ಬೆಂಗಳೂರು : ಕೆಪಿಸಿಸಿ ಕಚೇರಿಗೆ ಕಾಂಗ್ರೆಸ್ ಕಾರ್ಯಕರ್ತರಿಂದಲೇ ಮುತ್ತಿಗೆ – ಕೈ ನಾಯಕರು ಕಕ್ಕಾಬಿಕ್ಕಿ !

Advertisement

ಬೆಂಗಳೂರು, ಆ. 04 : ಡಿಕೆ ಶಿವಕುಮಾರ್ ಸಂಪುಟದಲ್ಲಿ ದಿನೇಶ್ ಗುಂಡೂರಾವ್‌ಗೆ ಸಚಿವ ಸ್ಥಾನ ಕೈತಪ್ಪಿದ ಹಿನ್ನೆಲೆ ಗಾಂಧಿನಗರ ಕಾರ್ಯಕರ್ತರು ಹಾಗೂ ನೂರಾರು ಅಭಿಮಾನಿಗಳು ಕೆಪಿಸಿಸಿ ಕಚೇರಿಗೆ ಮುತ್ತಿಗೆ ಹಾಕಿದ್ದಾರೆ.

Advertisement

ಕೆಪಿಸಿಸಿ ಕಚೇರಿ ಮುಂದೆ ದಿನೇಶ್ ಗುಂಡೂರಾವ್ ಬೆಂಬಲಿಗರು ಪ್ರತಿಭಟನೆ ನಡೆಸಿದ್ದಾರೆ. `ಜಸ್ಟೀಸ್ ಫಾರ್ ಲಾಯಲ್ಟಿ’ ಬೋರ್ಡ್‌ನಿಂದ ಬಂದಿರುವ ಗಾಂಧಿನಗರ ಕಾರ್ಯಕರ್ತರು ಅವಕಾಶ ನೀಡದ ಹೈಕಮಾಂಡ್ ವಿರುದ್ಧ ಘೋಷಣೆ ಕೂಗಿ ಆಕ್ರೋಶ ಹೊರಹಾಕಿದ್ದಾರೆ. ಮಹಿಳೆಯರು ಸೇರಿದಂತೆ ನೂರಾರು ಸಂಖ್ಯೆಯಲ್ಲಿ ದಿನೇಶ್ ಗುಂಡೂರಾವ್ ಅಭಿಮಾನಿಗಳು ಕಚೇರಿ ಮುಂದೆ ಜಮಾವಣೆಗೊಂಡು ಪ್ರತಿಭಟನೆ ನಡೆಸುತ್ತಿದ್ದಾರೆ.

Advertisement

ನಾವು ಸಾಮೂಹಿಕ ರಾಜೀನಾಮೆ ಕೊಡುತ್ತೇವೆ. ಕೂಡಲೇ ಸಚಿವ ಸ್ಥಾನ ಘೋಷಣೆ ಮಾಡಿ, ಇಲ್ಲ ನಮ್ಮ ರಾಜೀನಾಮೆಯನ್ನು ಪಡೆಯಿರಿ. ಸಚಿವ ಸ್ಥಾನ ಕೊಡಲ್ಲ ಅಂತ ಮೊದಲೇ ಹೇಳಬೇಕಿತ್ತು. ಯಾವ ಕಪ್ಪು ಚುಕ್ಕೆ ಇದೆ. ಪಾರದರ್ಶಕ ಆಡಳಿತ ನೀಡಿದ್ರು ಅನ್ಯಾಯ ಯಾಕೆ? ಎಂದು ಘೋಷಣೆ ಕೂಗಿ ಬೆಂಬಲಿಗರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅಲ್ಲದೇ ಕೆಪಿಸಿಸಿ ಕಚೇರಿಗೆ ಕಾರ್ಯಕರ್ತರು ಮುತ್ತಿಗೆ ಹಾಕಿದ್ದಾರೆ. ಬ್ಯಾರಿಕೇಡ್ ಹಾರಿ ಕಚೇರಿಗೆ ಕಾರ್ಯಕರ್ತರು ನುಗ್ಗಿದ್ದಾರೆ. ಕಚೇರಿಗೆ ಏಕಾಏಕಿ ಕಾರ್ಯಕರ್ತರು ನುಗ್ಗಿದ ಪರಿಣಾಮ ತಳ್ಳಾಟ ನಡೆದಿದೆ.

