ಕೊಕ್ಕಡದಲ್ಲಿ ರಸ್ತೆ ಬದಿ ನಿಲ್ಲಿಸಿದ್ದ ಬೈಕ್ ಕಳವು : ಪ್ರಕರಣ ದಾಖಲು

Advertisement

ಕೊಕ್ಕಡ : ಪೇಟೆಯಲ್ಲಿ ರಸ್ತೆ ಬದಿಯಲ್ಲಿ ನಿಲ್ಲಿಸಿದ್ದ ಬೈಕ್ ಕಳವುಗೈದಿರುವ ಘಟನೆ ನಡೆದಿದೆ. ಈ ಬಗ್ಗೆ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Advertisement

ಆಲಂಕಾರು ನಿವಾಸಿ ಶಿವಪ್ರಸಾದ್ ಎಂಬವರು ನ.6 ರಂದು ಬೆಳಗ್ಗೆ ತನ್ನ ಬೈಕ್ ಕೆ ಎ 19 EH 7942 ಅನ್ನು ಕೊಕ್ಕಡ ಪೇಟೆಯಲ್ಲಿ ಅಂಗಡಿಯೊಂದರ ಆವರಣದಲ್ಲಿ ನಿಲ್ಲಿಸಿ ಉಜಿರೆಗೆ ತೆರಳಿದ್ದರು. ಸಂಜೆ ಹಿಂತಿರುಗಿ ಬಂದು ನೋಡಿದಾಗ ಬೈಕ್ ನಿಲ್ಲಿಸಿದ್ದ ಸ್ಥಳದಲ್ಲಿ ಇರಲಿಲ್ಲ ಎನ್ನಲಾಗಿದೆ. ಎಲ್ಲಾ ಕಡೆ ಹುಡುಕಾಡಿದರೂ ಯಾವುದೇ ಮಾಹಿತಿ ಲಭ್ಯವಾಗಿರಲಿಲ್ಲ. ಈ ಹಿನ್ನಲೆಯಲ್ಲಿ, ಬೈಕ್ ಕಳ್ಳತನವಾಗಿರುವ ಬಗ್ಗೆ ಧರ್ಮಸ್ಥಳ ಪೊಲೀಸರಿಗೆ ದೂರು ನೀಡಿದ್ದಾರೆ. ಕಳವಾದ ಬೈಕ್ ನ ಮೌಲ್ಯ ಸುಮಾರು ರೂ. 20,000 ಎಂದು ಅಂದಾಜಿಸಲಾಗಿದ್ದು ಘಟನೆಯ ಬಗ್ಗೆ ಧರ್ಮಸ್ಥಳ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಈ ಬೈಕ್ ಕಂಡು ಬಂದಲ್ಲಿ ಸಾರ್ವಜನಿಕರು ಧರ್ಮಸ್ಥಳ ಪೊಲೀಸ್ ಠಾಣೆಗೆ ಮಾಹಿತಿ ನೀಡಬಹುದು.

Advertisement

Advertisement
Advertisement

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಟಾಪ್ ಸುದ್ದಿಗಳು, ತಾಲೂಕು, ಬೆಳ್ತಂಗಡಿ

ಬೆಳ್ತಂಗಡಿ : ಗಣೇಶೋತ್ಸವ ಹಿನ್ನೆಲೆ ಶಾಂತಿ ಸಭೆ : ನಿಯಮ ಮೀರಿದರೆ ಅನುಮತಿ ರದ್ದು – ಕಾನೂನು ಕ್ರಮದ ಎಚ್ಚರಿಕೆ

ಕರಾವಳಿ, ಟಾಪ್ ಸುದ್ದಿಗಳು

ಕಾಸರಗೋಡು : ಜಿಂಕೆ ಬೇಟೆಯಾಡಿ ಮಾಂಸ ಸಾಗಿಸುತ್ತಿದ್ದ ಆರೋಪ – ಓರ್ವನ ಬಂಧನ

ಟಾಪ್ ಸುದ್ದಿಗಳು, ತಾಲೂಕು, ಬೆಳ್ತಂಗಡಿ

ಬೆಳ್ತಂಗಡಿ : ಮನೆಯ ಬಾವಿಗೆ ಹಾರಿ ಯುವತಿ ಆತ್ಮಹತ್ಯೆ