ಪಶ್ಚಿಮ ಬಂಗಾಳ : 12 ವರ್ಷದ ಬಾಲಕಿಯ ಅತ್ಯಾಚಾರ, ಕೊಲೆ – ಪ್ರಮುಖ ಆರೋಪಿ ಎನ್ ಕೌಂಟರ್ ಗೆ ಬಲಿ !

Advertisement

ಪಶ್ಚಿಮ ಬಂಗಾಳ, ಜು. 8 : ಕೋಲ್ಕತಾದ ಬರುಯಿಪುರ್‌ನಲ್ಲಿ ನಡೆದಿರುವ 12 ವರ್ಷದ ಬಾಲಕಿಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಪ್ರಮುಖ ಆರೋಪಿಯನ್ನು ಪೊಲೀಸರು ಬುಧವಾರ ಎನ್‌ಕೌಂಟರ್ ನಡೆಸಿ ಹತ್ಯೆಗೈದಿದ್ದಾರೆ.

Advertisement

ಪೊಲೀಸರ ಮಾಹಿತಿ ಪ್ರಕಾರ, ಆರೋಪಿ ಪ್ರಬಾಶ್‌ ಮಂಡಲ್‌ನನ್ನು ಕೃತ್ಯ ನಡೆದ ಸ್ಥಳಕ್ಕೆ ಮಹಜರು ನಡೆಸಲು ಕರೆದೊಯ್ಯಲಾಗುತ್ತಿತ್ತು. ಈ ವೇಳೆ ಆತ ಪೊಲೀಸ್ ಸಿಬ್ಬಂದಿಯೊಬ್ಬರ ಬಂದೂಕನ್ನು ಕಸಿದುಕೊಂಡು ಗುಂಡಿನ ದಾಳಿ ನಡೆಸಿದ್ದಾನೆ ಎನ್ನಲಾಗಿದೆ. ಇದಕ್ಕೆ ಪ್ರತಿಯಾಗಿ ಪೊಲೀಸರು ಗುಂಡಿನ ದಾಳಿ ನಡೆಸಿದ್ದು, ಆರೋಪಿ ಮೃತಪಟ್ಟಿದ್ದಾನೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಬರುಯಿಪು‌ರ್ ಪೊಲೀಸ್ ಠಾಣೆಯ ತನಿಖಾಧಿಕಾರಿ ಹಾಗೂ ಪೊಲೀಸ್ ತಂಡವು ಬುಧವಾರ ನಸುಕಿನ 12.45ರ ವೇಳೆಗೆ ಆರೋಪಿಯ ಜೊತೆಗೆ ಸೂರ್ಯಾಪುರ ಪ್ರದೇಶಕ್ಕೆ ತೆರಳಿತ್ತು. ಇದೇ ಸ್ಥಳದಲ್ಲಿ ಬಾಲಕಿಯ ಮೃತದೇಹ ಕೂಡಾ ಪತ್ತೆಯಾಗಿತ್ತು.

Advertisement

ಪ್ರಬಾಶ್ ಮಂಡಲ್ ಪ್ರಕರಣದ ಪ್ರಮುಖ ಆರೋಪಿಯಾಗಿದ್ದು, ಅತ್ಯಾಚಾರ ಮತ್ತು ಕೊಲೆ ಆರೋಪದ ಮೊದಲು ಸಿಸಿಟಿವಿ ದೃಶ್ಯಗಳಲ್ಲಿ ಬಾಲಕಿ ಜತೆಗೆ ಕಾಣಿಸಿಕೊಂಡಿದ್ದ ಎಂದು ಪೊಲೀಸ್ ಅಧಿಕಾರಿಗಳು ಹೇಳಿದ್ದಾರೆ.
ಅತ್ಯಾಚಾರ-ಕೊಲೆ ಪ್ರಕರಣದಲ್ಲಿ ವರದಿ ಸಲ್ಲಿಸುವಂತೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ ಮಂಗಳವಾರ ಪೊಲೀಸ್ ಮಹಾನಿರ್ದೇಶಕ ಸಿದ್ಧ ನಾಥ್ ಗುಪ್ತಾ ಅವರಿಗೆ ನಿರ್ದೇಶನ ನೀಡಿದ ಒಂದು ದಿನದ ನಂತರ ಈ ಬೆಳವಣಿಗೆ ನಡೆದಿದೆ.

ರವಿವಾರ 11 ವರ್ಷದ ಬಾಲಕಿಯ ಶವ ಪತ್ತೆಯಾದ ನಂತರ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಸಾರ್ವಜನಿಕ ಆಸ್ತಿಯನ್ನು ಧ್ವಂಸಗೊಳಿಸಿ, ಪೊಲೀಸ್ ವಾಹನಗಳು ಮತ್ತು ರೈಲ್ವೆ ಹಳಿಗಳನ್ನು ಹಾನಿಗೊಳಿಸಿದ ಸುಮಾರು 200 ಜನರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಅಧಿಕಾರಿ ಹೇಳಿದ್ದಾರೆ.

Advertisement
Advertisement

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಟಾಪ್ ಸುದ್ದಿಗಳು, ತಾಲೂಕು, ಬೆಳ್ತಂಗಡಿ

ಬೆಳ್ತಂಗಡಿ : ಗಣೇಶೋತ್ಸವ ಹಿನ್ನೆಲೆ ಶಾಂತಿ ಸಭೆ : ನಿಯಮ ಮೀರಿದರೆ ಅನುಮತಿ ರದ್ದು – ಕಾನೂನು ಕ್ರಮದ ಎಚ್ಚರಿಕೆ

ಕರಾವಳಿ, ಟಾಪ್ ಸುದ್ದಿಗಳು

ಕಾಸರಗೋಡು : ಜಿಂಕೆ ಬೇಟೆಯಾಡಿ ಮಾಂಸ ಸಾಗಿಸುತ್ತಿದ್ದ ಆರೋಪ – ಓರ್ವನ ಬಂಧನ

ಟಾಪ್ ಸುದ್ದಿಗಳು, ತಾಲೂಕು, ಬೆಳ್ತಂಗಡಿ

ಬೆಳ್ತಂಗಡಿ : ಮನೆಯ ಬಾವಿಗೆ ಹಾರಿ ಯುವತಿ ಆತ್ಮಹತ್ಯೆ