ಕಾರ್ಕಳ: ಕೋಳಿ ವ್ಯವಹಾರದ ಹಣದ ವಿಚಾರದಲ್ಲಿ ಮಾರಾಮಾರಿ – ನಾಲ್ವರ ಬಂಧನ

Advertisement

ಕಾರ್ಕಳ, ಮಾ. 28 : ಕೋಳಿ ವ್ಯವಹಾರದ ಹಣಕ್ಕೆ ಸಂಬಂಧಿಸಿದ ವಿವಾದವೊಂದು ವಿಕೋಪಕ್ಕೆ ತಿರುಗಿ ಪರಸ್ಪರ ಹಲ್ಲೆ ನಡೆದ ಘಟನೆ ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನಲ್ಲಿ ಸಂಭವಿಸಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಅಜೆಕಾರು ಪೊಲೀಸರು ನಾಲ್ವರನ್ನು ಬಂಧಿಸಿದ್ದಾರೆ.

Advertisement

ಬಂಧಿತರನ್ನು ಬೈರಂಪಳ್ಳಿ ಹರಿಕಂಡಿಗೆಯ ಪ್ರತಾಪ್ ಪೂಜಾರಿ (32), ಕಡ್ತಲ ಗ್ರಾಮದ ಸಿರಿಬೈಲು ನಿವಾಸಿ ದಿಲೀಪ್ ಶೆಟ್ಟಿ (28), ಮುತ್ತುಪಾಡಿಯ ಸುದರ್ಶನ್ ಶೆಟ್ಟಿ (36) ಮತ್ತು ವರಂಗ ಗ್ರಾಮದ ಮೂಡುಕುದೂರು ನಿವಾಸಿ ಆಕಾಶ್ (21) ಎಂದು ಗುರುತಿಸಲಾಗಿದೆ.

Advertisement

ಮಾರ್ಚ್ 26 ರಂದು ರಾತ್ರಿ ಸುಮಾರು 8 ಗಂಟೆಗೆ ಅಂದಾರು ಗ್ರಾಮದ ಮುತ್ತುಪಾಡಿ ಎಂಬಲ್ಲಿ ಈ ಘಟನೆ ನಡೆದಿದೆ. ಹರೀಶ್, ಸುಧೀರ್, ದುರ್ಗಾ, ಗುರುದೀಶ್ ಮತ್ತು ಪ್ರತಾಪ್ ಸೇರಿದಂತೆ ಸುಮಾರು 15 ಜನರ ತಂಡವು ಕಾರು ಮತ್ತು ಬೈಕ್‌ಗಳಲ್ಲಿ ಬಂದು ಸುದರ್ಶನ್ ಶೆಟ್ಟಿ ಎಂಬವರ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ.

ಈ ಜಗಳವನ್ನು ಬಿಡಿಸಲು ಪದ್ಮಾ ಮತ್ತು ಆಕಾಶ್ ಎಂಬುವವರು ಪ್ರಯತ್ನಿಸಿದಾಗ, ಹರೀಶ್ ಎಂಬಾತ ಅವಾಚ್ಯ ಶಬ್ದಗಳಿಂದ ನಿಂದಿಸಿ, ಜಾತಿ ನಿಂದನೆ ಮಾಡಿ ಅವರ ಮೇಲೆಯೂ ಹಲ್ಲೆ ನಡೆಸಿದ್ದಾನೆ ಎನ್ನಲಾಗಿದೆ. ಈ ಮಾರಾಮಾರಿಯ ಸಂದರ್ಭದಲ್ಲಿ ಆಕಾಶ್ ಎಂಬುವವರಿಗೂ ಗಾಯಗಳಾಗಿವೆ ಎಂದು ವರದಿಯಾಗಿದೆ.

ಈ ಘಟನೆಗೆ ಸಂಬಂಧಿಸಿದಂತೆ ಅಜೆಕಾರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ತನಿಖೆಯನ್ನು ಕೈಗೊಂಡಿದ್ದಾರೆ.

Advertisement
Advertisement

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಟಾಪ್ ಸುದ್ದಿಗಳು, ತಾಲೂಕು, ಬೆಳ್ತಂಗಡಿ

ಬೆಳ್ತಂಗಡಿ : ಗಣೇಶೋತ್ಸವ ಹಿನ್ನೆಲೆ ಶಾಂತಿ ಸಭೆ : ನಿಯಮ ಮೀರಿದರೆ ಅನುಮತಿ ರದ್ದು – ಕಾನೂನು ಕ್ರಮದ ಎಚ್ಚರಿಕೆ

ಕರಾವಳಿ, ಟಾಪ್ ಸುದ್ದಿಗಳು

ಕಾಸರಗೋಡು : ಜಿಂಕೆ ಬೇಟೆಯಾಡಿ ಮಾಂಸ ಸಾಗಿಸುತ್ತಿದ್ದ ಆರೋಪ – ಓರ್ವನ ಬಂಧನ

ಟಾಪ್ ಸುದ್ದಿಗಳು, ತಾಲೂಕು, ಬೆಳ್ತಂಗಡಿ

ಬೆಳ್ತಂಗಡಿ : ಮನೆಯ ಬಾವಿಗೆ ಹಾರಿ ಯುವತಿ ಆತ್ಮಹತ್ಯೆ