ಕೊರಿಂಜ : ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರ ಆರೋಗ್ಯ ವೃದ್ಧಿಗಾಗಿ ವಿಶೇಷ ಪೂಜೆ

ಕೊರಿಂಜ : ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರ ಜನ್ಮದಿನದ ಪ್ರಯುಕ್ತ ಶ್ರೀ ಮಂಜುನಾಥೇಶ್ವರ ಭಜನ ಪರಿಷತ್ತ್, ತಾಲೂಕು ಭಜನಾ ಪರಿಷತ್ ಗುರುವಾಯನಕೆರೆ, ಶ್ರೀ ಪಂಚಲಿಂಗೇಶ್ವರ ದೇವಸ್ಥಾನ ಕೊರಿಂಜ ಮತ್ತು ಪ್ರಗತಿ ಬಂಧು ಒಕ್ಕೂಟ ಉರುವಾಲು ಇವುಗಳ ಸಹಕಾರದೊಂದಿಗೆ ಪೂಜ್ಯ ಖಾವಂದರಿಗೆ ಸದಾ ಮನಃಶಾಂತಿ, ಆರೋಗ್ಯ, ನೆಮ್ಮದಿ ಹಾಗೂ ಇನ್ನಷ್ಟು ಜನಪರ ಕಾರ್ಯಕ್ರಮಗಳನ್ನು ಮತ್ತು ಧಾರ್ಮಿಕ, ಸಾಮಾಜಿಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲು ಶಕ್ತಿಯನ್ನು ನೀಡುವಂತೆ ಶ್ರೀ ಪಂಚಲಿಂಗೇಶ್ವರ ದೇವಸ್ಥಾನ ಕೊರಿಂಜದಲ್ಲಿ ದೇವರಿಗೆ ವಿಶೇಷ ಪ್ರಾರ್ಥನೆ ಮತ್ತು ಭಜನೆಯನ್ನು ಮಾಡಲಾಯಿತು.

Advertisement

ದೇವಸ್ಥಾನದ ಪ್ರಧಾನ ಅರ್ಚಕರಾದ ಕಾರ್ತಿಕ್ ಹೆಗ್ಗಡೆಯವರು ಪೂಜೆಯನ್ನು ಮಾಡಿ ಶುಭ ಹಾರೈಸಿದರು. ಈ ಸಂದರ್ಭದಲ್ಲಿ ದೇವಸ್ಥಾನ ಆಡಳಿತ ಮೋಕ್ತೇಸರರಾದ ಯೋಗೀಶ್ ಪೂಜಾರಿ ಕಡ್ತಿಲ,ಪ್ರಗತಿ ಬಂಧು ಒಕ್ಕೂಟದ ಅಧ್ಯಕ್ಷರಾದ ಈಶ್ವರ ಗೌಡ,ಕಾರ್ಯದರ್ಶಿ ಆಶಾ, ಕುಣಿತ ಭಜನೆಯ ತರಬೇತಿದಾರರಾದ ಶ್ರೀ ನಾಗೇಶ್ ನೆರಿಯ, ಧ.ಗ್ರಾ.ಯೋ.ಸೇವಾ ಪ್ರತಿನಿಧಿ ಸೀತಾರಾಮ ಆಳ್ವ ಕೊರಿಂಜ, ಭಜನಾ ಮಂಡಳಿಯ ಕಾರ್ಯದರ್ಶಿ ಕೃಷ್ಣಪ್ಪ ನಾಯ್ಕ, ಗ್ರಾಮ ಪಂಚಾಯಿತಿ ಮಾಜಿ ಉಪಾಧ್ಯಕ್ಷೆ ಹಾಲಿ ಸದಸ್ಯೆ ಶ್ರೀ ಮತಿ ಜಲಜಾಕ್ಷಿ,ಭಜನಾ ಮಂಡಳಿ ಸದಸ್ಯ ರಾದ ಗಗನ್ ಕುಮಾರ್ , ಸುಪ್ರೀತ್ ನಾಯ್ಕ,ಚರಣ್, ಸತ್ಯನಾರಾಯಣ ಭಜನಾ ಮಂಡಳಿ ಸದಸ್ಯ ಗಣೇಶ ಗೌಡ ಬನಾರಿ, ವಿಘ್ನೇಶ್ವರ ಭಜನಾ ಮಂಡಳಿ ಸದಸ್ಯ ಪ್ರದೀಪ್ ನಾಯ್ಕ ಆನಡ್ಕ, ಸ್ವಸಹಾಯ ಸಂಘದ ಸದಸ್ಯರು, ದೇವಸ್ಥಾನ ಹಾಗೂ ವಿವಿಧ ಸಂಘಗಳ ಪದಾಧಿಕಾರಿಗಳು ಮತ್ತು ಭಜಕರು ಉಪಸ್ಥಿತರಿದ್ದರು.

Advertisement
Advertisement
Advertisement

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಟಾಪ್ ಸುದ್ದಿಗಳು, ರಾಜ್ಯ / ದೇಶ

ಹೊಸದಿಲ್ಲಿ : ರಾಮಮಂದಿರ ನಿರ್ಮಾಣಕ್ಕಾಗಿ ಬಂದ ದೇಣಿಗೆ ಹಣದಲ್ಲಿ ಅವ್ಯವಹಾರ ನಡೆದಿಲ್ಲ !

ಟಾಪ್ ಸುದ್ದಿಗಳು, ರಾಜ್ಯ / ದೇಶ

ಭಾರತದ ಅಧಿಕೃತ ನಕ್ಷೆಗಳಲ್ಲಿ ಅರುಣಾಚಲ ಪ್ರದೇಶದ 27 ಸ್ಥಳಗಳ ಸೇರ್ಪಡೆ – ಚೀನಾಗೆ ಶಾಕ್ !

ಕರಾವಳಿ, ಟಾಪ್ ಸುದ್ದಿಗಳು

ಉಡುಪಿ : ಕಾಂಗ್ರೆಸ್ ಮುಖಂಡ ಡೇವಿಡ್ ಶೂಟೌಟ್ ಪ್ರಕರಣ – ಆರೋಪಿ ಕಾಲಿಗೆ ಗುಂಡು ಹೊಡೆದು ಬಂಧಿಸಿದ ಪೊಲೀಸರು

⚠️ Contents are protected on this website.