ಇನ್ನು ಅರ್ಚಕರ ಸಂಘದವರೂ ದಿನೇಶ್ ಗುಂಡೂರಾವ್ ಪರ ಬ್ಯಾಟಿಂಗ್ ಮಾಡಿದ್ದಾರೆ. ಈ ಬಾರಿ ಒಂದೇ ಒಂದು ಸ್ಥಾನ ಬ್ರಾಹ್ಮಣ ಸಮುದಾಯಕ್ಕೆ ಕೊಟ್ಟಿಲ್ಲ. ಯಾರಾದ್ರು ಒಬ್ಬ ಶಾಸಕರಿಗಾದರೂ ಅವಕಾಶ ಕೊಡಬೇಕಿತ್ತು. ಇದರಿಂದ ಸಮುದಾಯಕ್ಕೆ ಬೇಸರ ಆಗಿದೆ. ಇದೇ ಕಾರಣಕ್ಕೆ ಇಂದು ಕೆಪಿಸಿಸಿ ಕಚೇರಿಗೆ ನೂರಾರು ಸಂಖ್ಯೆಯಲ್ಲಿ ಮನವಿ ಸಲ್ಲಿಸಲು ಬಂದಿದ್ದೇವೆ. `ಬೇಕೆ ಬೇಕು ನ್ಯಾಯ ಬೇಕು, ನಿಷ್ಠಾವಂತ ಕಾರ್ಯಕರ್ತರಿಗೆ ಗೌರವ ಕೊಡಿ’ ಅಂತ ಘೋಷಣೆ ಕೂಗಿ ಆಕ್ರೋಶ ಹೊರಹಾಕಿದ್ದಾರೆ. ಇದನ್ನೂ ಓದಿ: ಸಚಿವ ಸಂಪುಟ ವಿಸ್ತರಣೆ ಬಗ್ಗೆ ಸಿದ್ದರಾಮಯ್ಯರಿಗೂ ಅಸಮಾಧಾನ ಇದೆ: ರಾಜೇಂದ್ರ ರಾಜಣ್ಣ

ಇನ್ನು ಸಚಿವ ಸ್ಥಾನ ಕೈತಪ್ಪಿದ ಹಿನ್ನೆಲೆ ಎಂ.ಕೃಷ್ಣಪ್ಪ ಅಭಿಮಾನಿಗಳು ಕೂಡ ಕೆಪಿಸಿಸಿ ಮುಂಭಾಗ ಜಮಾಯಿಸಿದ್ದಾರೆ. ಕೆಲ ವಿಜಯನಗರ ಭಾಗದ ಬೆಂಬಲಿಗರು ಹಾಗೂ ಎಂ ಕೃಷ್ಣಪ್ಪ ಹಾಗೂ ಪ್ರಿಯಕೃಷ್ಣ ಬೆಂಬಲಿಗರು ಆಗಮಿಸಿ ಧರಣಿ ನಡೆಸುತ್ತಿದ್ದಾರೆ. ಬ್ಲಾಕ್ ಅಧ್ಯಕ್ಷರು ಕಪ್ಪು ಪಟ್ಟಿ ಧರಿಸಿ ಬಂದು ಪ್ರತಿಭಟನೆ ನಡೆಸುತ್ತಿದ್ದಾರೆ. ಅಲ್ಲದೇ ಕಾಂಗ್ರೆಸ್‌ ಕಾರ್ಯಕರ್ತರು ಸರಣಿ ರಾಜೀನಾಮೆ ನೀಡಲು ಮುಂದಾಗಿದ್ದಾರೆ.

Advertisement
Advertisement

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಟಾಪ್ ಸುದ್ದಿಗಳು, ತಾಲೂಕು, ಬೆಳ್ತಂಗಡಿ

ಬೆಳ್ತಂಗಡಿ : ಗಣೇಶೋತ್ಸವ ಹಿನ್ನೆಲೆ ಶಾಂತಿ ಸಭೆ : ನಿಯಮ ಮೀರಿದರೆ ಅನುಮತಿ ರದ್ದು – ಕಾನೂನು ಕ್ರಮದ ಎಚ್ಚರಿಕೆ

ಕರಾವಳಿ, ಟಾಪ್ ಸುದ್ದಿಗಳು

ಕಾಸರಗೋಡು : ಜಿಂಕೆ ಬೇಟೆಯಾಡಿ ಮಾಂಸ ಸಾಗಿಸುತ್ತಿದ್ದ ಆರೋಪ – ಓರ್ವನ ಬಂಧನ

ಟಾಪ್ ಸುದ್ದಿಗಳು, ತಾಲೂಕು, ಬೆಳ್ತಂಗಡಿ

ಬೆಳ್ತಂಗಡಿ : ಮನೆಯ ಬಾವಿಗೆ ಹಾರಿ ಯುವತಿ ಆತ್ಮಹತ್ಯೆ