ಕೊಪ್ಪಳ : ವಸತಿ ನಿಲಯದಲ್ಲೇ ಮಗುವಿಗೆ ಜನ್ಮ ನೀಡಿದ 16 ವರ್ಷದ ಬಾಲಕಿ !

Advertisement

ಕೊಪ್ಪಳ : ವಸತಿ ನಿಲಯದಲ್ಲಿದ್ದುಕೊಂಡು, ಹತ್ತನೇ ತರಗತಿಯಲ್ಲಿ ಓದುತ್ತಿದ್ದ 16 ವರ್ಷದ ಬಾಲಕಿಯೊಬ್ಬಳು ಮಗುವಿಗೆ ಜನ್ಮ ನೀಡಿದ ಆಘಾತಕಾರಿ ಘಟನೆ ಕುಕನೂರು ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಕುಕನೂರು ತಾಲೂಕಿನ ಮೆಟ್ರಿಕ್ ಪೂರ್ವ ಬಾಲಕಿಯರ ವಸತಿ ನಿಲಯದಲ್ಲಿ ಈ ಘಟನೆ ನಡೆದಿದೆನ್ನಲಾಗಿದೆ. ಬಾಲಕಿಗೆ ಹೊಟ್ಟೆ ನೋವು ಕಾಣಿಸಿಕೊಂಡಿದ್ದು, ಬೆಳಗಿನ ಜಾವ ಆರು ಗಂಟೆ ಸುಮಾರಿಗೆ ವಸತಿ ಗೃಹದಲ್ಲೇ ಗಂಡುಮಗುವಿಗೆ ಜನ್ಮ ನೀಡಿದ್ದಾಳೆ. ಬಳಿಕ ತಾಯಿ- ಶಿಶುವನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ.

Advertisement

ಘಟನೆ ಬೆಳಕಿಗೆ ಬರುತ್ತಿದ್ದಂತೆ ಜಿಲ್ಲಾಸ್ಪತ್ರೆಗೆ ಜಿಲ್ಲಾಧಿಕಾರಿ ಸುರೇಶ್ ಇಟ್ನಾಳ್, ಜಿಪಂ ಸಿಇಒ ವರ್ಣೀತ್ ನೇಗಿ ಮತ್ತು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಾಮ್ ಅರಸಿದ್ಧಿ ಭೇಟಿ ನೀಡಿ ವಿಚಾರಿಸಿದ್ದಾರೆ. ಕುಕುನೂರು ಠಾಣಾ ಪೊಲೀಸರು ಪ್ರಕರಣದ ತನಿಖೆಯನ್ನು ಕೈಗೆತ್ತಿಕೊಂಡಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಮುಖ್ಯಮಂತ್ರಿಯ ಆರ್ಥಿಕ ಸಲಹೆಗಾರ ಮತ್ತು ಶಾಸಕ ಬಸವರಾಜ ರಾಯರಡ್ಡಿ, ಇದೊಂದು ಪೊಕ್ಕೋ ಪ್ರಕರಣವಾಗಿದ್ದು, ಪೊಲೀಸರು ಕಾನೂನು ಪ್ರಕಾರ ಕ್ರಮ ಕೈಗೊಳ್ಳುತ್ತಾರೆ. ಆರೋಪಿ ಯುವಕನನ್ನು ಈಗಾಗಲೇ ಪೊಲೀಸರು ಬಂಧಿಸಿದ್ದಾರೆ ಹಾಗೂ ವಸತಿ ನಿಲಯದ ವಾರ್ಡನ್ ನನ್ನು ಅಮಾನತು ಮಾಡಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.

Advertisement

Advertisement
Advertisement

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಟಾಪ್ ಸುದ್ದಿಗಳು, ತಾಲೂಕು, ಬೆಳ್ತಂಗಡಿ

ಬೆಳ್ತಂಗಡಿ : ಗಣೇಶೋತ್ಸವ ಹಿನ್ನೆಲೆ ಶಾಂತಿ ಸಭೆ : ನಿಯಮ ಮೀರಿದರೆ ಅನುಮತಿ ರದ್ದು – ಕಾನೂನು ಕ್ರಮದ ಎಚ್ಚರಿಕೆ

ಕರಾವಳಿ, ಟಾಪ್ ಸುದ್ದಿಗಳು

ಕಾಸರಗೋಡು : ಜಿಂಕೆ ಬೇಟೆಯಾಡಿ ಮಾಂಸ ಸಾಗಿಸುತ್ತಿದ್ದ ಆರೋಪ – ಓರ್ವನ ಬಂಧನ

ಟಾಪ್ ಸುದ್ದಿಗಳು, ತಾಲೂಕು, ಬೆಳ್ತಂಗಡಿ

ಬೆಳ್ತಂಗಡಿ : ಮನೆಯ ಬಾವಿಗೆ ಹಾರಿ ಯುವತಿ ಆತ್ಮಹತ್ಯೆ