ಉಡುಪಿ : 27 ವರ್ಷದ ಮಾಡೆಲ್ ಕೃತಿ ಬಂಗೇರ ಆತ್ಮಹತ್ಯೆ – ಕಾರಣ ನಿಗೂಢ !

Advertisement

ಉಡುಪಿ, ಆ. 06 : ಕಲ್ಮಾಡಿಯ 27 ವರ್ಷದ ಮಾಡೆಲ್ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಘಟನೆ ಮಲ್ಪೆ ಪೊಲೀಸ್ ಠಾಣಾ ವ್ಯಾಪ್ತಿಯ ಕಲ್ಮಾಡಿಯಲ್ಲಿ ನಡೆದಿದೆ.

Advertisement

ಮೃತರನ್ನು ಕೃತಿ ಬಂಗೇರ (27) ಎಂದು ಗುರುತಿಸಲಾಗಿದ್ದು, ಈಕೆ ಮಾಡೆಲಿಂಗ್ ಕ್ಷೇತ್ರದಲ್ಲಿ ಹೆಸರು ಮಾಡಿದ್ದು, ನಗರದ ಕಡಿಯಾಳಿ ಬಳಿಯ ಖಾಸಗಿ ಹೋಟೆಲ್ ಒಂದರಲ್ಲಿ ಕೆಲಸ ಮಾಡುತ್ತಿದ್ದಳು. ಕಳೆದ ಸುಮಾರು ಐದು ತಿಂಗಳಿಂದ ಕೆಲಸಕ್ಕೆ ಹೋಗದೆ ಮನೆಯಲ್ಲೇ ಇದ್ದಳು ಎನ್ನಲಾಗಿದೆ. ಕಲ್ಮಾಡಿಯಲ್ಲಿ ತನ್ನ ತಾಯಿ ಮತ್ತು ಸಹೋದರಿಯೊಂದಿಗೆ ವಾಸಿಸುತ್ತಿದ್ದ ಕೃತಿ, ತನ್ನ ಕೋಣೆಯಲ್ಲಿ ವೇಲ್‌ ಮೂಲಕ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆಂದು ವರದಿಯಾಗಿದೆ.

Advertisement

ತಾಯಿ ರತ್ನಾ ಅವರು ಆ.6 ರಂದು ಕೆಲಸದ ನಿಮಿತ್ತ ಮಲ್ಪೆಗೆ ತೆರಳಿದ್ದರು. ಅವರ ಎರಡನೇ ಪುತ್ರಿಯೂ ಕೆಲಸದ ಕಾರಣ ಉಡುಪಿಗೆ ಹೋಗಿದ್ದರು. ಮಧ್ಯಾಹ್ನ ಸುಮಾರು 1 ಗಂಟೆಗೆ ಮನೆಗೆ ಹಿಂದಿರುಗಿದ ವೇಳೆ, ಕೃತಿ ತನ್ನ ತಾಯಿಯನ್ನು ಮನೆಯ ಹೊರಗೆ ಕಳುಹಿಸಿ ಒಳಗಿನಿಂದ ಬಾಗಿಲು ಹಾಕಿಕೊಂಡಿದ್ದರು. ಬಾಗಿಲು ತಟ್ಟಿದರೂ ಯಾವುದೇ ಪ್ರತಿಕ್ರಿಯೆ ಬರದ ಹಿನ್ನೆಲೆಯಲ್ಲಿ ಅವರು ತಮ್ಮ ಸಹೋದರ ಚಂದ್ರ ಅವರಿಗೆ ಕರೆ ಮಾಡಿ ಸ್ಥಳಕ್ಕೆ ಕರೆಸಿದ್ದಾರೆ.

ಬಳಿಕ ಬಾಗಿಲು ಒಡೆದು ಮನೆಯೊಳಗೆ ಪ್ರವೇಶಿಸಿದಾಗ, ಬೆಡ್‌ ರೂಮ್‌ನಲ್ಲಿ ಫ್ಯಾನ್‌ಗೆ ವೇಲ್ನಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಕೃತಿ ಮೃತರಾಗಿರುವುದು ಕಂಡುಬಂದಿದೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.

ಕಳೆದ ಕೆಲವು ದಿನಗಳಿಂದ ಅವರು ತೀವ್ರ ಒತ್ತಡದಲ್ಲಿದ್ದರು ಎಂದು ಕುಟುಂಬ ಸದಸ್ಯರು ತಿಳಿಸಿದ್ದಾರೆ. ಆಕೆಯ ಸಹೋದರಿ ನೀಡಿದ ದೂರಿನ ಆಧಾರದ ಮೇಲೆ ಮಲ್ಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Advertisement
Advertisement

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಟಾಪ್ ಸುದ್ದಿಗಳು, ತಾಲೂಕು, ಬೆಳ್ತಂಗಡಿ

ಬೆಳ್ತಂಗಡಿ : ಗಣೇಶೋತ್ಸವ ಹಿನ್ನೆಲೆ ಶಾಂತಿ ಸಭೆ : ನಿಯಮ ಮೀರಿದರೆ ಅನುಮತಿ ರದ್ದು – ಕಾನೂನು ಕ್ರಮದ ಎಚ್ಚರಿಕೆ

ಕರಾವಳಿ, ಟಾಪ್ ಸುದ್ದಿಗಳು

ಕಾಸರಗೋಡು : ಜಿಂಕೆ ಬೇಟೆಯಾಡಿ ಮಾಂಸ ಸಾಗಿಸುತ್ತಿದ್ದ ಆರೋಪ – ಓರ್ವನ ಬಂಧನ

ಟಾಪ್ ಸುದ್ದಿಗಳು, ತಾಲೂಕು, ಬೆಳ್ತಂಗಡಿ

ಬೆಳ್ತಂಗಡಿ : ಮನೆಯ ಬಾವಿಗೆ ಹಾರಿ ಯುವತಿ ಆತ್ಮಹತ್ಯೆ