ಕೊಯ್ಯೂರು : ಮಳೆ ಹಾನಿ ಪ್ರದೇಶಕ್ಕೆ ರಕ್ಷಿತ್ ಶಿವರಾಂ ಭೇಟಿ – ಬೆಸ್ಟ್ ಫೌಂಡೇಶನ್ ವತಿಯಿಂದ ನೀರಿನ ಟ್ಯಾಂಕ್ ವಿತರಣೆ

ಕೊಯ್ಯೂರು, ಆ. 6 : ತಾಲೂಕಿನ ಕೊಯ್ಯೂರು ಗ್ರಾಮದ ಕೋಡಿಬೆಟ್ಟು ಪ್ರದೇಶಕ್ಕೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಭೇಟಿ ನೀಡಿ, ಇತ್ತೀಚಿನ ಭಾರೀ ಮಳೆಯಿಂದ ಉಂಟಾದ ಹಾನಿಯನ್ನು ಪರಿಶೀಲಿಸಿದರು.

Advertisement

ಕೋಡಿಬೆಟ್ಟು ನಿವಾಸಿ ಹೈದರ್ ಅವರ ಮನೆಗೆ ಮರ ಬಿದ್ದ ಪರಿಣಾಮ ಕುಡಿಯುವ ನೀರಿನ ಟ್ಯಾಂಕ್ ಸಂಪೂರ್ಣವಾಗಿ ಹಾನಿಗೊಳಗಾಗಿತ್ತು. ಈ ಹಿನ್ನೆಲೆಯಲ್ಲಿ ಬೆಸ್ಟ್ ಫೌಂಡೇಶನ್ ವತಿಯಿಂದ ಅವರಿಗೆ ಹೊಸ ನೀರಿನ ಟ್ಯಾಂಕ್ ವಿತರಿಸಿ ನೆರವು ನೀಡಲಾಯಿತು.

ಈ ಸಂದರ್ಭದಲ್ಲಿ ಕೆಪಿಸಿಸಿ ಅಲ್ಪಸಂಖ್ಯಾತ ಘಟಕದ ಪ್ರಧಾನ ಕಾರ್ಯದರ್ಶಿ ಪ್ರವೀಣ್ ಪೆರ್ನಾಂಡಿಸ್, ಮಾಜಿ ತಾಲೂಕು ಪಂಚಾಯತ್ ಸದಸ್ಯ ಪ್ರವೀಣ್ ಗೌಡ, ಪಕ್ಷದ ಮುಖಂಡ ಮಹಮ್ಮದ್ ಸಿದ್ದೀಕ್ ಮಲೆಬೆಟ್ಟು ಭೂತ್ ಸಮಿತಿ ಅಧ್ಯಕ್ಷ ಸಲೀಂ ಪಾತ್ರಾಲಾ, ಬೆಳ್ತಂಗಡಿ ಯುವ ಕಾಂಗ್ರೆಸ್ ಉಪಾಧ್ಯಕ್ಷ ಅರುಣ್ ಲೋಬೊ ಹಾಗೂ ನವೀನ್ ಗೌಡ ಉಪಸ್ಥಿತರಿದ್ದರು.

ಸ್ಥಳೀಯರ ಸಮಸ್ಯೆಗಳನ್ನು ಆಲಿಸಿದ ರಕ್ಷಿತ್ ಶಿವರಾಂ, ಮಳೆಯಿಂದ ಹಾನಿಗೊಳಗಾದ ಕುಟುಂಬಗಳಿಗೆ ಅಗತ್ಯ ನೆರವು ತಲುಪಿಸುವ ನಿಟ್ಟಿನಲ್ಲಿ ತಮ್ಮಿಂದ ಸಾಧ್ಯವಾದ ಸಹಕಾರ ನೀಡಲಾಗುವುದು ಎಂದು ಭರವಸೆ ನೀಡಿದರು.

Advertisement
Advertisement

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಟಾಪ್ ಸುದ್ದಿಗಳು, ತಾಲೂಕು, ಪುತ್ತೂರು

ಮಂಗಳೂರು :  ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣ – ಕೊಚ್ಚಿಯಲ್ಲಿ ಅಡಗಿದ್ದ ಆರೋಪಿಯ ಬಂಧನ

ಟಾಪ್ ಸುದ್ದಿಗಳು, ತಾಲೂಕು, ಪುತ್ತೂರು

ಪುತ್ತೂರು : ಆಕ್ಟಿವಾಗೆ ಢಿಕ್ಕಿ ಹೊಡೆದು ಅಂಗಡಿಗೆ ನುಗ್ಗಿದ ಲಾರಿ – ವಾಹನ, ಅಂಗಡಿಗೆ ಹಾನಿ

ಟಾಪ್ ಸುದ್ದಿಗಳು, ರಾಜ್ಯ / ದೇಶ

ನವದೆಹಲಿ : ಶೀಘ್ರದಲ್ಲಿ 2,000 ರೂ.ಗಿಂತ ಹೆಚ್ಚಿನ UPI ಪಾವತಿ ಮೇಲೆ ಶುಲ್ಕ? ಯಾರಿಗೆ ವಿನಾಯಿತಿ ?

⚠️ Contents are protected on this website.