ಉಡುಪಿ : ತಲೆಗೆ ಚೊಂಬು ಸಿಲುಕಿ ಒದ್ದಾಡುತ್ತಿದ್ದ ಕೋತಿಯ ರಕ್ಷಣೆ

ಉಡುಪಿ, ಮಾ. 12 : ಕಳೆದ ಎರಡು ಮೂರು ದಿನಗಳಿಂದ ಕೋತಿಯೊಂದು ತಲೆಗೆ ಚೊಂಬು ಸಿಲುಕಿಕೊಂಡು ಒದ್ದಾಡುತ್ತಿತ್ತು. ಸಂಕಷ್ಟಕ್ಕೆ ಸಿಲುಕಿದ್ದ ಕೋತಿಯನ್ನು ಸ್ಥಳೀಯರು ಗಮನಿಸಿ, ರಕ್ಷಿಸಿದ ಘಟನೆ ಉಡುಪಿಯ ಪೆರ್ಣಂಕಿಲ ಗ್ರಾಮದ ಚಿತ್ರಬೈಲು ಎಂಬಲ್ಲಿ ಗುರುವಾರ ನಡೆದಿದೆ.

Advertisement

ಪರಿಸರದಲ್ಲಿ ಚೊಂಬು ತಲೆಗೆ ಹಾಕಿಕೊಂಡು ಒದ್ದಾಡುತ್ತಿದ್ದ ಕೋತಿಯನ್ನು ಸ್ಥಳಿಯ ಸಮಾಜ ಸೇವಕರು ಮತ್ತು ಪರಿಸರ ಪ್ರೇಮಿ ನವೀನ್ ಕುಮಾರ್ ಚಿತ್ರಬೈಲ್, ಸುಕೇಶ್, ಹರೀಶ ರಾಮ ಮತ್ತು ವಿಶ್ವನಾಥ ಎಂಬವರು ಗಮನಿಸಿದರು. ಕೂಡಲೇ ಕಾರ್ಯಪ್ರವೃತ್ತರಾದ ಅವರು ಕೋತಿಯನ್ನು ಹಗ್ಗ ಕಟ್ಟಿ ಹಿಡಿದು, ಚಿತ್ರಬೈಲು ಶ್ರೀ ಬ್ರಹ್ಮಲಿಂಗೇಶ್ವರ ದೇವಸ್ಥಾನದ ಪರಿಸರಕ್ಕೆ ಕೊಂಡೊಯ್ದಿದ್ದಾರೆ.

ಕೋತಿಯ ತಲೆಯನ್ನು ನೀರಿನಲ್ಲಿ ಒದ್ದೆ ಮಾಡಿ ಬಳಿಕ ನಾಜೂಕಾಗಿ ಚೊಂಬನ್ನು ತಲೆಯಿಂದ ಬೇರ್ಪಡಿಸಿದ್ದಾರೆ. ಚೊಂಬು ತೆಗೆದ ತಕ್ಷಣ ಕೋತಿ ಜಿಗಿದು ಓಡಿ ಪರಾರಿಯಾಗಿದೆ. ಸ್ಥಳೀಯ ಯುವಕರ ಈ ಕಾರ್ಯ ಎಲ್ಲರ ಮೆಚ್ಚುಗೆಗೆ ಪಾತ್ರವಾಗಿದೆ.

Advertisement
Advertisement

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಟಾಪ್ ಸುದ್ದಿಗಳು, ತಾಲೂಕು, ಬಂಟ್ವಾಳ

ಬಂಟ್ವಾಳ  : ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ನನ್ನು ನ್ಯಾಯಾಲಯಕ್ಕೆ ಹಾಜರು ಪಡಿಸಿದ ಪೊಲೀಸರು

ಟಾಪ್ ಸುದ್ದಿಗಳು, ರಾಜ್ಯ / ದೇಶ

ಬೆಂಗಳೂರು : ಮೋದಿ ಪೋಸ್ಟ್ ನಿರ್ಬಂಧ – ಕ್ಷಮೆಯಾಚಿಸಿದ ಟೆಕ್‌ ದೈತ್ಯ ಮೆಟಾ !

ಟಾಪ್ ಸುದ್ದಿಗಳು, ರಾಜ್ಯ / ದೇಶ

ಹೊಸದೆಹಲಿ : ಸಿಜೆಪಿ ಪ್ರತಿಭಟನೆಯಲ್ಲಿ 2,873 ಅಪರಾಧಿಗಳು – ಫೋಕ್ಸೋ, ಕೊಲೆ ಅಪರಾಧಿಗಳು ಭಾಗಿ !!

⚠️ Contents are protected on this website.