ಕೋಟ : ಕ್ಷುಲ್ಲಕ ಕಾರಣಕ್ಕೆ ಸ್ನೇಹಿತನ ಕೊಲೆ ಪ್ರಕರಣ – ನಾಲ್ವರು ಆರೋಪಿಗಳು ಅಂದರ್

ಕೋಟ, ಡಿ.14 : ಎಣ್ಣೆ ಪಾರ್ಟಿ ಬಳಿಕ ಕ್ಷುಲ್ಲಕ ಕಾರಣಕ್ಕೆ ಸ್ನೇಹಿತನೋರ್ವನ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ನಾಲ್ವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಪಾರಂಪಳ್ಳಿ ಪಡುಕೆರೆಯ ದರ್ಶನ್(21), ಸಾಸ್ತಾನ ಪಾಂಡೇಶ್ವರದ ನೀರಾಡಿ ಜೆಡ್ಡುವಿನ ಕೌಶಿಕ್(21), ಕೋಟತಟ್ಟುವಿನ ಪಡುಕೆರೆಯ ಅಂಕಿತ್(19) ಮತ್ತು ಸುಜನ್(21) ಬಂಧಿತ ಆರೋಪಿಗಳು. ಬಂಧಿತ ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.

Advertisement

ಕೋಟತಟ್ಟು ಪಡುಕೆರೆಯಲ್ಲಿ ನಡೆದ ಸಂತೋಷ್ ಮೊಗವೀರ(30) ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಪೊಲೀಸರು ನಾಲ್ವರು ಆರೋಪಿಗಳನ್ನು ಬಂಧಿಸಿದ್ದಾರೆ. ಡಿ.14ರಂದು ಸಂಜೆ ವೇಳೆ ಸಂತೋಷ್ ಪೂಜಾರಿ, ಸಚಿನ್, ಚೇತನ್, ಕೌಶಿಕ್, ಸುಜನ್ ಮತ್ತು ದರ್ಶನ್ ಬಾರ್ನಲ್ಲಿ ಪಾರ್ಟಿ ಮುಗಿಸಿ ಪಡುಕೆರೆಯ ಸರ್ಕಲ್ ಗೆ ಬಂದು ಅಲ್ಲಿ ಊಟ ಮಾಡಿಕೊಂಡು ಮಾತನಾಡುತ್ತಿದ್ದರು. ದರ್ಶನ್ ಮತ್ತು ಕೌಶಿಕ್, ಅಂಕಿತ್ ಹಾಗೂ ಸುಜನ್, ಸಂತೋಷ್ ಅವರ ಕುಟುಂಬದ ವಿಚಾರದಲ್ಲಿ ಮತ್ತು ಮದ್ಯಪಾನದ ವಿಚಾರದಲ್ಲಿ ವಾಗ್ವಾದ ನಡೆದು ಅವಾಚ್ಯ ಶಬ್ದಗಳಿಂದ ಬೈದು, ಸಂತೋಷನಿಗೆ ನಾಲ್ಕು ಜನರು ಸೇರಿ ಹಲ್ಲೆ ನಡೆಸಿದರೆನ್ನಲಾಗಿದೆ.

ಹೊಡೆದಾಟದ ವೇಳೆ ದರ್ಶನ್, ಸಂತೋಷ್ ಕುತ್ತಿಗೆ ಹಿಂಬದಿಗೆ ಕೈಯಿಂದ ಬಲವಾಗಿ ಹೊಡೆದಿದ್ದಾನೆ. ಕೌಶಿಕ್ ಕೂಡಾ ಕೈಯಿಂದ ಹೊಡೆದಿದ್ದಾನೆ. ರಜತ್ ಇವರ ಜಗಳವನ್ನು ನಿಲ್ಲಿಸಿದ್ದಾರೆ. ಆದರೆ ಅಷ್ಟರಲ್ಲಿ ಹಲ್ಲೆಗಳೊಗಾದ ಸಂತೋಷ್ ಅಲ್ಲಿಯೇ ಕುಸಿದು ಬಿದ್ದರೆಂದು ತಿಳಿದುಬಂದಿದೆ. ಬಳಿಕ ಸಂತೋಷ್ ನನ್ನು ಬ್ರಹ್ಮಾವರ ಖಾಸಗಿ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದು, ಅಲ್ಲಿ ವೈದ್ಯರು ಪರೀಕ್ಷಿಸಿ ಸಂತೋಷ್ ಅದಾಗಲೇ ಮೃತಪಟ್ಟಿರುವುದಾಗಿ ತಿಳಿಸಿದ್ದಾರೆ. ಈ ಬಗ್ಗೆ ಕೋಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಟಾಪ್ ಸುದ್ದಿಗಳು, ತಾಲೂಕು, ಮಂಗಳೂರು

ಮಂಗಳೂರು : ಶಿವಮೊಗ್ಗದಿಂದ ಕೇರಳಕ್ಕೆ ಅಕ್ರಮವಾಗಿ ಜಾನುವಾರು ಸಾಗಾಟಕ್ಕೆ ಯತ್ನ – ಮೂವರ ಬಂಧನ

ಟಾಪ್ ಸುದ್ದಿಗಳು, ತಾಲೂಕು, ಬೆಳ್ತಂಗಡಿ

ಬೆಳ್ತಂಗಡಿ : ಮಾ. 4ರಿಂದ ಉರುವಾಲುಪದವು ಶಿವಾಜಿನಗರದ ಶ್ರೀ ಮಹಮ್ಮಾಯಿ ದೇವಿಯ ಪ್ರತಿಷ್ಠಾ ಮಹೋತ್ಸವ – ಹರೀಶ್ ಪೂಂಜಾ

ತಾಲೂಕು, ಮಂಗಳೂರು

ಮಂಗಳೂರು : ಲೈಟ್ ಕಂಬ ಮುರಿದು ಮೈಮೇಲೆ ಬಿದ್ದು ಮೀನು ಕಾರ್ಮಿಕ ಸಾವು

⚠️ Contents are protected on this website.