಿಯ ಮಾಲೀಕರಾದ ಫಣಿರಾಜ್ ಹತ್ವಾರ್ ಕೊರವಡಿ ಅವರು ಎಂದಿನಂತೆ ಕೆಲಸ ಮುಗಿಸಿ ಅಂಗಡಿಗೆ ಬೀಗ ಹಾಕಿ ಮನೆಗೆ ತೆರಳಿದ್ದರು. ಈ ವೇಳೆ ಸಂಭವಿಸಿದ ಶಾರ್ಟ್ ಸರ್ಕ್ಯೂಟ್‌ನಿಂದಾಗಿ ಅಂಗಡಿಯಲ್ಲಿದ್ದ ಕಂಪ್ಯೂಟರ್, ಪ್ರಿಂಟರ್, ಸ್ಟೇಷನರಿ ವಸ್ತುಗಳು, ಇನ್ವರ್ಟರ್ ಬ್ಯಾಟರಿ, ಕುರ್ಚಿ, ಮೇಜು ಹಾಗೂ ಇತರ ಉಪಕರಣಗಳು ಬೆಂಕಿಗಾಹುತಿಯಾಗಿವೆ. ಈ ಅಗ್ನಿ ಅವಘಡದಿಂದ ಅಂದಾಜು 6 ಲಕ್ಷ ರೂಪಾಯಿಗೂ ಅಧಿಕ ನಷ್ಟ ಸಂಭವಿಸಿದೆ ಎಂದು ಅಂದಾಜಿಸಲಾಗಿದೆ.

ಘಟನೆ ತಿಳಿಯುತ್ತಿದ್ದಂತೆಯೇ ಕಣ್ಣುಕರೆಯ ವಾದಿರಾಜ್ ಗಾಣಿಗ, ಕಾರ್ತಿಕ್, ಶೇಖರ್ ದೇವಡಿಗ, ಭರತ್ ಮತ್ತು ವಿಘ್ನೇಶ್ ಸೇರಿದಂತೆ ಸ್ಥಳೀಯ ಯುವಕರ ತಂಡ ಬೆಂಕಿ ನಂದಿಸಲು ನೆರವಾಗಿದೆ. ಕೂಡಲೇ ಸ್ಥಳಕ್ಕೆ ಧಾವಿಸಿದ ಕುಂದಾಪುರ ಅಗ್ನಿಶಾಮಕ ದಳದ ಸಿಬ್ಬಂದಿ ಕಾರ್ಯಾಚರಣೆ ನಡೆಸಿ ಬೆಂಕಿಯನ್ನು ಸಂಪೂರ್ಣವಾಗಿ ನಂದಿಸಿದ್ದಾರೆ.

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ತಾಲೂಕು, ಮಂಗಳೂರು

ಮಂಗಳೂರು : ಲೈಟ್ ಕಂಬ ಮುರಿದು ಮೈಮೇಲೆ ಬಿದ್ದು ಮೀನು ಕಾರ್ಮಿಕ ಸಾವು

ಟಾಪ್ ಸುದ್ದಿಗಳು, ರಾಜ್ಯ / ದೇಶ

ಕಲ್ಲಂಗಡಿ, ಐಸ್ ಕ್ರೀಂ ತಿನ್ನುವ ಮುನ್ನ ಹುಷಾರ್‌ – ಆರೋಗ್ಯ ಇಲಾಖೆ ಎಚ್ಚರಿಕೆ !

ಟಾಪ್ ಸುದ್ದಿಗಳು, ತಾಲೂಕು, ಬೆಳ್ತಂಗಡಿ

ಉಜಿರೆ : ಮಾರ್ಚ್ 3ರಿಂದ ಶ್ರೀ ಜನಾರ್ದನ ದೇವಸ್ಥಾನದ ಬ್ರಹ್ಮಕಲಶೋತ್ಸವ, ವಿಜಯಗೋಪುರ ಲೋಕಾರ್ಪಣೆ, ನೂತನಬ್ರಹ್ಮರಥ, ಪುಷ್ಪರಥ ಸಮರ್ಪಣೆ – ಶ್ರೀ ಶರತ್ ಕೃಷ್ಣಪಡ್ವೆಟ್ನಾಯ

⚠️ Contents are protected on this website.