ಮಂಗಳೂರು: ಕೃಷಿಕನ ಮೇಲೆ ಹಲ್ಲೆ, ಸುಲಿಗೆ ಯತ್ನ; ಆರೋಪಿಗಳ ವಿರುದ್ಧ ಕೋಕಾ ಕಾಯ್ದೆಯಡಿ ಪ್ರಕರಣ ದಾಖಲು

ಮಂಗಳೂರು, ಜ. 13 : ಮುಲ್ಕಿಯ ಅಂಗಾರಗುಡ್ಡೆ ಎಂಬಲ್ಲಿ ಕೃಷಿಕರೊಬ್ಬರ ಮೇಲೆ ಸುಲಿಗೆಗಾಗಿ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ, ಮೂವರು ಆರೋಪಿಗಳ ವಿರುದ್ಧ ಮುಲ್ಕಿ ಪೊಲೀಸರು ಕೋಕಾ ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ಕೆರೆಕಾಡು ನಿವಾಸಿ ಶ್ಯಾಮ್ ಸುಂದರ್ ಶೆಟ್ಟಿ, ಆಕಾಶ್ ಪೂಜಾರಿ ಮತ್ತು ಸುವೀನ್ ಎಂಬುವವರ ವಿರುದ್ಧ ಕೋಕಾ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ ಎಂದು ನಗರ ಪೊಲೀಸ್ ಕಮಿಷನರ್ ಸುಧೀರ್ ಕುಮಾರ್ ರೆಡ್ಡಿ ತಿಳಿಸಿದ್ದಾರೆ.

Advertisement

ಪ್ರಕರಣದಲ್ಲಿ ಭಾಗಿಯಾಗಿರುವ ಆರೋಪಿ ಸುವೀನ್ ವಿರುದ್ಧ ಒಂದು ಕೊಲೆ ಪ್ರಕರಣ, ಎರಡು ಕೊಲೆ ಯತ್ನ, ಒಂದು ದರೋಡೆ ಮತ್ತು ಒಂದು ಗಾಂಜಾ ಪ್ರಕರಣ ದಾಖಲಾಗಿತ್ತು. ಮತ್ತೋರ್ವ ಆರೋಪಿ ಆಕಾಶ್ ವಿರುದ್ಧ ಕೊಲೆ ಯತ್ನ, ಜಾತಿ ನಿಂದನೆ ಮತ್ತು ಸರ್ಕಾರಿ ಅಧಿಕಾರಿಯ ಕರ್ತವ್ಯಕ್ಕೆ ಅಡ್ಡಿಪಡಿಸಿದ ಪ್ರಕರಣಗಳು ದಾಖಲಾಗಿವೆ. ಈ ಇಬ್ಬರೂ ಆರೋಪಿಗಳ ವಿರುದ್ಧದ ಹಲವು ಪ್ರಕರಣಗಳು ನ್ಯಾಯಾಲಯದಲ್ಲಿ ಇನ್ನೂ ಬಾಕಿ ಇವೆ. ಆರೋಪಿಗಳ ವಿರುದ್ಧ ಸರಣಿ ಕ್ರಿಮಿನಲ್ ಪ್ರಕರಣಗಳು ದಾಖಲಾಗಿರುವ ಹಿನ್ನೆಲೆಯಲ್ಲಿ, ಮುಲ್ಕಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕೋಕಾ ಕಾಯ್ದೆಯನ್ನು ಜಾರಿಗೊಳಿಸಲಾಗಿದೆ ಮತ್ತು ಮುಂದಿನ ಕಾನೂನು ಕ್ರಮ ಕೈಗೊಳ್ಳಲು ಸೂಚನೆ ನೀಡಲಾಗಿದೆ ಎಂದು ಪೊಲೀಸ್ ಕಮಿಷನರ್ ತಿಳಿಸಿದ್ದಾರೆ.

ಪ್ರಕರಣದ ಹಿನ್ನೆಲೆ

ಜನವರಿ 1 ರಂದು, ಕಂಬಳದ ಕೋಣಗಳ ಮಾಲೀಕರಾದ ಅಂಗಾರಗುಡ್ಡೆ ನಿವಾಸಿ ಶಂಸು ಸಾಹೇಬ್ ಅವರ ಕೋಣಗಳನ್ನು ಕಟ್ಟಲಾಗಿದ್ದ ನೆರೆಮನೆಯ ಮೇಲೆ ಆರೋಪಿಗಳು ದಾಳಿ ನಡೆಸಿ, 50,000 ರೂಪಾಯಿ ನೀಡುವಂತೆ ಬೇಡಿಕೆಯಿಟ್ಟಿದ್ದರು ಎನ್ನಲಾಗಿದೆ. ಹಣ ನೀಡಲು ನಿರಾಕರಿಸಿದಾಗ, ಆರೋಪಿಗಳು ಶಂಸು ಸಾಹೇಬ್ ಮತ್ತು ಅವರ ಮಗನ ಮೇಲೆ ಹಲ್ಲೆ ನಡೆಸಿದ್ದರು. ಈ ಘಟನೆಗೆ ಸಂಬಂಧಿಸಿದಂತೆ ಶಂಸು ಸಾಹೇಬ್ ಅವರ ಪುತ್ರ ಸಹಾಬುದ್ದೀನ್ ಮುಲ್ಕಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ ಪೊಲೀಸರು ತೀವ್ರ ತನಿಖೆ ನಡೆಸಿ, ಇದೀಗ ಆರೋಪಿಗಳ ವಿರುದ್ಧ ಕೋಕಾ ಕಾಯ್ದೆಯಡಿ ಪ್ರಕರಣ ದಾಖಲಿಸಿದ್ದಾರೆ.

Advertisement
Advertisement

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಟಾಪ್ ಸುದ್ದಿಗಳು, ತಾಲೂಕು, ಬಂಟ್ವಾಳ

ಬಂಟ್ವಾಳ  : ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ನನ್ನು ನ್ಯಾಯಾಲಯಕ್ಕೆ ಹಾಜರು ಪಡಿಸಿದ ಪೊಲೀಸರು

ಟಾಪ್ ಸುದ್ದಿಗಳು, ರಾಜ್ಯ / ದೇಶ

ಬೆಂಗಳೂರು : ಮೋದಿ ಪೋಸ್ಟ್ ನಿರ್ಬಂಧ – ಕ್ಷಮೆಯಾಚಿಸಿದ ಟೆಕ್‌ ದೈತ್ಯ ಮೆಟಾ !

ಟಾಪ್ ಸುದ್ದಿಗಳು, ರಾಜ್ಯ / ದೇಶ

ಹೊಸದೆಹಲಿ : ಸಿಜೆಪಿ ಪ್ರತಿಭಟನೆಯಲ್ಲಿ 2,873 ಅಪರಾಧಿಗಳು – ಫೋಕ್ಸೋ, ಕೊಲೆ ಅಪರಾಧಿಗಳು ಭಾಗಿ !!

⚠️ Contents are protected on this website.